ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಚಂದ್ರಶೇಖರ್ ಉಚ್ಚಿಲ್ ಅಭಿಪ್ರಾಯ
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ
ಉಳ್ಳಾಲ: ಕಾರ್ಮಿಕರ ಕೊರತೆ, ಮಳೆ ಹಾನಿ ಇತ್ಯಾದಿ ಕಾರಣಗಳಿಂದ ಎಲ್ಲ ಕಡೆ ಭತ್ತದ ಕೃಷಿ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಭತ್ತದ ಕೃಷಿಕರನ್ನು ಪ್ರೋತ್ಸಾಹಿಸುವ ಕಾರ್ಯ ಮಾಡಿರುವುದು ಶ್ಲಾಘನೀಯ ಕಾರ್ಯ. ಇದರ ಜೊತೆಗೆ ಶೈಕ್ಷಣಿಕ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರನ್ನು ಪ್ರೋತ್ಸಾಹಿಸತ್ತಿರುವುದು ಕೂಡ ಶ್ಲಾಘನೀಯ ಎಂದು ಗೆಜ್ಜೆಗಿರಿಯ ದೇಯಿ ಬೈದೆದಿ ಕೋಟಿ ಚೆನ್ನಯ್ಯರ ಮೂಲಕ್ಷೇತ್ರದ ಮೊಕ್ತೇಸರ ಚಂದ್ರಶೇಖರ್ ಉಚ್ಚಿಲ್ ಹೇಳಿದರು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಬೀರಿಯ ಪ್ರಧಾನ ಕಚೇರಿಯಲ್ಲಿ ಭಾನುವಾರ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳು ಸ್ಥಾಪನೆಯಾಗುವ ಮೊದಲೇ ಕೃಷಿ ಮತ್ತು ವ್ಯವಹಾರಗಳಿಗೆ ನೆರವಾಗುವ ಉದ್ದೇಶದಿಂದ ಸಹಕಾರಿ ಸಂಘಗಳ ಸ್ಥಾಪನೆಯಾಗಿದೆ. ಸುಬ್ಬಣ್ಣಯ್ಯ ಅವರು ಸ್ಥಳದಾನ ಮಾಡಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸ್ಥಾಪಿಸಿದ ಫಲವಾಗಿ ಇಂದು ಎಲ್ಲ ಕ್ಷೇತ್ರಗಳಲ್ಲೂ ಬ್ಯಾಂಕ್ ಹೆಮ್ಮರವಾಗಿ ಬೆಳೆಯಲು ಸಾಧ್ಯವಾಗಿದೆ. ಅವರ ತ್ಯಾಗವನ್ನು ಸ್ಮರಿಸಿ ಬ್ಯಾಂಕ್ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿವುದು ಉತ್ತಮ ಕಾರ್ಯ ಎಂದರು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ನಿರ್ದೇಶಕ ರಮೇಶ್ ಶೆಟ್ಟಿ ಬೋಳಿಯಾರು, ಬ್ಯಾಂಕ್‌ನ ಮಾಜಿ ಅಧ್ಯಕ್ಷ ಎಂ.ಎ.ಮಹಮ್ಮದ್ ಬಶೀರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿನಯ ಕುಮಾರ್ ನಾಯ್ಕ್, ಮಾಜಿ ಅಧ್ಯಕ್ಷ ಹರ್ಷರಾಜ್ ಮುದ್ಯ, ಸೋಮೇಶ್ವರ ಪುರಸಭೆ ಸದಸ್ಯೆ ಲತಾ, ಬ್ಯಾಂಕ್ ಉಪಾಧ್ಯಕ್ಷ ಕೆ.ಬಿ.ಅಬುಸಾಲಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಉಳ್ಳಾಲ್, ನಿರ್ದೇಶಕರಾದ ಗಂಗಾಧರ್ ಯು., ಕೃಷ್ಣಪ್ಪ ಸಾಲ್ಯಾನ್, ಉದಯಕುಮಾರ್ ಶೆಟ್ಟಿ, ಅರುಣ್ ಕುಮಾರ್ ಯು., ರಾಘವ ಆರ್. ಉಚ್ಚಿಲ್, ರಾಘವ ಸಿ. ಉಚ್ಚಿಲ್, ಪದ್ಮಾವತಿ ಎಸ್. ಶೆಟ್ಟಿ, ಸುರೇಖ ಚಂದ್ರಹಾಸ್, ಬಾಬು ನಾಯ್ಕ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
ಸಂತೋಷ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲೋಕಯ್ಯ ಪಾನೀರ್ ಸುರೇಖಾ ಚಂದ್ರಹಾಸ್ ಸಹಕರಿಸಿದರು.
ಸೆ.15ಕ್ಕೆ ಕೆ.ಸುಬ್ಬಣ್ಣಯ್ಯ ಸ್ಮಾರಕ ಸೌಧ ಉದ್ಘಾಟನೆ
ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು. ಮಾತನಾಡಿ 1954ರಲ್ಲಿ ಸುಬ್ಬಣ್ಣಯ್ಯ ನಾಯಕ್ ಸ್ಥಾಪಿಸಿದ ಬ್ಯಾಂಕ್ ಸಾಮಾಜಿಕ ಕಳಕಳಿಯ ಕಾರ್ಯವನ್ನು ನಡೆಸುತ್ತಾ ಬಂದಿದೆ. ಭತ್ತ ಕೃಷಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ಎಕರೆಗೆ 5000 ರೂ. ಸಹಾಯಧನ ವಿತರಿಸಲಾಗುತ್ತಿದೆ. ಅಡಿಕೆ ಬೆಳೆಯುವ ರೈತರಿಗೆ ಉಚಿತ ಸುಣ್ಣ ನೀಡುವ ಯೋಜನೆಗೆ ಚಾಲನೆ ನೀಡಿದೆ. ಇದೀಗ ಹೊಸಮೈಲಿಗಲ್ಲನ್ನು ಸ್ಥಾಪಿಸಿ ಕೋಟೆಕಾರು ಬೀರಿಯಲ್ಲಿ ಐದು ಮಹಡಿಯ ಕೆ.ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧ ಸ್ಥಾಪಿಸಿ ಸೆ.15ರಂದು ಉದ್ಘಾಟನಾ ಸಮಾರಂಭ ಜರಗಲಿದೆ ಎಂದು ಮಾಹಿತಿ ನೀಡಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com