ಮಂಗಳೂರು: ಇಲಿನ ಕರಾವಳಿ ಉತ್ಸವ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ರಾಜ್ಯದ “ಉತ್ತಮ ಸೌಹಾರ್ದ ಸಹಕಾರ ಸಂಘ” ಪ್ರಶಸ್ತಿಗಳನ್ನು ನೀಡಲಾಗಿದ್ದು, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘಕ್ಕೆ ಈ ಪ್ರಶಸ್ತಿ ಲಭಿಸಿದೆ.
https://chat.whatsapp.com/Ge11n7QCiMj5QyPvCc0H19
ಸಹಕಾರ ಸಚಿವ ಕೆ.ಎನ್ ರಾಜಣ್ಣ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಲ। ಎ. ಸುರೇಶ್ ರೈ ಪಿ.ಎಂ.ಜೆ.ಎಫ್ ಪ್ರಶಸ್ತಿ ಸ್ವೀಕರಿಸಿದರು. ಕರ್ನಾಟಕ ವಿಧಾನಸಭೆಯ ಅಧ್ಯಕ್ಷ ಯು.ಟಿ ಖಾದರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೆಗೌಡ, ಶಾಸಕರಾದ ಡಾ। ವೈ.ಭರತ್ ಶೆಟ್ಟಿ ಯಶ್‌ಪಾಲ್ ಎ.ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಒಡಿಯೂರು ಶ್ರೀ ಗುರುದೇವದತ್ತ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಹಸ್ತದಿಂದ 2011ರಲ್ಲಿ ಉದ್ಘಾಟನೆಗೊಂಡ ಒಡಿಯೂರು ಶ್ರೀ ಸಹಕಾರಿಯು ಸಾದ್ವಿ ಶ್ರೀ ಮಾತಾನಂದಮಯೀಯವರ ಮಾರ್ಗದರ್ಶನ ಹಾಗೂ ಲ| ಎ.ಸುರೇಶ್ ರೈ ಅವರ ಅಧ್ಯಕ್ಷತೆಯಲ್ಲಿ 17 ದಕ್ಷ ನಿರ್ದೇಶಕರನೊಳಗೊಂಡು, ಎಂಟು ಜಿಲ್ಲೆಯನ್ನೊಳಗೊಂಡ ಮೈಸೂರು ಪ್ರಾಂತ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಪ್ರಸ್ತುತ ಸಹಕಾರಿಯು 21 ಶಾಖೆಗಳ ಮೂಲಕ 13ನೇ ವರ್ಷ ಪೂರೈಸುತ್ತಿದೆ. ಸುಮಾರು 327.27 ಕೋಟಿ ಠೇವಣಿ ಸಂಗ್ರಹ ಮಾಡಿ ರೂ. 267.03 ಕೋಟಿ ಹೊರಬಾಕಿ ಸಾಲ, ಸುಮಾರು 349.24 ದುಡಿಯುವ ಬಂಡವಾಳದೊಂದಿಗೆ ರೂ. 4.53 ಕೋಟಿ ಲಾಭ ಗಳಿಸಿರುವುದಲ್ಲದೇ 6 ಸ್ವಂತ ಕಟ್ಟಡಗಳನ್ನು ಹೊಂದಿರುತ್ತದೆ. ಸುಮಾರು 7700 ಸ್ವ-ಸಹಾಯ ಗುಂಪುಗಳನ್ನು ಹೊಂದಿದ್ದು, 56,000ಕ್ಕೂ ಅಧಿಕ ಸದಸ್ಯರನ್ನು ಹೊಂದಿದೆ. ರಾಸಾಯನಿಕಮುಕ್ತ ಕೃಷಿ ಮತ್ತು ಸಮಗ್ರ ಸುಸ್ಥಿರ ಸಾವಯವ ಕೃಷಿ ಅಭಿವೃದ್ಧಿ ಆಗಬೇಕೆಂಬ ನಿಟ್ಟಿನಲ್ಲಿ ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ರೈತರು ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿಯೊಂದಿಗೆ ಸ್ವಾವಲಂಬಿಗಳಾಗಬೇಕು ಎಂಬ ಮಹತ್ತರ ಉದ್ದೇಶ ಇಟ್ಟುಕೊಂಡು ಪ್ರತಿ ರೈತರಿಗೆ ತೋಟದಲ್ಲಿ ಕೃಷಿ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಮೈಕ್ರೋಬಿ ಆಕ್ರೋಟೆಕ್ ಸಂಸ್ಥೆಯ ಸಂಸ್ಥಾಪಕ ಡಾ|.ಕೆ.ಆರ್ ಹುಲ್ಲುನಾಚೇಗೌಡರ ಮಾರ್ಗದರ್ಶನದಲ್ಲಿ ನಡೆಸಲಾಗುತ್ತಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com