ಮಂಗಳೂರು: ಕಾರ್‌ಸ್ಟ್ರೀಟ್‌ನಲ್ಲಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ ಆವರಣದಲ್ಲಿ ಅಳವಡಿಸಿದ ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ.ಲಿ ಸಂಸ್ಥೆಯ ಶುದ್ದ ಕುಡಿಯುವ ನೀರಿನ ಘಟಕವನ್ನು ಭಾನುವಾರ ಲೋಕಾರ್ಪಣೆಗೊಳಿಸಲಾಯಿತು.
ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎ.ಎಸ್.ವೆಂಕಟೇಶ್ ಉದ್ಘಾಟಿಸಿದರು. ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಸ್.ಆರ್. ಹರೀಶ್ ಆಚಾರ್ಯ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಗೆ ಈ ಘಟಕ ಪೂರಕವಾಗಿದೆ ಎಂದರು.
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಎ.ಸುರೇಶ್ ರೈ, ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಶೋಕ್ ಶೇಟ್, ದ.ಕ. ಜಿಲ್ಲಾ ಕೋಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದಯಾನಂದ ಅಡ್ಯಾರ್, ಜನತಾ ಬಜಾರ್ ಅಧ್ಯಕ್ಷ ಪುರುಷೋತ್ತಮ ಭಟ್, ದ.ಕ.ಜಿಲ್ಲಾ ಚಿನ್ನದ ಕೆಲಸಗಾರರ ಸಂಘದ ಅಧ್ಯಕ್ಷ ಕೆ. ಎಲ್. ಹರೀಶ್ ಆಚಾರ್ಯ, ಕಾಳಿಕಾ ಸೇವಾ ಸಮಿತಿ ಅಧ್ಯಕ್ಷ ಜಗದೀಶ ಸಿದ್ಧಕಟ್ಟೆ ಈ ಘಟಕ ಅಳವಡಿಸಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
https://chat.whatsapp.com/Ge11n7QCiMj5QyPvCc0H19
ಕಡಿಮೆ ಖರ್ಚಿನಲ್ಲಿ ಶುದ್ಧ ನೀರು
ಈ ಘಟಕದಲ್ಲಿ ಒಂದು ರೂ.ಗೆ ಒಂದು ಲೀಟರ್, 5 ರೂ.ಗೆ 5 ಲೀಟರ್, 10 ರೂ. ನಾಣ್ಯ ಹಾಕಿ 20 ಲೀಟರ್ ಶುದ್ಧ ಕುಡಿಯುವ ನೀರು ಪಡೆಯಬಹುದು. ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟಿಕ್ ಬಾಟಲಿಗಳ ನೀರು ಕುಡಿಯುವುದಕ್ಕಿಂತ ಸ್ಥಳೀಯ ಜಲಮೂಲವನ್ನು ಶುದ್ದೀಕರಿಸಿದ ನೀರನ್ನು ಕುಡಿಯುವುದು ಶ್ರೇಯಸ್ಕರ. ಕಾರ್ಪೊರೇಟ್ ಕಂಪನಿಗಳು, ಸಹಕಾರಿ ಸಂಘಗಳು, ಸೇವಾ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಈ ಘಟಕವನ್ನು ಅಳವಡಿಸಬಹುದು. ಇದು ಪ್ರಧಾನಮಂತ್ರಿಯವರ ಸ್ವಚ್ಛ ಭಾರತ್ ಯೋಜನೆಗೂ ಪೂರಕವಾಗಲಿದೆ. ವಾಣಿಜ್ಯ ಸಂಸ್ಥೆಗಳು, ಸೇವಾ ಸಂಸ್ಥೆಗಳು ತಮ್ಮ ಬ್ರ್ಯಾಂಡ್ ಹೆಚ್ಚಿಸುವ ನಿಟ್ಟಿನಲ್ಲಿ ಜಾಹೀರಾತು ಅಳವಡಿಕೆಗೂ ಈ ಘಟಕಗಳಲ್ಲಿ ಅವಕಾಶವಿರುವುದರಿಂದ ತಮ್ಮ ಸಂಸ್ಥೆಯ ವತಿಯಿಂದ ಕೊಡುಗೆಯಾಗಿಯೂ ಜನವಸತಿ ಪ್ರದೇಶಗಳಲ್ಲಿ ಅಳವಡಿಸಬಹುದು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com