ಮಂಗಳೂರು: 71ನೇ ಅಖಿಲ ಭಾರತ ಸಹಕಾರ ಸಪ್ತಾಹವು ‘ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ’ ಎಂಬ ಧ್ಯೇಯದೊಂದಿಗೆ ನವಂಬರ್ 14ರಿಂದ 20ರವರೆಗೆ ದೇಶಾದ್ಯಂತ ನಡೆಯಲಿದ್ದು, ಮಂಗಳೂರಿನಲ್ಲಿ ನ.16ರಂದು ‘ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ವಿಷಯದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ.
ಸೋಮವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ನಡೆದ ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ತಯಾರಿ ನಡೆದಿದೆ. ಆ ಮೂಲಕ ಸಹಕಾರ ಕ್ಷೇತ್ರದ ಸಾಧನೆಗಳನ್ನು ಸಾರ್ವಜನಿಕರ ಗಮನಕ್ಕೆ ತರುವುದು ಅಗತ್ಯವಾಗಿದ್ದು ಇದರ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದರು.
https://chat.whatsapp.com/Ge11n7QCiMj5QyPvCc0H19
ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಪಿ ಮಾತನಾಡಿ, ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ಇಡೀ ರಾಜ್ಯದಲ್ಲೇ ಮಾದರಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದು ಶ್ಲಾಘನೀಯ ಸಂಗತಿ ಎಂದರು.
ಪೂರ್ವಭಾವಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿಗಳು ಹಾಗೂ ಉಭಯ ಜಿಲ್ಲೆಗಳ ಎಲ್ಲ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ ಮತ್ತು ಬಿ.ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ, ರಾಜಾರಾಮ್ ಭಟ್, ಭಾಸ್ಕರ್ ಎಸ್.ಕೋಟ್ಯಾನ್, ಎಸ್.ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ದೇವಿಪ್ರಸಾದ್, ಶೆಟ್ಟಿ ಎಸ್.ಬಿ. ಜಯರಾಮ್ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರಿಶ್ಚಂದ್ರ,
ಎಂ.ಮಹೇಶ್ ಹೆಗ್ಡೆ ಬಿ. ಅಶೋಕ್ ಕುಮಾರ್ ಶೆಟ್ಟಿ, ಕೆ.ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್.ಎನ್. ಮನ್ಮಥ, ರಾಜೇಶ್ ರಾವ್, ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಮೊದಲಾದವರು ಉಪಸ್ಥಿತರಿದ್ದರು. ದ.ಕ. ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್. ಪ್ರಸ್ತಾವಿಸಿದರು. ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಲಾವಣ್ಯ ಕೆ. ಆರ್. ಸ್ವಾಗತಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com