ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಸಮಾಜಮುಖಿ ಕಾರ್ಯಕ್ರಮ
ದಿ.ಫಾ.ವಲೇರಿಯನ್ ಮೆಂಡೋನ್ಸ ಅವರ ಸಾಮಾಜಿಕ ಚಿಂತನೆಯ ಫಲ: ಸೊಸೈಟಿಯ ಸಂಸ್ಥಾಪಕ ಜೀವನ್ ಡಿಸೋಜ
ಬ್ರಹ್ಮಾವರ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಬ್ರಹ್ಮಾವರದ ಸ್ನೇಹಾಲಯ ಸಂಸ್ಥೆಗೆ ದಿನಸಿ ಸಾಮಗ್ರಿಗಳನ್ನು ಶುಕ್ರವಾರ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಜೀವನ್ ಡಿಸೋಜ ಮಾತನಾಡಿ, ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ.ಫಾ.ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಈ ಕಾರ್ಯಕ್ರಮದ ಶ್ರೇಯಸ್ಸು ವಲೇರಿಯನ್ ಮೆಂಡೋನ್ಸ ಇವರಿಗೆ ಅರ್ಪಿಸಲಾಗುವುದು.
ಮೊದಲು ಪಾಂಬೂರಿನ ಮಾನಸ ಪುನರ್ವಸತಿ ಕೇಂದ್ರದ ವಿಶೇಷ ಚೇತನ ಮಕ್ಕಳೊಂದಿಗೆ ಸಂಭ್ರಮ ಆಚರಿಸಿದ್ದು, ಎರಡನೆಯದಾಗಿ ಉದ್ಯಾವರದ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟ್‌ನಲ್ಲಿ ಆಚರಿಸಿಕೊಂಡು ಶುಕ್ರವಾರ ಇಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
https://chat.whatsapp.com/Ge11n7QCiMj5QyPvCc0H19
ಮುಖ್ಯ ಅತಿಥಿ ಸೈಂಟ್ ಮೇರಿಸ್ ಕ್ಯಾಥೆಡ್ರಲ್ ಬ್ರಹ್ಮಾವರ ಇಲ್ಲಿನ ಧರ್ಮಗುರು ಫಾ.ಲಾರೆನ್ಸ್ ಡೇವಿಡ್ ಕ್ರಾಸ್ತ ಮಾತನಾಡಿ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ದಿ.ವಲೇರಿಯನ್ ಮೆಂಡೋನ್ಸ ನುಡಿದಂತೆ ಸಂಸ್ಥೆ ನಡೆದುಕೊಂಡು ಬರುತ್ತಿದೆ. ಸಂಸ್ಥೆಯು ಅನಾಥರು ಮತ್ತು ಹಿರಿಯರ ಮೇಲೆ ಗೌರವವಿಟ್ಟು ಇಂದು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಕ್ಕೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿ, ಸಂಸ್ಥೆಗೆ ಶುಭ ಹಾರೈಸಿದರು.
ಸಾಮಾಜಿಕ ಕಾರ್ಯಕರ್ತ, ರೋಟರಿ ಕ್ಲಬ್ ಬ್ರಹ್ಮಾವರದ ನಿಕಟಪೂರ್ವ ಅಧ್ಯಕ್ಷ ಆಲ್ವಿನ್ ಅಂದ್ರಾದೆ ಮಾತನಾಡಿ ನಾಟಕದ ಜೀವನ ನಡೆಸಲು ಅಸಾಧ್ಯ, ಅದು ನಾಟಕವೇ ಹೊರತು ಜೀವನ ಅಲ್ಲ, ನಾವು ಎಲ್ಲರು ಇಲ್ಲಿ ಬಂಧುಗಳು. ಈ ಸಂಸ್ಥೆಯು ಇನ್ನು ಹೆಚ್ಚಿನ ಅನೇಕ ರೀತಿಯಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸೇವೆಯನ್ನು ನೀಡಲಿ ಎಂದು ಶುಭ ಹಾರೈಸಿದರು.
ಸೆಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿ ಇಲ್ಲಿನ ಪಾಲನಾ ಮಂಡಳಿಯ ಉಪಾಧ್ಯಕ್ಷ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ಅಶ್ವಿನ್ ರೋಚ್ ಮಾತನಾಡಿ ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಇಲ್ಲಿ ನಮಗೆ ನಾವೇ ಎಲ್ಲ. ನಮ್ಮ ಪಾಲಕರೇ ನಮ್ಮ ಸಂಬಂಧಿಗಳು ನಮ್ಮ ಶುಭ ಹಾರೈಕೆದಾರರು. ಅವರು ನಡೆಸಿದಂತೆ ನಡೆದುಕೊಂಡು ಜೀವನ ಸಾಗಿಸಬೇಕು. ಸಿಟ್ಟು ಕೋಪ ಹಠ ಇದರಿಂದ ಸಂತೋಷ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಕಿವಿಮಾತು ಹೇಳಿದರು.
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಲೆಕ್ಕ ವ್ಯವಸ್ಥಾಪಕ ಕುಮಾರ್ ಹೆಚ್.ಎನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ಸಹಾಯಕಿ ರೇಶ್ಮಾ ಎ.ಕುಮಾರಿ ವಂದಿಸಿದರು. ವಿವಿಯನ್ ಮರ್ವಿನ್ ನೊರೊನ್ಹಾ ಹಾಗೂ ಸ್ನೇಹಾಲಯ ಬ್ರಹ್ಮಾವರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com