Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಮಂಗಳಾಜ್ಯೋತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್
    News

    ಶ್ರೀ ಮಂಗಳಾಜ್ಯೋತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್

    adminBy adminAugust 30, 2024

    29ನೇ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ, 29.37 ಲಕ್ಷ ರೂಪಾಯಿ ಲಾಭ

    ಮಂಗಳೂರು: ಶ್ರೀ ಮಂಗಳಾಜ್ಯೋತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ, ಬಿಜೈ, ಮಂಗಳೂರು ಇದರ 29ನೇ ವಾರ್ಷಿಕ ಮಹಾಸಭೆ ಹಾಗೂ 2023-24 ನೇ ಸಾಲಿನ ವಾರ್ಷಿಕ ವರದಿ ಮಂಡನೆ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಭಾನುವಾರ ಮಂಗಳೂರು ಪೊಲೀಸ್‌ ಲೈನ್‌ನ “ನಾಸಿಕ್ ಬಿ.ಹೆಚ್. ಬಂಗೇರ ಸಭಾಭವನ”ದಲ್ಲಿ ನಡೆಯಿತು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    2023 – 24ರ ಸಾಲಿಗೆ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಸಂಘದ ಲೆಕ್ಕಪರಿಶೋಧನೆಯನ್ನು ಸಿಎ ಸುಜಯ ಡಿ. ಆಳ್ವ ಮಾಡಿಕೊಟ್ಟಿದ್ದು, ವರದಿ ವರ್ಷ ಸಂಘವು 98 ಕೋಟಿ ವ್ಯವಹಾರ ಮಾಡಿದ್ದು, 29.37 ಲಕ್ಷ ರೂ. ಲಾಭ ಗಳಿಸಿದೆ. ಬಿಜೈ ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೇವೆ ಆರಂಭಿಸಲಾಗಿದೆ. ಲೆಕ್ಕಪರಿಶೋಧನೆಯಲ್ಲಿ ಪ್ರತಿ ವರ್ಷದಂತೆ ” ಎ” ಶ್ರೇಣಿ ಪಡೆದುಕೊಂಡಿದೆ. ಅದೇ ರೀತಿ 2023 -24ರಲ್ಲಿ ಠೇವಣಿ ಸಂಗ್ರಹದಲ್ಲಿ ಶೇ.20 ಮತ್ತು ಸಾಲ ವಿತರಣೆಯಲ್ಲಿ ಶೇ.37.5 ಅಭಿವೃದ್ಧಿ ಸಾಧಿಸಿದ್ದು, ಸದಸ್ಯರ ಬೇಡಿಕೆಗೆ ಸ್ಪಂದಿಸಿ ವ್ಯವಹಾರ ನಡೆಸುತ್ತಿದೆ ಎಂದು ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್ ತಿಳಿಸಿದರು.


    ಕಾರ್ಯದರ್ಶಿ ಉದಯ ಆರ್ ವಾರ್ಷಿಕ ವರದಿ ಮಂಡಿಸಿದರು. ಸಂಘದ ವತಿಯಿಂದ ಸದಸ್ಯರ ಮಕ್ಕಳಿಗೆ ವಿದ್ಯಾ ಪ್ರೋತ್ಸಾಹಧನ ವಿತರಿಸಲಾಯಿತು. ಉತ್ತಮವಾಗಿ ಕಾರ್ಯನಿರ್ವಹಿಸಿದ ಪಿಗ್ಮಿ ಸಂಗ್ರಾಹಕರು ಮತ್ತು ಸಿಬ್ಬಂದಿಗಳನ್ನು ಗೌರವಿಸಲಾಯಿತು. ಸಂಘದ ನಿರ್ದೇಶಕರಾದ ಜೀವನ್ ಕುಮಾರ್ ಸ್ವಾಗತಿಸಿದರು. ಭೋಜ ಯು.ಮೂಲ್ಯ ಧನ್ಯವಾದ ಸಲ್ಲಿಸಿದರು. ಉಪಾಧ್ಯಕ್ಷ ಭೋಜ ಎಸ್. ಕುಲಾಲ್, ನಿರ್ದೇಶಕರಾದ ವಿಶ್ವನಾಥ ಬಂಗೇರ, ಎಂ.ಪಿ. ಬಂಗೇರ, ಸುರೇಶ್ ಕೆ.ಕುಲಾಲ್, ಶಕುಂತಳಾ ಬಿ., ಪ್ರಮೀಳಾ ಎ.ಸಾಲ್ಯಾನ್ ಮತ್ತು ವೃತ್ತಿಪರ ನಿರ್ದೇಶಕ ಮೋಹನ್ ದಾಸ್ ಬಿ. ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Cooperative Dividend E Stamping Sahakara Spandana Shree Mangalajyothi Vividhoddesha Sahakari Sangha Bejia Souharda Sahakari Spandana Cooperative Spandana NEws
    Previous Articleಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯಿಂದ ಬಡ ಅಂಗವಿಕಲರಿಗೆ ವೀಲ್‌ಚೇರ್‌ ಉಚಿತ ವಿತರಣೆ
    Next Article ಚಂದ್ರಕಿಶೋರ್‌ ಜೈಸ್ವಾಲ್, ರೇಣು‌ ಯಾದವ್‌ ಅವರಿಗೆ ಪ್ರತಿಷ್ಠಿತ ಇಫ್ಕೋ ಸಾಹಿತ್ಯ ಪುರಸ್ಕಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.