ಮಂಗಳೂರು: ದೈವಜ್ಞ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸಂಸ್ಥೆಯ ಅಧ್ಯಕ್ಷ ಎಂ.ಅಶೋಕ್ ಶೇಟ್ ಅಧ್ಯಕ್ಷತೆಯಲ್ಲಿ ದೈವಜ್ಞ ಕಲ್ಯಾಣ ಮಂಟಪದಲ್ಲಿ ನೆರವೇರಿತು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಂತೋಷ್ ಶೇಟ್ ವಾರ್ಷಿಕ ವರದಿ ಮಂಡಿಸಿದರು. 2023-2024ನೇ ಸಾಲಿನಲ್ಲಿ ಸಂಘವು 46.54 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಿಸಲಾಯಿತು.
ಸಂಘವು 64.54 ಲಕ್ಷ ರೂ. ಪಾಲು ಬಂಡವಾಳ, 18.66 ಕೋಟಿ ರೂ. ಠೇವಣಿ ಹೊಂದಿದ್ದು ಸದಸ್ಯರಿಗೆ 14.68 ಕೋಟಿ ರೂ. ಸಾಲ ನೀಡಿದೆ. ಸಂಘವು 2023-2024ನೇ ಸಾಲಿನಲ್ಲಿ 95.54 ಕೋಟಿ ರೂ. ವ್ಯವಹಾರ ನಡೆಸಿದೆ. ಸಂಘವು ಸತತವಾಗಿ ‘ಎ’ ತರಗತಿಯ ಆಡಿಟ್ ವರ್ಗೀಕರಣ ಪಡೆಯುತ್ತ ಬಂದಿದೆ.
https://chat.whatsapp.com/Ge11n7QCiMj5QyPvCc0H19
ಸಭೆಯಲ್ಲಿ 2023-2024ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಸದಸ್ಯರ ಮಕ್ಕಳನ್ನು ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಸಂಘದ ಉಪಾಧ್ಯಕ್ಷ ಪ್ರಮೋದ್ ಕೆ.ಶೇಟ್, ನಿರ್ದೇಶಕರಾದ ಕೆ.ಸುಧಾಕರ್ ಶೇಟ್, ಮನೋಹರ್ ಶೇಟ್, ಶ್ರೀಪಾದ್ ಬಿ.ರಾಯ್ಕರ್, ಗುರುಪ್ರಸಾದ್ ಶೇಟ್, ಗಜೇಂದ್ರ ಶೇಟ್, ಪುಷ್ಪಾ ಕೆ.ಶೇಟ್, ಸುಭದ್ರಾ ಬಾಯಿ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com