Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಸವ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘಕ್ಕೆ 1.14 ಕೋಟಿ ರೂ. ಲಾಭ
    News

    ಬಸವ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘಕ್ಕೆ 1.14 ಕೋಟಿ ರೂ. ಲಾಭ

    adminBy adminSeptember 23, 2024

    ಅತ್ಯಂತ ವೇಗವಾಗಿ ಅಭಿವೃದ್ಧಿ, ರಾಜ್ಯಮಟ್ಟದ ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿ

    ಬೆಳಗಾವಿ: ಬಸವ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ ಬೈಲಹೊಂಗಲ ಇದರ 11ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಹೊಸೂರ್ ರಸ್ತೆಯ ವಿಜಯ್ ಸೋಶಿಯಲ್ ಕ್ಲಬ್‌ನಲ್ಲಿ ಜರುಗಿತು.

    https://chat.whatsapp.com/Ge11n7QCiMj5QyPvCc0H19


    ಸಹಕಾರಿಯ ಸಂಸ್ಥಾಪಕ ವಿಜಯ ಶ್ರೀಶೈಲ್ ಮೆಟಗುಡ್ ಮಾತನಾಡಿ, ಈ ಸಹಕಾರಿಯು ಕಡಿಮೆ ಅವಧಿಯಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು ಇದನ್ನು ಗುರುತಿಸಿ ರಾಜ್ಯಮಟ್ಟದ ಉತ್ತಮ ಸೌಹಾರ್ದ ಸಹಕಾರಿ ಸಂಘವೆಂದು ಕಳೆದ ಸಾಲಿನಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ಬರುವ ವರ್ಷಗಳಲ್ಲಿ ಸಹಕಾರಿಯ ಎಲ್ಲ ಅಹ೯ ಸದಸ್ಯರಿಗೆ ಆರೋಗ್ಯ ವಿಮೆ ಮಾಡಿಸಲಾಗುವುದು, ಅದೇ ರೀತಿ ರೈತ ವರ್ಗಕ್ಕೆ ಅನುಕೂಲವಾಗುವಂತ ಸಾಲ ಸೌಲಭ್ಯ ವಿತರಿಸಲಾಗುವುದೆಂದು ತಿಳಿಸಿದರು.


    ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಹಕಾರಿ ಮಾರ್ಗದರ್ಶಕ ಹಾಗೂ ಮಾಜಿ ಶಾಸಕ ಜಗದೀಶ್ ಸಿ.ಮೆಟಗುಡ್ಡ ಮಾತನಾಡಿ ಬಸವ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘವು ತಮ್ಮ ಸದಸ್ಯರಿಗೆ ಅತ್ಯುತ್ತಮ ಸೌಲಭ್ಯಗಳನ್ನು ನೀಡುತ್ತಿದ್ದು ಕಡಿಮೆ ಅವಧಿಯಲ್ಲಿ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಪ್ರಗತಿ ಹೊಂದಿದ್ದು ಸಂತೋಷದ ವಿಷಯ ಎಂದು ತಿಳಿಸಿದರು.


    ಅಧ್ಯಕ್ಷತೆ ವಹಿಸಿದ್ದ ಸಹಕಾರಿ ಅಧ್ಯಕ್ಷ ಶಿವಾನಂದ ಬಡ್ಡಿಮನಿ ಮಾತನಾಡಿ, ಈ ವರ್ಷ 1.14 ಕೋಟಿ ರೂ. ಲಾಭ ಹೊಂದಿದ್ದು, ಸದಸ್ಯರಿಗೆ 10% ಡಿವಿಡೆಂಟ್ ನೀಡಲಾಗುವುದು. ಬರುವ ದಿನಗಳಲ್ಲಿ ಸದಸ್ಯರಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಲು ಒತ್ತು ನೀಡಲಾಗುವುದೆಂದು ತಿಳಿಸಿದರು.


    ಸಹಕಾರಿಯ ನಿರ್ದೇಶಕ ಮಂಡಳಿ, ಸಲಹಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು, ಸಹಕಾರಿ ಮುಖ್ಯಕಾರ್ಯನಿವಾ೯ಹಕ ಬಸವರಾಜ್ ನಂಜನ್ನವರ್ ವರದಿ ಮಂಡಿಸಿದರು, ಪ್ರಭು ಗುಂಡ್ಲೂರು ಕಾರ್ಯಕ್ರಮ ನಿರೂಪಿಸಿದರು.
    ಸಹಕಾರಿಯಲ್ಲಿ ಒಟ್ಟು 2658 ಸದಸ್ಯರಿದ್ದು, ಶೇರು ಬಂಡವಾಳ 1.93 ಕೋಟಿ ರೂ. ಇದೆ. ಕಾಯ್ದಿಟ್ಟ ನಿಧಿ 7.52 ಕೋಟಿ ರೂ., ಠೇವಣಿ 39.90 ಕೋಟಿ ರೂ. ಇದ್ದು, 39 ಕೋಟಿ ರೂ. ಸಾಲ ವಿತರಿಸಲಾಗಿದೆ. 50.50 ಕೋಟಿ ರೂ. ದುಡಿಯುವ ಬಂಡವಾಳವಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Basava Souharda Credit Sahakari Sangha Bylahongala Cooperative Department Jagadish Metagud Souharda Sahakari Spandana Spandana Cooperative Spandana NEws Vijay Shreeshail Matagud
    Previous Articleಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ 44.45 ಲಕ್ಷ ರೂ. ನಿವ್ವಳ ಲಾಭ
    Next Article ಅನನ್ಯ ಸೌಹಾರ್ದ ಸಹಕಾರಿ ಸಂಘ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.