ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇದರ ಗಂಜಿಮಠ ಶಾಖೆ ಹಾಗೂ ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ, ಅಳಕೆ ಫ್ರೆಂಡ್ಸ್ ಗಂಜಿಮಠ, ಫ್ರೆಂಡ್ಸ್ ಕ್ಲಬ್ ಮಟ್ಟಿ, ಬಡಗುಳಿಪಾಡಿ, ಕಲಾವರ್ಧಕ ಯುವಕ ಮಂಡಲ ನಾರ್ಲಮೊಗರು, ಮತ್ತು ಲಯನ್ಸ್ ಕ್ಲಬ್ ಗುರುಪುರ-ಕೈಕಂಬ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿ೦ದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವನ್ನು ಅಕ್ಟೋಬರ್ 6ರ ಭಾನುವಾರ ಪೂರ್ವಾಹ್ನ 9.30ರಿಂದ ಅಪರಾಹ್ನ 12.30ರವರೆಗೆ ಗಂಜಿಮಠದ ಮರಾಠಿ ಸಮಾಜ ಸೇವಾ ಸಂಘದಲ್ಲಿ ಆಯೋಜಿಸಲಾಗಿದೆ.
https://chat.whatsapp.com/Ge11n7QCiMj5QyPvCc0H19
ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಎಲುಬು ಮತ್ತು ಕೀಲು ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಹಲ್ಲುಗಳನ್ನು ಶುಚಿ ಮಾಡುವುದು, ಉಚಿತ ಔಷದಾಲಯ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡ್ ನೀಡುವುದು ಹಾಗೂ ವೈದ್ಯಕೀಯ ಸೇವೆಗಳು ಲಭ್ಯವಿರುತ್ತವೆ.
ಸಂಘದ ಸದಸ್ಯರು, ಗ್ರಾಹಕರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com