Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಆಯ್ಕೆ
    News

    ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಆಯ್ಕೆ

    adminBy adminNovember 20, 2024

    ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ, ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಗೌರವ ತಂದುಕೊಟ್ಟ ಸಾಧಕ

    ಮಂಗಳೂರು: ಕರ್ನಾಟಕ ರಾಜ್ಯ ಏಕೀಕರಣಕ್ಕೆ 69 ವರ್ಷ ತುಂಬಿದ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ​​ಆಫ್ ಕರ್ನಾಟಕ ವತಿಯಿಂದ ನೀಡಲಾಗುವ ಪ್ರತಿಷ್ಠಿತ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತ್ರಿಕೋದ್ಯಮದ ಇತಿಹಾಸದಲ್ಲಿ ಮೊದಲ ಬಾರಿ ನೀಡುವ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ತಿಳಿಸಿದ್ದಾರೆ. ಸಹಕಾರಿ ರಂಗದಲ್ಲಿ ಹೊಸ ಹೊಸ ಅವಿಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆ ನೀಡುತ್ತಾ , ರಾಜ್ಯ-ರಾಷ್ಟ್ರ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್ ) ಗೆ ಘನತೆ, ಗೌರವ ತಂದುಕೊಟ್ಟ ಡಾ. ಎಂ ಎನ್.ರಾಜೇಂದ್ರ ಕುಮಾರ್ ಕಳೆದ 30 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಕಾರಣರಾಗಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಮಾಡಿರುವ ನಿಸ್ವಾರ್ಥ ನಾಯಕತ್ವವನ್ನು ಗುರುತಿಸಿ ಇವರಿಗೆ ನವೆಂಬರ್‌ 27ರಂದು ಬೆಂಗಳೂರು ನಗರದ ಜೆ.ಸಿ.ರಸ್ತೆಯಲ್ಲಿರುವ ಸರ್.ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್) ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    ಎಸ್‌ಸಿಡಿಸಿಸಿ ಬ್ಯಾಂಕ್ ಮೂಲಕ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಿರುವ ರಾಜೇಂದ್ರ ಕುಮಾರ್ ಅವರು ಈ ಬ್ಯಾಂಕ್ ಅನ್ನು ‘ಜನಸ್ನೇಹಿ’ ಬ್ಯಾಂಕಾಗಿ ರೂಪಿಸಿದ ಹೆಗ್ಗಳಿಕೆಗೆ ಪಾತ್ರರಾಗಿರಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹಕಾರಿ ರಂಗಕ್ಕೆ ಹೊಸ ಆಯಾಮ ತಂದುಕೊಟ್ಟ ಇವರು ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ತಂತ್ರಜ್ಞಾನವನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಿದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಮೊಬೈಲ್ ಬ್ಯಾಂಕ್ ಅನ್ನು ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿ ಪರಿಚಯಿಸಿದ ಹೆಗ್ಗಳಿಕೆ ಕೂಡ ಇವರದ್ದು.

    ಸಹಕಾರ , ಸಾಮಾಜಿಕ, ಬ್ಯಾಂಕಿಂಗ್, ಧಾರ್ಮಿಕ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆ ರೂಪಿಸಿದ ಡಾ.ಎಂ.ಎನ್‌.ರಾಜೇಂದ್ರ ಕುಮಾರ್ ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರು . ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಇವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಇವರ ಸಾಮಾಜಿಕ ಸ್ಪಂದನೆಯ ಕಾರ್ಯಗಳನ್ನು ಪರಿಗಣಿಸಿ ಇವರಿಗೆ ಹಲವಾರು ರಾಷ್ಟ್ರೀಯ – ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.

    ಪ್ರಶಸ್ತಿಗಳ ಸರಮಾಲೆ
    ಮುಖ್ಯವಾಗಿ ಶ್ರೀಲಂಕಾದ ಕೊಲಂಬೊ ಮುಕ್ತ ವಿಶ್ವವಿದ್ಯಾಲಯದಿಂದ ‘ ಗೌರವ ಡಾಕ್ಟರೇಟ್ ‘ ಪದವಿ, ಕರ್ನಾಟಕ ಸರಕಾರದಿಂದ ‘ ಸಹಕಾರ ರತ್ನ’ ಪುರಸ್ಕಾರಗಳು ಲಭಿಸಿವೆ. ಮಾತ್ರವಲ್ಲ ‘ ಸಹಕಾರ ವಿಶ್ವ ಬಂಧುಶ್ರೀ ‘ , ‘ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ’, ‘ಮಹಾತ್ಮಾ ಗಾಂಧಿ ಸಮ್ಮಾನ್ ಪ್ರಶಸ್ತಿ’ , ‘ ಬೆಸ್ಟ್ ಚೇರ್‌ಮೆನ್ ನ್ಯಾಷನಲ್ ಎವಾರ್ಡ್’ , ‘ನ್ಯಾಷನಲ್ ಎಕ್ಸ್‌ಲೆನ್ಸ್ ಎವಾರ್ಡ್’ , ‘ಔಟ್‌ಸ್ಟ್ಯಾಂಡಿಂಗ್‌ ಗ್ಲೋಬಲ್ ಲೀಡರ್ ಶಿಪ್ ಎವಾರ್ಡ್’ , ‘ಬಹು ಪ್ರಭಾವಶಾಲಿ ಸಹಕಾರ ನಾಯಕ ಪ್ರಶಸ್ತಿ, ಅಂತಾರಾಷ್ಟ್ರೀಯ ಶ್ರೇಷ್ಠ ನಾಯಕತ್ವ ಎವಾರ್ಡ್, ಅಂತಾರಾಷ್ಟ್ರೀಯ ಸಾಧಕ ಪ್ರಶಸ್ತಿ , ಮದರ್ ತೆರೆಸಾ ಮೆಮೊರಿಯಲ್ ನ್ಯಾಶನಲ್ ಎವಾರ್ಡ್ ಹಾಗೂ ಏಶ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್‌ನಿಂದ ಉಜ್ವಲ ಉದ್ಯಮಿ ಪ್ರಶಸ್ತಿ ಹೀಗೆ ಹಲವಾರು ರಾಷ್ಟ್ರೀಯ , ಅಂತಾರಾಷ್ಟ್ರೀಯ ಪ್ರಶಸ್ತಿಗಳು ಇವರಿಗೆ ಸಂದಿವೆ. ಎಸ್‌ಸಿಡಿಸಿಸಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ ರೂವಾರಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷರಾದ ಬಳಿಕ ಎಸ್‌ಸಿಡಿಸಿಸಿ ಬ್ಯಾಂಕಿಗೆ 22 ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 19 ಬಾರಿ ನಬಾರ್ಡ್ ಪ್ರಶಸ್ತಿ , 3 ಬಾರಿ ಬ್ಯಾಂಕಿಂಗ್ ಫ್ರಾಂಟಿಯರ್ಸ್ ಪ್ರಶಸ್ತಿ ಹಾಗೂ 4 ಬಾರಿ ಎಪಿವೈ ರಾಷ್ಟ್ರೀಯ ಪ್ರಶಸ್ತಿಯೂ ಲಭಿಸಿದೆ.

    Cooperative Cooperative Department Cooperative Registrar Dr. M.N Rajendrakumar Karnataka Madhyama Sahakara Sahakara Spandana SCDCC Bank Spandana Spandana Cooperative Spandana NEws The News Papers Association Of Karnataka Vishwada Hemmeya Kanadiga
    Previous Articleಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯಿಂದ ವೈದ್ಯಕೀಯ ಉಚಿತ ಶಿಬಿರ
    Next Article ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.