Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್‌ ಜನಸ್ನೇಹಿ ಸೇವೆ
    News

    ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್‌ ಜನಸ್ನೇಹಿ ಸೇವೆ

    adminBy adminAugust 17, 2024

    ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್‌ ಶ್ಲಾಘನೆ

    ಹಳೆಯಂಗಡಿ: ಇಲ್ಲಿನ ಪ್ರಿಯದರ್ಶಿನಿ ಕೋ ಅಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸೊಸೈಟಿ ಉಪಯೋಗಕ್ಕೆ ಖರೀದಿಸಿರುವ ನೂತನ ವಾಹನದ ಲೋಕಾರ್ಪಣೆ ಕಾರ್ಯಕ್ರಮ ಸೊಸೈಟಿ ಆವರಣದಲ್ಲಿ ಗುರುವಾರ ನಡೆಯಿತು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್ ನೂತನ ವಾಹನ ಲೋಕಾರ್ಪಣೆಗೊಳಿಸಿ ಮಾತನಾಡಿ, ಹಳೆಯಂಗಡಿಯಂತಹ ಗ್ರಾಮೀಣ ಪ್ರದೇಶದಲ್ಲಿ ಸೊಸೈಟಿಯು ಗ್ರಾಹಕರ ಜತೆ ಉತ್ತಮ ಒಡನಾಟದ ಜತೆಗೆ ಅಸಹಾಯಕರಿಗೆ ಸಹಾಯಹಸ್ತ ನೀಡುವ ಸಹಿತ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಇಂಥ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.
    ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಸೊಸೈಟಿ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಧನಂಜಯ ಮಟ್ಟು, ಜೆ.ಕೃಷ್ಣ ಕೋಟ್ಯಾನ್, ಗಣೇಶ್ ಅಮೀನ್ ಸಂಕಮಾರ್, ಉಮಾನಾಥ ಶೆಟ್ಟಿಗಾರ್, ಮಿರ್ಜಾ ಅಹಮದ್, ವಿಜಯ ಸನಿಲ್, ಹರೀಶ್ ಪುತ್ರನ್, ನವೀನ್ ಸಾಲ್ಯಾನ್‌ ಪಂಜ, ಗೌತಮ್ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಪ್ರಬಂಧಕರಾದ ಪ್ರಜ್ಞಶ್ರೀ ಚಿರಾಗ್, ಮೋಹನ್‌ದಾಸ್, ಕಾಂಗ್ರೆಸ್ ನಾಯಕ ಚಂದ್ರಹಾಸ ಸನಿಲ್ ಮೂಡುಬಿದಿರೆ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಹಳೆಯಂಗಡಿ ಪಂಚಾಯಿತಿ ಸದಸ್ಯರಾದ ಅಬ್ದುಲ್ ಅಜೀಜ್, ಅಬ್ದುಲ್ ಖಾದರ್, ಜಾಕ್ಸನ್ ಸಲ್ಡಾನ್ಹಾ, ಧರ್ಮಾನಂದ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.
    ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಪ್ರಬಂಧಕಿ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694

    H.Vasanth Bernad Haleyangadi Prathibha Kulayi Priyadarshini Co Operative Society Sahakara Spandana Shashendra Kumar Spandana Trust
    Previous Articleಪ್ರತಿಷ್ಠಿತ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಎಂ.ಎಸ್.ಗುರುರಾಜ್ ಅವಿರೋಧ ಪುನರಾಯ್ಕೆ
    Next Article ಶ್ರೀ ವಿಶ್ವಕರ್ಮ ಅರ್ಬನ್‌ ಕ್ರೆಡಿಟ್‌ ಸೌಹಾರ್ದ ಸಹಕಾರಿಯಲ್ಲಿ ಮಹಾಲಕ್ಷ್ಮೀ ಪೂಜೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.