Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗ್ರಾಹಕರ ಸೇವೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿ
    News

    ಗ್ರಾಹಕರ ಸೇವೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿ

    adminBy adminSeptember 30, 2024

    ಬ್ಯಾಂಕ್‌ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ 113 ಶಾಖೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿ ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡುತ್ತಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಬ್ಯಾಂಕ್ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಶಾಖಾ ಮಟ್ಟದಲ್ಲಿ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಸ್ಪಂದಿಸಿರುವುದರಿಂದ ಬ್ಯಾಂಕಿಗೆ ಸತತ ಮೂರು ವರ್ಷಗಳಿಂದ ( 2021-22 , 2022-23, 2023-24 ) ‘ ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಹಾಗೂ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಈ ಬಾರಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ ಲಭಿಸಿದೆ. ಈ ಪ್ರತಿಷ್ಠಿತ ಅವಳಿ ಪ್ರಶಸ್ತಿಗಳು ಬ್ಯಾಂಕಿನ ಘನತೆಯನ್ನು ಮತ್ತಷ್ಟು ಹೆಚ್ಚಿಸಿದ್ದು ಮಾತ್ರವಲ್ಲ ರಾಷ್ಟ್ರೀಕೃತ ಬ್ಯಾಂಕ್ ಗಳಿಗಿಂತ ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

    ಶನಿವಾರ ಬ್ಯಾಂಕಿನ ಸಿಬ್ಬಂದಿಗಳಿಗೆ ಗಿಫ್ಟ್ ಕೂಪನ್ ವಿತರಣೆ ಹಾಗೂ ಶಾಖಾ ಮಟ್ಟದಲ್ಲಿ ಸಮಗ್ರ ಸಾಧನೆ ಮಾಡಿದ ಸಿಬ್ಬಂದಿಗಳನ್ನು ಪುರಸ್ಕರಿಸುವ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಬ್ಬಂದಿಗಳು ತಮ್ಮ ಕಾರ್ಯದಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಬೇಕು . ಗ್ರಾಹಕರ ಅನುಕೂಲಕ್ಕಾಗಿ ವಿವಿಧ ರೀತಿಯ ಸಾಲ ಸೌಲಭ್ಯ, ಠೇವಣಿಗಳಿಗೆ ಆಕರ್ಷಕ ಬಡ್ಡಿದರದ , ಲಾಕರ್ ಸೌಲಭ್ಯ, ಆರ್ ಟಿಎಸ್/ ನೆಫ್ಟ್ ಸೇರಿದಂತೆ ಕೋರ್ ಬ್ಯಾಂಕಿಂಗ್ ಸೌಲಭ್ಯ ಬ್ಯಾಂಕ್‌ನಲ್ಲಿ ದೊರೆಯುತ್ತಿದೆ. ಹೀಗೆ ಬ್ಯಾಂಕಿನ ವಿವಿಧ ಯೋಜನೆಗಳ ಸಮರ್ಪಕ ಮಾಹಿತಿಯನ್ನು ಗ್ರಾಹಕರಿಗೆ ಸಿಬ್ಬಂದಿಗಳು ನೀಡಬೇಕು. ಇದರಿಂದ ಸಿಬ್ಬಂದಿ ಹಾಗೂ ಗ್ರಾಹಕರ ನಡುವೆ ಉತ್ತಮ ಬಾಂಧವ್ಯ ಬೆಳೆಯುತ್ತದೆ . ಇದು ಬ್ಯಾಂಕಿನ ಪ್ರಗತಿಗೆ ಪೂರಕವಾಗುತ್ತದೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.
    ಬ್ಯಾಂಕಿನ ಸಿಬ್ಬಂದಿಗಳ ಪರವಾಗಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್, ಸಹಾಯಕ ಮಹಾಪ್ರಬಂಧಕ ರಾಜೇಶ್ ಶೆಟ್ಟಿ ಇವರು ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ರೂ. 10,000/- ಮೌಲ್ಯದ ಗಿಫ್ಟ್ ಕೂಪನ್ ಸ್ವೀಕರಿಸಿದರು. 2023-24ನೇ ಸಾಲಿನಲ್ಲಿ ಬ್ಯಾಂಕ್ ನೀಡಿದ ಗುರಿಯನ್ನು ಸಾಧಿಸಿದ ಶಾಖಾ ವ್ಯವಸ್ಥಾಪಕರನ್ನ , ತಾಲೂಕು ಮಟ್ಟದಲ್ಲಿ ಸಮಗ್ರ ಸಾಧನೆಗೈದ ಸಿಬ್ಬಂದಿಗಳನ್ನು ಹಾಗೂ ಎಪಿವೈ ಯೋಜನೆಯಲ್ಲಿ ಗುರಿ ಸಾಧಿಸಿದ ಶಾಖಾ ವ್ಯವಸ್ಥಾಪಕರನ್ನು ಅಭಿನಂದಿಸಲಾಯಿತು.
    ಬ್ಯಾಂಕಿನ ನಿರ್ದೆಶಕರಾದ ಎಂ.ಮಹೇಶ್ ಹೆಗ್ಡೆ ಮಾತನಾಡಿ ಬ್ಯಾಂಕಿನ ಸಿಬ್ಬಂದಿಗಳ ಕಾರ್ಯನಿರ್ವಹಣೆಯನ್ನು ಶ್ಲಾಘಿಸಿದರು. ಸಿಬ್ಬಂದಿಗಳ ಪರವಾಗಿ ಬೆಳ್ಳಾರೆ ಶಾಖೆಯ ವ್ಯವಸ್ಥಾಪಕ ಸಂತೋಷ್, ಉಪ್ಪುಂದ ಶಾಖೆಯ ವ್ಯವಸ್ಥಾಪಕ ಶಂಕರ್ ಶೆಟ್ಟಿ ಮಾತನಾಡಿ ಬ್ಯಾಂಕಿನ ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.
    ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ , ನಿರ್ದೇಶಕರಾದ ಟಿ.ಜಿ.ರಾಜಾರಾಮ ಭಟ್, ಭಾಸ್ಕರ್ ಎಸ್.ಕೋಟ್ಯಾನ್ , ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ್ ರೈ, ಎಂ.ಮಹೇಶ್ ಹೆಗ್ಡೆ, ಮೋನಪ್ಪ ಶೆಟ್ಟಿ ಎಕ್ಕಾರು, ಹರಿಶ್ಚಂದ್ರ, ಕೆ.ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್ ಉಪಸ್ಥಿತರಿದ್ದರು.
    ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್ ಸ್ವಾಗತಿಸಿದರು. ಉಪ ಮಹಾಪ್ರಬಂಧಕಿ ವಿದ್ಯಾ ಕಾರ್ನಾಡು ವಂದಿಸಿದರು. ಬ್ಯಾಂಕಿನ ಉಪ ಮಹಾಪ್ರಬಂಧಕ ನಿತ್ಯಾನಂದ ಶೇರಿಗಾರ್ ಹಾಗೂ ಸಹಾಯಕ ಮಹಾಪ್ರಬಂಧಕ ರಾಜೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    APY National Award Atal Pinchani Yojana Co Operative ministry Cooperative Department Cooperative Registrar Dr.M.N.Rajendra Kumar Gopalakrishna Bhat SCDCC Bank Spandana NEws
    Previous Articleಬೊಳುವಾರಿನಲ್ಲಿ ನೇತ್ರ, ಹೃದಯ ಉಚಿತ ತಪಾಸಣೆ, ರಕ್ತದಾನ ಶಿಬಿರ
    Next Article ಬ್ಯಾಂಕ್‌, ಸಹಕಾರಿ ಸಂಘಗಳಿಗೆ ಈ ತಿಂಗಳಲ್ಲಿ ಸರಣಿ ರಜೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.