ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ವಿನೂತನ ಯೋಜನೆ
ನವಂಬರ್ 9ರ ಶನಿವಾರ ಸಮಾರಂಭ
ಮಂಗಳೂರು: ಸದಾ ಒಂದಿಲ್ಲೊಂದು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ರಿಯಾಶೀಲವಾಗಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮತ್ತೊಂದು ವಿನೂತನ ಯೋಜನೆ ತಯಾರಾಗಿದ್ದು 50 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಗ್ರಂಥಾಲಯಕ್ಕೆ 5000 ಪುಸ್ತಕಗಳ ವಿತರಿಸುವ ಕಾರ್ಯಕ್ರಮ ನವಂಬರ್ 9ರಂದು ಶನಿವಾರ ನಡೆಯಲಿದೆ.
https://chat.whatsapp.com/Ge11n7QCiMj5QyPvCc0H19
ಮಂಗಳೂರಿನ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ನ.9ರಂದು ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಡೆಯಲಿದ್ದು ಮಂಗಳೂರಿನ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಮಹಾರಾಜ್ ಉಪಸ್ಥಿತರಿರುವರು. ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹೊ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕಿ ಭಾರತಿ ಜಿ.ಭಟ್, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಭಾಗವಹಿಸುವರು.
ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಉದಯ ವಿ.ಶಾಸ್ತ್ರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜ, ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com