ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ಯೋಜನೆ ಅದ್ಭುತ ಸ್ಪಂದನೆ
ಕಾರ್ಕಳ: ವರಮಹಾಲಕ್ಷ್ಮಿ ಹಬ್ಬ ಹಾಗೂ ಗಣೇಶ ಚತುರ್ಥಿ ಅಂಗವಾಗಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ವಿಶೇಷ ಠೇವಣಿ ಯೋಜನೆ ಹಮ್ಮಿಕೊಂಡಿದ್ದ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ಯೋಜನೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಂಘವು ಒಂದೇ ತಿಂಗಳಲ್ಲಿ 2.76 ಕೋಟಿ ರೂ. ಸಂಗ್ರಹ ಮಾಡಿದೆ.
https://chat.whatsapp.com/Ge11n7QCiMj5QyPvCc0H19
ಇಲ್ಲಿನ ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿ ಹೊಂದಿ, ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘವು 2001 ರಲ್ಲಿ ಆರಂಭವಾಗಿದ್ದು, ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಸಂಘದ ಮೇಲೆ ಗ್ರಾಹಕರು ವಿಶೇಷ ವಿಶ್ವಾಸ ಇರಿಸಿರುವುದರಿಂದ ಪ್ರತಿವರ್ಷವೂ ಠೇವಣಿಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ.
ಸಂಘವು 2023-24ನೇ ಆರ್ಥಿಕ ವರ್ಷದಲ್ಲಿ ರೂ. 147 ಕೋಟಿ ವ್ಯವಹಾರ ನಡೆಸಿ ರೂ. 55.46 ಲಕ್ಷ ನಿವ್ವಳ ಲಾಭ ಗಳಿಸಿದೆ. ವಾರ್ಷಿಕ ಸಾಲಿನ ಅಂತ್ಯಕ್ಕೆ ಸಂಘವು ರೂ.30.55 ಲಕ್ಷ ಪಾಲು ಬಂಡವಾಳ ಹೊಂದಿದ್ದು ರೂ. 29.57 ಕೋಟಿ ಠೇವಣಿ ಸಂಗ್ರಹವಾಗಿದ್ದು ರೂ. 25.57 ಕೋಟಿ ಸಾಲ ವಿತರಿಸಿದ್ದು ರೂ. 34.63 ಕೋಟಿ ದುಡಿಮೆ ಬಂಡವಾಳ ಹೊಂದಿದೆ.
ಸಂಘದಲ್ಲಿ ಸಂಚಯ ಠೇವಣಿ, ನಿರಖು ಠೇವಣಿ, ಮಾಸಿಕ ಠೇವಣಿ, ಭಾರತ್ ವಿಕಾಸ್ ಪತ್ರ, ಚಾಲ್ತಿ ಠೇವಣಿ, ಹನಿದೈನಿಕ್ ಠೇವಣಿ ಇದ್ದು, ಠೇವಣಿದಾರರಿಗೆ ಉತ್ತಮ ಬಡ್ಡಿ ನೀಡಲಾಗುತ್ತಿದೆ. ಸಂಘದ ಕೇಂದ್ರ ಕಚೇರಿಯಲ್ಲಿ ಸೇಫ್ ಲಾಕರ್ ಸೌಲಭ್ಯ ಇದೆ.
ಸಂಘವು ಸದಸ್ಯರಿಗೆ ಆಸ್ತಿ ಅಡಮಾನ ಸಾಲ, ಚಿನ್ನಾಭರಣ ಸಾಲ, ಇತರ ಉದ್ದೇಶ ಸಾಲ, ವಾಹನ ಸಾಲ, ತುರ್ತು ಸಾಲ, ಭದ್ರತಾ ಸಾಲ, ಠೇವಣಾತಿ ಸಾಲ, ಹನಿದೈನಿಕ ಸಾಲ, ಓವರ್ ಡ್ರಾಫ್ಟ್ ಸಾಲ, ಜಾಮೀನು ಸಾಲ, ಗೃಹ ಸಾಲ, ಗ್ರೂಪ್ ಸಾಲಗಳ ಮೂಲಕ ಸಂಘದ ಸದಸ್ಯರಿಗೆ ಆರ್ಥಿಕ ಪ್ರೋತ್ಸಾಹ ನೀಡುತ್ತಾ ಬಂದಿದೆ.
ಸಂಘವು 1 ತಿಂಗಳ ಅವಧಿಯಲ್ಲಿ ಹಮ್ಮಿಕೊಂಡಿರುವ ವಿಶೇಷ ಠೇವಣಿಗೆ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ. ಸಂಘದ ಮೇಲೆ ವಿಶ್ವಾಸ ಇರಿಸಿ ಅತೀ ಹೆಚ್ಚಿನ ಠೇವಣಿ ನೀಡಿದ ಠೇವಣಿದಾರರಿಗೆ ಕೃತಜ್ಞತೆಗಳು. ಸಂಘದ ಮೂಲಕ ಜನರಿಗೆ ಉತ್ತಮ ಸೇವೆ ನೀಡಲಾಗುವುದು, ಇನ್ನಷ್ಟು ಜನರು ಸಂಘದಲ್ಲಿ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು ಸಂಘದ ಅಭಿವೃದ್ದಿಗೆ ಸಹಕರಿಸುವಂತೆ ಸಂಘದ ಅಧ್ಯಕ್ಷ ಸಂತೋಷ್ ರಾವ್ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com