ಬೆಳಗಾವಿ: ರಾಜ್ಯದ ಸಹಕಾರ ಕ್ಷೇತ್ರದಲ್ಲಿ ವಿಶಿಷ್ಠ, ವಿಶೇಷ ಸೇವಾ ಕಾರ್ಯಗಳು ಮತ್ತು ಶಿಸ್ತುಬದ್ಧ ಆಡಳಿತದಿಂದ ತನ್ನದೇ ಛಾಪು ಮೂಡಿಸಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಬೆಳಗಾವಿಯಲ್ಲಿ ಗುರುವಾರ ಸಮಾಪನಗೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ “ಶ್ರೇಷ್ಠ ಸಹಕಾರಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎಸ್.ಗುರುರಾಜ್ ಅವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಮತ್ತು ಅನೇಕ ಸಂಸ್ಥೆಗಳು ಜಂಟಿಯಾಗಿ ಬೆಳಗಾವಿಯ ಕೆಎಲ್‌ಇ ವಿದ್ಯಾಸಂಸ್ಥೆಯ ಜೆ.ಎನ್.ಎಂ.ಸಿ. ಆವರಣದಲ್ಲಿ ಆಯೋಜಿಸಿದ್ದ ವರ್ಣರಂಜಿತ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಯಿತು.
https://chat.whatsapp.com/Ge11n7QCiMj5QyPvCc0H19
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಎಂಟು ಜಿಲ್ಲೆಗಳನ್ನೊಳಗೊಂಡ ಮೈಸೂರು ಪ್ರಾಂತದ ಒಬ್ಬರಿಗೆ ಮಾತ್ರ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿದೆ. ಸೊಸೈಟಿಯ ಸರ್ವತೋಮುಖ ಏಳಿಗೆ ಹಾಗೂ ಗಳಿಸಿದ ಲಾಭಾಂಶದಲ್ಲಿ ಒಂದು ಪಾಲನ್ನು ಸಮಾಜಮುಖಿ ಕಾರ್ಯಗಳಿಗೆ ಮುಖ್ಯವಾಗಿ ಆರೋಗ್ಯ, ಸಾಹಿತ್ಯ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡಿ ವಿನಿಯೋಗಿಸುವ ಮೂಲಕ ಅತ್ಯುತ್ತಮ ಕೆಲಸವನ್ನು ಶ್ರೀಶಾ ಸೊಸೈಟಿ ಮಾಡುವಲ್ಲಿ ಅಧ್ಯಕ್ಷರ ಚಿಂತನೆ, ಯೋಚನೆ ಮತ್ತು ಯೋಜನೆಗಳ ಯಶಸ್ವೀ ಅನುಷ್ಠಾನ ಮಾಡುವಲ್ಲಿ ಪಾತ್ರ ತುಂಬಾ ಹಿರಿದು.
ರಾಜ್ಯದ ಸಹಕಾರಿ ಸಚಿವ ರಾಜಣ್ಣ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಜಗದೀಶ ಎಂ.ಕವಟಗಿಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮೊದಲಾದವರು ಗುರುರಾಜ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕ ಶರಣ ಗೌಡ ಪಾಟೀಲ್ ಹಾಗೂ ಮೈಸೂರು ಪ್ರಾಂತದ ವ್ಯವಸ್ಥಾಪಕ ಗುರುಪ್ರಸಾದ್ ಬಂಗೇರ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com