ಸಹಕಾರ ಸಚಿವಾಲಯದ ಹಿರಿಯ ಅಧಿಕಾರಿಗಳ ಮಾಹಿತಿ
ನವದೆಹಲಿ: ಕೇಂದ್ರ ಸರ್ಕಾರದ ನೂತನ ಸಹಕಾರಿ ನೀತಿಯು ಬಹುತೇಕ ಅಂತಿಮಗೊಂಡಿದ್ದು, ಇನ್ನೆರಡು -ಮೂರು ತಿಂಗಳಲ್ಲಿ ಘೋಷಣೆಯಾಗಲಿದೆ ಎಂದು ಸಹಕಾರ ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ.
ನಾವು ಸಹಕಾರಿ ನೀತಿ ರೂಪಣೆಯ ಅಂತಿಮ ಹಂತದಲ್ಲಿದ್ದೇವೆ. ಮುಂದಿನ 2-3 ತಿಂಗಳಲ್ಲಿ ಇದು ಮಂಡನೆಯಾಗಲಿದೆ ಎಂದು ಸಹಕಾರ ಸಚಿವಾಲಯದ ಕಾರ್ಯದರ್ಶಿ ಆಶಿಶ್ ಕುಮಾರ್ ಭೂತಾನಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ನೇತೃತ್ವದ 47 ಮಂದಿಯ ತಂಡ ರಾಷ್ಟ್ರೀಯ ಸಹಕಾರಿ ನೀತಿಯನ್ನು ರೂಪಿಸಿದೆ. ಇದನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಭೂತಾನಿ ಮಾಹಿತಿ ನೀಡಿದರು.
ದೇಶಾದ್ಯಂತ 65,000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮುಂದಿನ ಫೆಬ್ರವರಿಯೊಳಗೆ ಕಂಪ್ಯೂಟರೀಕರಣಗೊಳ್ಳಲಿದೆ ಎಂದೂ ಅವರು ಮಾಹಿತಿ ನೀಡಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com