ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2023-24ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2023-24ರ ಸಾಲಿನ ಸಾಧನಾ ಪ್ರಶಸ್ತಿಯನ್ನು ಬುಧವಾರ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಸಭೆಯಲ್ಲಿ ಪ್ರದಾನ ಮಾಡಲಾಯಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಎಸ್.ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ಎಸ್.ಬಿ.ಜಯರಾಮ ರೈ, ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಕೆ.ಹರಿಶ್ಚಂದ್ರ, ಎಂ.ಮಹೇಶ್ ಹೆಗ್ಡೆ, ಬಿ.ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ.ರೈ, ಕುಶಾಲಪ್ಪ ಗೌಡ ಪಿ., ಎಸ್. ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್‌ನ ಪ್ರತಿನಿಧಿ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್, ರಮೇಶ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಪ್ರ) ಗೋಪಾಲಕೃಷ್ಣ ಭಟ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ಸಲಹೆಗಾರ ಅಶೋಕ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
https://chat.whatsapp.com/Ge11n7QCiMj5QyPvCc0H19
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿದ್ದು, 2023-24ನೇ ಸಾಲಿನಲ್ಲಿ ದುಡಿಯುವ ಬಂಡವಾಳ 23,652.68 ಲಕ್ಷ ಹೊಂದಿದ್ದು, ರೂ. 3.30 ಕೋಟಿಗೂ ಮಿಕ್ಕಿ ಲಾಭ ಗಳಿಸಿದೆ. ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘಕ್ಕೆ ಸತತ ಆರು ಬಾರಿ `ಉತ್ತಮ ಸಹಕಾರಿ ಸಂಘ’ ರಾಜ್ಯ ಪ್ರಶಸ್ತಿ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದಿಂದ ಸತತ 10 ವರ್ಷಗಳಿಂದ ಇ-ಸ್ಟಾಂಪಿಂಗ್ ಸೇವೆಗೆ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ, ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ 9 ವರ್ಷಗಳಿಂದ “ವಿಮಾ ಪ್ರಶಸ್ತಿ”, 2019ನೇ ಸಾಲಿನ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”, ಯುವವಾಹಿನಿ ಕೇಂದ್ರ ಸಮಿತಿಯಿಂದ “ಯುವವಾಹಿನಿ ಸಾಧನಶ್ರೇಷ್ಠ” ಪ್ರಶಸ್ತಿ, ಹೊಸದಿಲ್ಲಿಯ ಇಕನಾಮಿಕ್ ಗ್ರೋತ್ ಫೌಂಡೇಶನ್‌ನಿಂದ “ಆವಾರ್ಡ್ ಫಾರ್ ಎಕ್ಸ್ಲೆನ್ಸ್ ಇನ್ ಬೆಸ್ಟ್ ಕೋ-ಆಪರೆಟೀವ್ ಸೊಸೈಟಿ” ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಈ ಎಲ್ಲ ಸಾಧನೆಯೊಂದಿಗೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತ 9 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ `ಸಾಧನಾ’ ಪ್ರಶಸ್ತಿ ಯನ್ನು ಪಡೆದಿರುವುದು ಸಂಘದ ಹೆಗ್ಗಳಿಕೆಯಾಗಿದೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಾಡುತ್ತಿರುವ ಸೇವೆ ಅನನ್ಯ. ಸಂಘದ ವಿಶೇಷತೆ ಎಂದರೆ ಶೇ.100ರಷ್ಟು ಹಿಂದುಳಿದ ವರ್ಗಕ್ಕೆ ಸೇರಿದ ಸಿಬ್ಬಂದಿಗಳು ಉದ್ಯೋಗದಲ್ಲಿದ್ದು, ಇದರಲ್ಲಿ ಶೇ.60ರಷ್ಟು ಏಕ ಪೋಷಕರನ್ನು ಹೊಂದಿದ್ದು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ಸ್ವಚ್ಚತಾ ಸಿಬ್ಬಂದಿಯವರೆಗೆ ಸಂಘದಲ್ಲಿ ಶೇ.95ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು ಮಹಿಳೆಯರ ಮುಖಾಂತರ ಸಂಘದ ವ್ಯವಹಾರ ನಡೆಸುತ್ತಿರುವುದು ಅನುಕರಣೀಯ. ಆತ್ಮಶಕ್ತಿ ಸಹಕಾರಿ ಸಂಘವು 71ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆ ಮೂಲಕ 580ಕ್ಕೂ ಮಿಕ್ಕಿ ಕಣ್ಣಿನ ಕ್ಯಾಟ್ರಾಕ್ಟ್ ಚಿಕಿತ್ಸೆ, ಉಚಿತ ಔಷಧಿ, ಶಸ್ತ್ರಚಿಕಿತ್ಸಾ ವೆಚ್ಚ ಹಾಗೂ 15,000ಕ್ಕೂ ಮಿಕ್ಕಿ ಕನ್ನಡಕವನ್ನೂ ಉಚಿತವಾಗಿ ವಿತರಿಸಿರುವುದಷ್ಟೇ ಅಲ್ಲದೇ ಉಚಿತ ಆರೋಗ್ಯ ಕಾರ್ಡನ್ನು ಬಡ ಕುಟುಂಬಗಳಿಗೆ ಪ್ರತಿವರ್ಷ ವಿತರಿಸಿದೆ. ಅಸಹಾಯಕ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿವರ್ಷ ಸರಕಾರಿ ಕಾಲೇಜುಗಳಿಗೆ ನೇರವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕಗಳನ್ನು ಪಾವತಿಸುತ್ತಿರುವುದು ಹೆಮ್ಮೆಯ ವಿಷಯ. ಅಶಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರೇರಣಾ ಶಿಬಿರವನ್ನು ಕಳೆದ 10 ವರ್ಷದಿಂದ ಆಯೋಜಿಸಿ ಸುಮಾರು 500 ಬಡ ಅರ್ಹ ವಿದ್ಯಾರ್ಥಿಗಳನ್ನು ಈ ಶಿಬಿರದಿಂದ ಆಯ್ಕೆ ಮಾಡಿ ಅವರಿಗೆ ಉಚಿತವಾಗಿ IA/KAS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸಲು ಉಚಿತ ತರಬೇತಿ ನೀಡುವುದರ ಜೊತೆಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಿಸುತ್ತಾ ಬರುತ್ತಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
ಇಮೇಲ್: sahakaraspandana@gmail.com
ಮಾಹಿತಿಗೆ: 9901319694