ನವದೆಹಲಿ: ಸಹಕಾರ ಸಚಿವಾಲಯದ ಸಹಕಾರ ಸಂಘಗಳ ಕೇಂದ್ರ ರಿಜಿಸ್ಟ್ರಾರ್ (ಸಿಆರ್‌ಸಿಎಸ್) ಆಗಿ ಕೇರಳ ಕೇಡರ್‌ನ 1997ರ ಬ್ಯಾಚ್‌ನ ಐಎಎಸ್ ಅಧಿಕಾರಿ ರವೀಂದ್ರ ಕುಮಾರ್ ಅಗರ್ವಾಲ್ ನೇಮಕಗೊಂಡಿದ್ದಾರೆ.
https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
ಅಗರ್ವಾಲ್ ಸಿಆರ್‌ಸಿಎಸ್‌ನ ನೂತನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದು ಇವರು, ಆನಂದ್ ಕುಮಾರ್ ಝಾ(ಅರಣ್ಯಾಧಿಕಾರಿ) ಅವರ ಸ್ಥಾನ ತುಂಬಲಿದ್ದಾರೆ. ಆಗರ್ವಾಲ್ ಆಗಸ್ಟ್ ಮೊದಲ ವಾರದಲ್ಲಿ ಸಹಕಾರ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇರ್ಪಡೆಯಾಗಿದ್ದರು. ಇದಾದ ಕೆಲವೇ ದಿನಗಳಲ್ಲಿ ಕೇಂದ್ರ ರಿಜಿಸ್ಟ್ರಾರ್ ಆಗಿ ನೇಮಕಗೊಂಡಿದ್ದು ಸಹಕಾರ ಸಂಘಗಳ ಕಾರ್ಯಚಟುವಟಿಕೆಗಳ ವಿಸ್ತರಣೆಯ ಮಹತ್ವದ ಜವಾಬ್ದಾರಿ ಹೊರಲಿದ್ದಾರೆ.
1999ರಲ್ಲಿ ಸಬ್ ಡಿವಿಜನಲ್ ಮ್ಯಾಜಿಸ್ಟ್ರೇಟ್ ಆಗಿ ಕೆಲಸ ಆರಂಭಿಸಿದ್ದ ಇವರು, 2001ರಲ್ಲಿ ಕೇರಳ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಇದೇ ಅವಧಿಯಲ್ಲಿ ಅವರು ಬೇಕಲ್ ರೆಸಾರ್ಟ್ಸ್ ಡೆವಲಪ್‌ಮೆಂಟ್ ಕಾರ್ಪೊರೇಶನ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿಯೂ ಕೆಲಸ ಮಾಡಿದ್ದರು. ನಗರಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಣಕಾಸು ಮತ್ತು ನೀರಾವರಿ ಇಲಾಖೆಗಳಲ್ಲೂ ಕೆಲಸ ಮಾಡಿದ್ದರು. ಕೇರಳ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕಮಿಷನರ್, ಕೇರಳ ಹಣಕಾಸು ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com