Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಮೂಡುಬಿದಿರೆ ಸೇವಾ ಸಹಕಾರ ಸಂಘ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘ, ರಾಮಕೃಷ್ಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಆಯ್ಕೆ
    News

    ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಮೂಡುಬಿದಿರೆ ಸೇವಾ ಸಹಕಾರ ಸಂಘ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘ, ರಾಮಕೃಷ್ಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಆಯ್ಕೆ

    adminBy adminNovember 15, 2024

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಒಡಿಯೂರು ಶ್ರೀ ವಿವಿಧೋದ್ದೇಶ, ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌, ಕಾವೂರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಪುರಸ್ಕಾರ

    ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನಿಂದ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭದಲ್ಲಿ “ಸಹಕಾರ ಮಾಣಿಕ್ಯ” ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಮೂರು ಸಹಕಾರ ಸಂಘಗಳನ್ನು ಆಯ್ಕೆ ಮಾಡಲಾಗಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಶನಿವಾರ ನಡೆಯುವ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಉಭಯ ಜಿಲ್ಲೆಗಳಿಂದ ತಲಾ ಒಂದರಂತೆ ಕೃಷಿ ಪತ್ತಿನ ಸಹಕಾರ ಸಂಘಗಳನ್ನು “ಸಹಕಾರ ಮಾಣಿಕ್ಯ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂಡುಬಿದಿರೆ ಸೇವಾ ಸಹಕಾರ ಸಂಘ, ಉಡುಪಿ ಜಿಲ್ಲೆಯಿಂದ ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘ ಹಾಗೂ ಕ್ರೆಡಿಟ್ ಕೋಆಪರೇಟಿವ್ ಸಹಕಾರ ಸಂಘದಿಂದ ಮಂಗಳೂರಿನ ರಾಮಕೃಷ್ಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಆಯ್ಕೆಯಾಗಿದೆ. “ಸಹಕಾರ ಮಾಣಿಕ್ಯ ಪ್ರಶಸ್ತಿ” ಜೊತೆಗೆ 5 ಗ್ರಾಂ ಚಿನ್ನದ ಪದಕ. ರೂ.10,000 ನಗದು ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುವುದೆಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಅಧ್ಯಕ್ಷ ಡಾ.ಎಂ. ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.


    ಉತ್ತಮ ಸಹಕಾರ ಸಂಘಗಳಿಗೂ ಪ್ರಶಸ್ತಿ ನೀಡಲಾಗುತ್ತಿದ್ದು , ಉತ್ತಮ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಜ್ಪೆ ವ್ಯವಸಾಯ ಸೇವಾ ಸಹಕಾರ ಸಂಘ, ಉಡುಪಿ ಜಿಲ್ಲೆಯಿಂದ ಕೋಟ ಸಹಕಾರ ವ್ಯವಸಾಯಿಕ ಸಂಘ, ಉತ್ತಮ ಮಹಿಳಾ ಸಹಕಾರ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ, ಉಡುಪಿ ಜಿಲ್ಲೆಯಿಂದ ಕಿರಿಮಂಜೇಶ್ವರ ಮಹಿಳಾ ಸಹಕಾರ ಸಂಘ, ಉತ್ತಮ ಮೀನುಗಾರಿಕಾ ಸಹಕಾರ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಂಗಳೂರು ಯಾಂತ್ರಿಕ ಮೀನುಗಾರರ ಸಹಕಾರ ಸಂಘ, ಉಡುಪಿ ಜಿಲ್ಲೆಯಿಂದ ಹೆಮ್ಮಾಡಿ ಮೀನುಗಾರಿಕಾ ಸಹಕಾರ ಸಂಘ., ಉತ್ತಮ ಪತ್ತಿನ ಸಹಕಾರ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ವಿಜಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲೆಯಿಂದ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಹಾಗೂ ಉತ್ತಮ ಆಡಳಿತಾತ್ಮಕ ಸಹಕಾರ ಸಂಘ ಪ್ರಶಸ್ತಿಗೆ ಮಂಗಳೂರಿನ ಕಾವೂರು ವ್ಯವಸಾಯ ಸೇವಾ ಸಹಕಾರ ಸಂಘವನ್ನು ಆಯ್ಕೆ ಮಾಡಲಾಗಿದೆ.


    2023-24ರಲ್ಲಿ ಶತಮಾನ ಪೂರೈಸಿರುವ ಸಹಕಾರಿ ಸಂಘಗಳಿಗೆ ನೀಡುವ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಯ ಗಣಪತಿ ಸಹಕಾರಿ ವ್ಯವಸಾಯಿಕ ಸಂಘ, ಮಂದಾರ್ತಿ ಸೇವಾ ಸಹಕಾರಿ ಸಂಘ, ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ನೀಡಲಾಗುವುದು.
    ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿಗೆ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ, ವಿವಿಧೋದ್ದೇಶ ಸಹಕಾರ ಸಂಘ-ವಿಶೇಷ ಪ್ರಶಸ್ತಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋಆಪರೇಟಿವ್ ಸೊಸೈಟಿ ಮಂಗಳೂರು, ಉತ್ತಮ ನವೋದಯ ಸ್ವಸಹಾಯ ಗುಂಪು ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹಾಲಸ ನವೋದಯ ಸ್ವಸಹಾಯ ಗುಂಪು ಬೋಂದೆಲ್, ಉಡುಪಿ ಜಿಲ್ಲೆಯಿಂದ ಶ್ರೀ ಲಕ್ಷ್ಮೀನಾರಾಯಣ ನವೋದಯ ಸ್ವಸಹಾಯ ಸಂಘ ಕಾಪು, ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಬೆಳ್ತಂಗಡಿ, ಉಡುಪಿ ಜಿಲ್ಲೆಯಿಂದ ಹಾಳೆಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ನಿಟ್ಟೆ ಹಾಗೂ ಪತ್ರಿಕಾ ರಂಗದ ಪ್ರಶಸ್ತಿಗೆ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಯ್ಕೆಗೊಂಡಿದ್ದಾರೆ.
    ಮೂಡುಬಿದಿರೆಯ ಸಹಕಾರ ತರಬೇತಿ ಕೇಂದ್ರದಲ್ಲಿ ರ್ಯಾಂಕ್‌ ವಿಜೇತರಾದ ಚೈತ್ರಾ ಮೂಡುಬಿದಿರೆ ಹಾಗೂ ದಿವ್ಯರಾಣಿ ಕುಳಾಯಿ ಇವರನ್ನೂ ಪುರಸ್ಕರಿಸಲಾಗುವುದು ಎಂದು ಡಾ. ಎಂ. ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Dr. M.N Rajendrakumar Sahakara Manikya Souharda Sahakari Spandana Spandana NEws
    Previous Articleಹಿರಿಯ ಸಹಕಾರಿ ವಿನಯಕುಮಾರ್‌ ಸೂರಿಂಜೆ ಮತ್ತು ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ ಇವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪುರಸ್ಕಾರ
    Next Article ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ 22ನೇ ಶಾಖೆ ಮಡಂತ್ಯಾರಿನಲ್ಲಿ ನ.18ರಂದು ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.