ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ – ಈ ಬಾರಿಯ ಧ್ಯೇಯವಾಕ್ಯ
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನೇತೃತ್ವದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆಯು ನವಂಬರ್ 14ರಿಂದ 20ರ ತನಕ ನಡೆಯಲಿದೆ.
ರಾಜ್ಯಮಟ್ಟದಲ್ಲಿ ಏಳು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ವಿವಿಧ ಮಹಾಮಂಡಲಗಳ ನೇತೃತ್ವದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಈ ಬಾರಿ ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧ್ಯೇಯವಾಕ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.
https://chat.whatsapp.com/Ge11n7QCiMj5QyPvCc0H19
ನವಂಬರ್ 14ರಂದು ಗುರುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕೆಎಂಎಫ್ ನೇತೃತ್ವದಲ್ಲಿ ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು ಎಂಬ ವಿಷಯದಲ್ಲಿ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ.
ನವಂಬರ್ 15ರಂದು ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ಮತ್ತು ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೇತೃತ್ವದಲ್ಲಿ ಸಹಕಾರ ಸಂಸ್ಥೆಗಳಲ್ಲಿ ಅನ್ವೇಷಣೆ, ತಾಂತ್ರಿಕತೆ ಮತ್ತು ಉತ್ತಮ ಆಡಳಿತ ಎಂಬ ವಿಷಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ನವಂಬರ್ 16ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ವಿಷಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ನವಂಬರ್ 17ರಂದು ಸಹಕಾರಿ ಉದ್ಯಮಗಳಲ್ಲಿ ಪರಿವರ್ತನೆ ಎಂಬ ವಿಷಯದ ಬಗ್ಗೆ ಬಾಗಲಕೋಟೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಮತ್ತು ಬಾಗಲಕೋಟೆ ಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ನವಂಬರ್ 18ರಂದು ಬೀದರ್‌ನಲ್ಲಿ ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು ಎಂಬ ವಿಷಯದ ಬಗ್ಗೆ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್‌ಗಳ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ಇವುಗಳು ನೇತೃತ್ವ ವಹಿಸಲಿವೆ.
ನವಂಬರ್ 19ರಂದು ಮಹಿಳೆಯರು, ಯುವಕರು ಮತ್ತು ಅಬಲ ವರ್ಗದವರಿಗಾಗಿ ಸಹಕಾರಿ ಸಂಸ್ಥೆಗಳು ಎಂಬ ವಿಷಯದ ಬಗ್ಗೆ ಚಿಕ್ಕಮಗಳೂರಿನಲ್ಲಿ ನಡೆಯಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಚಿಕ್ಕಮಗಳೂರು ಇವುಗಳು ನೇತೃತ್ವ ವಹಿಸಲಿವೆ.
ನವಂಬರ್ 20ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಉತ್ತಮ ವಿಶ್ವ ನಿರ್ಮಾಣ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ವಿಷಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ರಾಜ್ಯಮಟ್ಟದ ಮತ್ತು ಜಿಲ್ಲಾಮಟ್ಟದ ಕಾರ್ಯಕ್ರಮಗಳಲ್ಲಿ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಸಹಕಾರ ಸಂಸ್ಥೆಗಳ ಪ್ರತಿಯೊಂದು ಕೇಂದ್ರ ಕಚೇರಿ, ಶಾಖಾ ಕಟ್ಟಡಗಳ ಮೇಲೆ ಕಡ್ಡಾಯವಾಗಿ ಸಹಕಾರಿ ಧ್ವಜವನ್ನು ಹಾರಿಸಬೇಕು ಎಂದು ಸಹಕಾರಿ ಸಂಘಗಳ ನಿಬಂಧಕರ ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com