ಉಚಿತ ದಂತ ತಪಾಸಣೆ, ಚಿಕಿತ್ಸಾ ಶಿಬಿರ ಉದ್ಘಾಟಿಸಿ ಹರೀಶ್ ಪಿ.ಡಿ ಅಭಿಪ್ರಾಯ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ೧೩ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಪಡೀಲ್ ಬೈರಾಡಿಕೆರೆ ಹತ್ತಿರದ “ಆತ್ಮಶಕ್ತಿ ಸೌಧ”ದಲ್ಲಿ ಜರುಗಿತು.
ಸಂಘದ ಸದಸ್ಯ ಹರೀಶ್ ಪಿ.ಡಿ ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿ ಮೂಡಿಸುವಲ್ಲಿ ಸಫಲತೆ ಕಂಡಿದೆ ಎಂದು ಅಭಿಪ್ರಾಯಪಟ್ಟರು.
ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್‌ನ ದಂತವೈದ್ಯರಾದ ಡಾ.ಶಿಫಾಲಿ ಸಾಲಿಯಾನ್ ಮಾತನಾಡಿ, ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು ಮುಂತಾದ ಸೇವೆಗಳು ಲಭ್ಯವಿದ್ದು, ಸಂಘದ ಸದಸ್ಯರು ಇದರ ಸದುಪಯೋಗ ಪಡೆಯುವಂತೆ ವಿನಂತಿಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭ ಸಂಘದ ಸದಸ್ಯರಿಗೆ ಆರೋಗ್ಯ ಶಿಬಿರ ಏರ್ಪಡಿಸುತ್ತ್ತ ಬಂದಿದ್ದು, ಇದು ಸಂಘದ ೭೩ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಈ ಶಿಬಿರವು ಸಂಘದ ಸದಸ್ಯರಿಗೆ ತುಂಬ ಪ್ರಯೋಜನಕಾರಿಯಾಗಿದೆ. ಸಂಘದ ಸದಸ್ಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಇಂತಹ ಆರೋಗ್ಯ ಶಿಬಿರ ಏರ್ಪಡಿಸಲು ಸಹಕರಿಸುತ್ತಿರುವ ಶ್ರೀನಿವಾಸ್ ಆಸ್ಪತ್ರೆಯ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೆ ಕೃತಜ್ಞತೆಗಳು. ಹಬ್ಬಗಳ ಪ್ರಯುಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರ ಶೇ. ೧೦.೫ ನ್ನು ನೀಡಲಾಗುತ್ತಿದ್ದು ಹಾಗೂ ಗ್ರಾಹಕರಿಗೆ ಯಾವುದೇ ಸೇವಾ ಶುಲ್ಕವಿಲ್ಲದೇ ಪ್ರತಿ ಗ್ರಾಂ ಗೆ ಗರಿಷ್ಟ ಚಿನ್ನಾಭರಣ ಸಾಲ ನೀಡಲಾಗುತ್ತಿದೆ ಎಂದು ತಿಳಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ಜಿ. ಪರಮೇಶ್ವರ ಪೂಜಾರಿ, ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಚಂದ್ರಹಾಸ ಮರೋಳಿ, ಮುದ್ದು ಮೂಡುಬೆಳ್ಳೆ, ಬಿ.ಪಿ. ದಿವಾಕರ್, ಗೋಪಾಲ್ ಎಮ್., ಚಂದ್ರಾವತಿ, ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಸಂಘದ ಸದಸ್ಯರಾದ ಸದಾನಂದ ಪೂಜಾರಿ, ಜಗದೀಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಸಹಾಯಕ ಪ್ರಬಂಧಕ ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com