Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉಡುಪಿ ಸಿಂಡಿಕೇಟ್‌ ಕ್ರೆಡಿಟ್‌ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯಿಂದ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿ ವಿತರಣೆ
    News

    ಉಡುಪಿ ಸಿಂಡಿಕೇಟ್‌ ಕ್ರೆಡಿಟ್‌ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯಿಂದ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿ ವಿತರಣೆ

    adminBy adminSeptember 13, 2024

    ಶಿರ್ವ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.


    ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ಮಾನಸ ಶಾಲೆಯ ಅಧ್ಯಕ್ಷರಿಗೆ ದಿನಸಿ ವಸ್ತುಗಳನ್ನು ಹಸ್ತಾಂತರಿಸಿ ಮಾತನಾಡಿ, ಇಂತಹ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ಮೂಲ ಪ್ರೇರಣೆ ಮತ್ತು ಮುಖ್ಯ ಉದ್ದೇಶ ದಿ.ಫಾ.ವಲೇರಿಯನ್ ಮೆಂಡೋನ್ಸಾ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಮಾಜಮುಖಿ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ ಆಗಲುವಿಕೆ ನನಗೆ ತುಂಬಲಾಗದ ನಷ್ಟ ಮಾಡಿದೆ. ಅದರ ಸಲುವಾಗಿ ಈ ಕಾರ್ಯಕ್ರಮದ ಎಲ್ಲ ಶ್ರೇಯಸ್ಸು ದಿ.ಫಾ.ವಲೇರಿಯನ್ ಮೆಂಡೋನ್ಸಾ ಇವರಿಗೆ ಅರ್ಪಿಸುತ್ತೇನೆ. ಅವರಿಗೆ ಗೌರವ ಸಮರ್ಪಣೆಯಿಂದ ನಾವು ಇಂದು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸ್ಥಳೀಯ ಹೋಲಿಕ್ರಾಸ್ ದೇವಾಲಯ ಪಾಂಬೂರು ಇಲ್ಲಿಯ ಪ್ರಧಾನ ಧರ್ಮಗುರುಗಳಾದ ಫಾ.ಹೆನ್ರಿ ಮಸ್ಕರೇನ್ಹಸ್ ಮಾತನಾಡಿ, ಸಂಸ್ಥೆಯು ಮೊದಲ ವರ್ಷದಲ್ಲಿ ಸಾಮಾಜಿಕ ಸೇವೆಗೆ ಸಿದ್ಧರಾಗಿರುವುದು ಸಂತಸದ ಸಂಗತಿ ಮತ್ತು ಇಂತಹ ದೇವರ ಮಕ್ಕಳ ಕಲ್ಯಾಣ ಅಭಿವೃದ್ಧಿಯಿಂದ ಸಂಸ್ಥೆಗೆ ಒಳಿತಾಗಲಿ ಎಂದು ಶುಭ ಹಾರೈಸಿದರು.


    ರೋಟರಿ ಕ್ಲಬ್ ಕಾರವಾರ ಅಧ್ಯಕ್ಷ ಶೈಲೇಶ್ ಆರ್.ಹಲ್ದೀಪುರ, ಸಾಮಾಜಿಕ ಕಾರ್ಯಕರ್ತ ಸ್ಟೀವನ್ ಕುಲಾಸೊ ಮಾತನಾಡಿ, ಸಂಸ್ಥೆಯು ವಿಶೇಷ ಮಕ್ಕಳ ಕಲ್ಯಾಣದ ಬಗ್ಗೆ ಕಾಳಜಿ ವಹಿಸಿರುವುದು ನಿಜಕ್ಕೂ ಮೆಚ್ಚುವಂಥದ್ದು ಎಂದು ಶುಭ ಹಾರೈಸಿದರು. ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಗ್ರಾಹಕರಾದ ಫೆಲಿಕ್ಸ್ ಫೆರ್ನಾಂಡಿಸ್, ಮೇರಿ ಡಿಸೋಜ ಮತ್ತು ಸೀಮಾ ಎಸ್‌. ಹಲ್ದೀಪುರ, ಡಾ.ಎಡ್ವರ್ಡ್ ಲೋಬೊ, ಮುಖ್ಯ ಶಿಕ್ಷಕಿ ವಿನ್ನಿ ಗೊನ್ಸಾಲ್ವಿಸ್‌ ಉಪಸ್ಥಿತರಿದ್ದರು.
    ಮಾನಸ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಹೆನ್ರಿ ಮಿನೇಜಸ್ ಸ್ವಾಗತಿಸಿದರು. ಶಿಕ್ಷಕಿ ರೀಮಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಶಾಖಾ ವ್ಯವಸ್ಥಾಪಕರಾದ ಫೆಲ್ಸಿ ಡಿಸೋಜ ವಂದಿಸಿದರು. ಸಂಸ್ಥೆಯ ಲೆಕ್ಕ ವ್ಯವಸ್ಥಾಪಕರಾದ ಕುಮಾರ್ ಹೆಚ್.ಎನ್, ಕಿರಿಯ ಸಹಾಯಕರಾದ ದೀಕ್ಷಿತ್ ನಾಯ್ಕ್, ಪರಿಚಾರಕರಾದ ವಿವಿಯನ್ ಮರ್ವಿನ್ ನೊರೋನ್ಹ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Registrar Holycross Church Pamburu Jeevan Dsouza Manasa Special Childrens Scholl Pamburu Sahakara Spandana Shirva Spandana Spandana Cooperative Spandana NEws Spandana Trust Udupi Syndicate Credit Souharda Cooperative Society
    Previous Articleಸಹಕಾರ ವಲಯದಲ್ಲೇ ವಿಭಿನ್ನ ಯೋಜನೆ, ಮಾನವೀಯ ಕಾರ್ಯಕ್ಕೆ ಉತ್ತಮ ನಿದರ್ಶನ
    Next Article ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ರೂ. 19.14 ಲಕ್ಷ ವಾರ್ಷಿಕ ಲಾಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.