ಲಯನ್ಸ್ ಕ್ಲಬ್ ಗುರುಪುರ ಕೈಕಂಬ ಅಧ್ಯಕ್ಷ ಮಹೇಶ್ ಶೆಟ್ಟಿ ಅಭಿಪ್ರಾಯ
ಆತ್ಮಶಕ್ತಿ ಗಂಜಿಮಠ ಶಾಖೆಯ ವತಿಯಿಂದ ವೈದ್ಯಕೀಯ ಉಚಿತ ತಪಾಸಣಾ ಶಿಬಿರ
ಗುರುಪುರ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವಿವಿಧ ಸಂಘ ಸಂಸ್ಥೆಗಳ ಜೊತೆ ಸೇರಿ ನಡೆಸುವ ಜನಪರ ಕಾರ್ಯಕ್ರಮಗಳು ಶ್ಲಾಘನೀಯವಾದುದು. ಆರೋಗ್ಯವೇ ಭಾಗ್ಯ ಎಂಬಂತೆ ಮನುಷ್ಯನ ಆರೋಗ್ಯದ ರಕ್ಷಣೆಗಾಗಿ ಆತ್ಮಶಕ್ತಿ ಸಹಕಾರಿ ಸಂಘವು ಸೇವೆಯನ್ನು ನೀಡುವಂತಾಗಲಿ ಎಂದು ಲಯನ್ಸ್ ಕ್ಲಬ್ ಗುರುಪುರ ಕೈಕಂಬ ಇದರ ಅಧ್ಯಕ್ಷ ಮಹೇಶ್ ಶೆಟ್ಟಿ ಹೇಳಿದರು.
https://chat.whatsapp.com/Ge11n7QCiMj5QyPvCc0H19
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಗಂಜಿಮಠ ಶಾಖೆಯ ಪ್ರಯುಕ್ತ ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ , ಅಳಿಕೆ ಫ್ರೆಂಡ್ಸ್ ಗಂಜಿಮಠ, ಫ್ರೆಂಡ್ಸ್ ಕ್ಲಬ್ ಮಟ್ಟಿ ಬಡಗುಳಿಪಾಡಿ, ಕಲಾವರ್ಧಕ ಯುವಕ ಮಂಡಲ ನಾರ್ಲಮೊಗರು ಹಾಗೂ ಲಯನ್ಸ್ ಕ್ಲಬ್ ಗುರುಪುರ ಕೈಕಂಬ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯರ ತಂಡದೊಂದಿಗೆ ಭಾನುವಾರ ಗಂಜಿಮಠದ ಮರಾಠಿ ಸಮಾಜ ಸೇವಾ ಸಂಘದಲ್ಲಿ ನಡೆದ ವೈದ್ಯಕೀಯ, ನೇತ್ರ ಉಚಿತ ತಪಾಸಣಾ ಮತ್ತು ದಂತ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರಮಟ್ಟದಲ್ಲಿ ಬೆಳಗಲಿ ಆತ್ಮಶಕ್ತಿ
ಉದ್ಯಮಿ ಚಂದ್ರಹಾಸ್ ನಾರ್ಲ ಮಾತನಾಡಿ ನಮ್ಮ ಊರಿನಲ್ಲಿ ವೈದ್ಯಕೀಯ ಶಿಬಿರದ ಅವಶ್ಯಕತೆ ಇತ್ತು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದು ಮುಂದೆಯೂ ಇಂತಹ ಶಿಬಿರವನ್ನು ಆಯೋಜಿಸುವಂತಾಗಲಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಗಳು ೧೦೦, ೨೦೦ ರ ಗಡಿ ದಾಟಿ, ಶಾಖೆಯು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬೆಳಗಲಿ ಎಂದು ಹಾರೈಸಿದರು.
ಗಂಜಿಮಠ ಮರಾಠಿ ಸಮಾಜ ಸೇವಾ ಸಂಘ ಅಧ್ಯಕ್ಷ ಶೇಖರ್ ಕಡ್ತಲೆ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆತ್ಮಪೂರ್ವಕವಾಗಿ ಕೆಲಸ ಮಾಡುತ್ತದೆ ಎಂಬುವುದಕ್ಕೆ ಈ ಶಿಬಿರ ನಿದರ್ಶನ. ಆತ್ಮಶಕ್ತಿ ಎಂಬ ಹೆಸರು ಇಟ್ಟುಕೊಂಡು ನವದುರ್ಗೆಯರನ್ನು ಪೂಜಿಸುವ ಈ ಸಂದರ್ಭದಲ್ಲಿ ದೇವರ ಕೃಪೆಯ ಜೊತೆಗೆ ಜನರಿಗೆ ಒಳ್ಳೆಯ ಬದುಕು ಕಲ್ಪಿಸಿಕೊಡಬೇಕೆಂಬ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದೆ. ಇದು ನಿಜವಾಗಿಯೂ ದೇವರು ಮೆಚ್ಚುವಂತ ಕೆಲಸ. ಆತ್ಮಶಕ್ತಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರ ಆಶಯದಂತೆ ಬಡ ಜನರಿಗೆ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜನೆ ಮಾಡುತ್ತ ಬರುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬರುತ್ತಿದೆ. ಬ್ಯಾಂಕಿಂಗ್ ಸೇವೆಯು ಜನರಿಗೆ ಹತ್ತಿರವಾಗುವ ನಿಟ್ಟಿನಲ್ಲಿ ಸಂಘವು ಠೇವಣಿಗೆ ಆಕರ್ಷಕ ಬಡ್ಡಿದರ ಶೇ.10ರ ಜೊತೆಯಲ್ಲಿ, ಚಿನ್ನಾಭರಣ ಸಾಲಕ್ಕೆ ಗರಿಷ್ಟ ಮೌಲ್ಯದ ಜೊತೆಗೆ ಸೇವಾ ಶುಲ್ಕ ರಹಿತವಾಗಿ ನೀಡುತ್ತಿರುವುದು, ಇದು ಸಂಘದ ಸಮಾಜಮುಖಿ ಚಿಂತನೆಯಾಗಿದೆ ಎಂದು ಹೆಳಿದರು.
75 ಶಿಬಿರ, 15,700 ಮಿಕ್ಕಿ ಕನ್ನಡಕ ಉಚಿತವಿತರಣೆ
ಆತ್ಮಶಕ್ತಿ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ, ರಜಾ ದಿನಗಳಲ್ಲಿ ಅಯೋಜಿಸುವ ಶಿಬಿರಗಳಲ್ಲಿ ನಮ್ಮೊಂದಿಗೆ ವೈದ್ಯಕೀಯ ಶಿಬಿರದ ಸಿಬ್ಬಂದಿ ಹಾಗೂ ನಮ್ಮ ಸಂಘದ ಸಿಬ್ಬಂದಿಗಳು ಹಾಗೂ ಸಂಘ ಸಂಸ್ಥೆಗಳ ಪಧಾಧಿಕಾರಿಗಳು ನಮ್ಮೊಂದಿಗೆ ಭಾಗವಹಿಸುವುದು ತುಂಬಾ ಹೆಮ್ಮೆ ಆಗುತ್ತದೆ. ಸಂಘವು ನಿರಂತರವಾಗಿ 74 ಶಿಬಿರವನ್ನು ಆಯೋಜಿಸಿದ್ದು, ಇಂದಿನ 75ನೇ ಶಿಬಿರವಾಗಿದೆ. 15,700 ಮಿಕ್ಕಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಿದೆ. ಅಲ್ಲದೇ 530 ಮಿಕ್ಕಿ ಶಿಬಿರಾರ್ಥಿಗಳಿಗೆ ಉಚಿತ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಆಸ್ಪತ್ರೆಗಳ ಸಹಯೋಗದೊಂದಿಗೆ ಮಾಡಿಸಿದೆ. ಈ ಕಾರ್ಯಕ್ರಮವು ಬಡವರ್ಗದ ಜನರಿಗೆ ಮಾತ್ರವಲ್ಲದೇ ಶ್ರೀಮಂತ ವರ್ಗದ ಜನರಿಗೂ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರ ಏರ್ಪಡಿಸಲು ಸಹಕರಿಸುತ್ತಿರುವ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಹಾಗೂ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆ ಸಲ್ಲಿಸಬೇಕು ಎಂದು ತಿಳಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಂ, ಫ್ರೆಂಡ್ಸ್ ಕ್ಲಬ್ ಮಟ್ಟಿ ಬಡಗುಳಿಪಾಡಿ ಅಧ್ಯಕ್ಷ ಸೋಹನ್ ಅತಿಕಾರಿ, ಕಲಾವರ್ಧಕ ಯುವಕ ಮಂಡಲ ನಾರ್ಲಮೊಗರು ಅಧ್ಯಕ್ಷ ನಾಗರಾಜ್ ಶೆಟ್ಟಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರದ (ಯೆನೆಪೋಯ) ವೈದ್ಯರಾದ ಡಾ||ಸ್ನೇಹಾ, ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲಿನ ವೈದ್ಯರಾದ ಡಾ|| ಆಲ್ಫಿಯ, ಸಾರ್ವಜನಿಕ ಸಂಪರ್ಕ ಅಧಿಕಾರಿ ಭರತ್, ಸಮಾಜ ಸೇವಾಕರ್ತರು ಆರ್.ಹೆಚ್.ಸಿ.ಡಿ.ಸಿ. ಶೈನಿ ಮತ್ತಿತ್ತರರು ಉಪಸ್ಥಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಹರಿಣಾಕ್ಷಿ ಪ್ರಶಾಂತ್ ಸ್ವಾಗತಿಸಿ, ಶಾಖಾಧಿಕಾರಿ ಸುಜಾತ ವಿಫುಲ್ ಸಾಲಿಯಾನ್ ವಂದಿಸಿದರು. ಲೆಕ್ಕಿಗರಾದ ಶ್ವೇತಾ ಸುರೇಶ್ ಮತ್ತು ಶಾಖಾಧಿಕಾರಿ ರಮ್ಯ ನಯನ್ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com