Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ
    News

    ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

    adminBy adminNovember 25, 2024

    ಬೆಳ್ತಂಗಡಿ: ಎಂ.ಸಿ.ಸಿ. ಬ್ಯಾಂಕಿನ 18 ಶಾಖೆಯು ಬೆಳ್ತಂಗಡಿ ಚರ್ಚ್ ರಸ್ತೆಯ ಹತ್ತಿರ, ವೈಭವ್ ಆರ್ಕೇಡ್‌ನ ನೆಲಮಹಡಿಯಲ್ಲಿ ಭಾನುವಾರ ಉದ್ಘಾಟನೆಗೊಂಡಿತು.

    ನೂತನ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್‌ ಧರ್ಮಗುರು ಫಾ| ವಾಲ್ಟರ್ ಡಿಮೆಲ್ಲೊ ಆಶೀರ್ವಚಿಸಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ಭದ್ರತಾ ಕೊಠಡಿಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರೊಕ್ಯೂರೇಟರ್ ಅಬ್ರಹಾಂ ಪಟ್ಟೆರಿಲ್ ಉದ್ಘಾಟಿಸಿದರು. ಇ–ಸ್ಟ್ಯಾಂಪಿಂಗ್ ವ್ಯವಸ್ಥೆಯನ್ನು ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹೆನ್ರಿ ಲೋಬೊ ಉದ್ಘಾಟಿಸಿದರು. ಸಿರಿಯನ್ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಎ.ಜೆ. ಉಪಸ್ಥಿತರಿದ್ದರು.

    ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರ ರತ್ನ ಅನಿಲ್ ಲೋಬೊ, ಬ್ಯಾಂಕಿನ ಸೇವೆ ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಬೆಳ್ತಂಗಡಿ ಪರಿಸರದಲ್ಲಿ ಬ್ಯಾಂಕಿನ ಸಿಬ್ಬಂದಿಗಳು ಭೇಟಿ ಮಾಡಿದ ಸಂದರ್ಭದಲ್ಲಿ ಬೆಳ್ತಂಗಡಿ ಪರಿಸರದ ಜನರು ನೀಡಿದ ಸಹಕಾರ ಮತ್ತು ಬೆಂಬಲಕ್ಕಾಗಿ ವಂದನೆ ಸಲ್ಲಿಸಿದರು. ಶಾಖೆ ಪ್ರಾರಂಭವಾದ ಒಂದು ವರ್ಷದೊಳಗೆ ಲಾಭ ಗಳಿಸಲು ಮತ್ತು ಸಮಾಜಕ್ಕೆ ಸೇವೆ ಸಲ್ಲಿಸಲು ಸಹಕಾರ ಮತ್ತು ಬೆಂಬಲ ಕೋರಿದರು. ಇತರ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ಎಲ್ಲಾ ಸೇವೆಗಳನ್ನು ಎಂ.ಸಿ.ಸಿ. ಬ್ಯಾಂಕ್ ಒದಗಿಸುತ್ತದೆ. ಬ್ಯಾಂಕನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಿಯಂತ್ರಿಸುವುದರಿಂದ ಬ್ಯಾಂಕಿನ ಠೇವಣಿಗಳಿಗೆ DICGC ವಿಮಾ ಸೌಲಭ್ಯವಿದೆ ಎಂದು ಹೇಳಿದರು. ಮುಂAದಿನ ದಿನಗಳಲ್ಲಿ ಗೂಗಲ್ ಪೇ ಮತ್ತು ಯುಪಿಐ ಪಾವತಿಗಳಂತಹ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಬ್ಯಾಂಕ್ ಬರಲಿದೆ ಎಂದು ಹೇಳಿ, ಬ್ಯಾಂಕಿನಲ್ಲಿರುವ ಖಾತೆಗಳಲ್ಲಿ ಸರಾಸರಿ ಒಂದು ಲಕ್ಷ ಇರುವ ಖಾತೆದಾರರಿಗೆ ಯಾವುದೇ ಸೇವಾ ಶುಲ್ಕವಿರುವುದಿಲ್ಲ. ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳುವಂತೆ ವಿನಂತಿಸಿದರು.

    ಫಾ| ವಾಲ್ಟರ್ ಡಿಮೆಲ್ಲೊ ಮಾತನಾಡಿ ಬೆಳ್ತಂಗಡಿಯಲ್ಲಿ ನೂತನ ಶಾಖೆಯನ್ನು ಆರಂಭಿಸಿ ಗ್ರಾಹಕ ಸ್ನೇಹಿ ವಾತಾವರಣ  ಒದಗಿಸಿದ ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು. ಬ್ಯಾಂಕಿನ ಮುಂದಿನ ಯೋಜನೆಗಳಿಗೆ ಆಶೀರ್ವಾದ ಕೋರಿ ಸಮಾಜದಲ್ಲಿ ವಿಶೇಷವಾಗಿ ಬಡವರು ಮತ್ತು ಕೆಳವರ್ಗದ ಜನರಿಗೆ ಬ್ಯಾಂಕ್ ವರದಾನವಾಗಲಿ ಎಂದು ಹಾರೈಸಿದರು.

    ಮಾನಸಿಕ ಮತ್ತು ದೈಹಿಕವಾಗಿ ವಿಕಲಾಂಗ ವ್ಯಕ್ತಿಗಳು ಮತ್ತು ಅನಾಥರ ಆರೈಕೆಗಾಗಿ ಸಿಯೋನ್ ಆಶ್ರಮ್ ಟ್ರಸ್ಟ್, ಗುಂಡಿಬಾಗಿಲು ಮತ್ತು ಕೈಗೆಟಕುವ ದರದಲ್ಲಿ ಅತ್ಯುತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಫಾ| ಎಲ್. ಎಮ್. ಪಿಂಟೊ ಹೆಲ್ತ್‌ಕೇರ್ ಸೆಂಟರ್ ಚಾರಿಟೇಬಲ್ ಟ್ರಸ್ಟ್‌ಗೆ ಬ್ಯಾಂಕಿನ ನಿಧಿಯಿಂದ ದೇಣಿಗೆ ನೀಡಲಾಯಿತು. 

    ಮುಖ್ಯ ಅತಿಥಿಗಳಾಗಿದ್ದ ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರೊಕ್ಯುರೇಟರ್ ಫಾ| ಅಬ್ರಹಾಂ ಪಟ್ಟೆರಿಲ್ ಮಾತನಾಡಿ ಸುತ್ತಮುತ್ತಲಿನ ಇತರ ಬ್ಯಾಂಕ್‌ಗಳಿಗಿಂತ ಭಿನ್ನವಾಗಿ ಮಾನವೀಯತೆಯ ಸೇವೆಯ ಉದಾತ್ತ ಉದ್ದೇಶದಲ್ಲಿ ತೊಡಗಿರುವ ಸಂಸ್ಥೆ ಮತ್ತು ವ್ಯಕ್ತಿಗಳನ್ನು ಪ್ರೋತ್ಸಾಹಿಸುತ್ತಿರುವ ಎಂ.ಸಿ.ಸಿ. ಬ್ಯಾಂಕನ್ನು ಶ್ಲಾಘಿಸಿದರು.   

    ಸಮಾಜ ಸೇವೆಗಾಗಿ ವಿಶೇಷವಾಗಿ ಅಪಘಾತಗಳಲ್ಲಿ ಗಾಯಗೊಂಡವರಿಗೆ ಮತ್ತು ನೈಸರ್ಗಿಕ ವಿಕೋಪಗಳಿಂದ ಹಾನಿಗೊಳಗಾದ ಜನರಿಗೆ ಸಹಾಯ ಮಾಡುತ್ತಿರುವ ಶ್ಚಾರ್ಮಾಡಿ ಹಸನಬ್ಬ, ಕೃಷಿ ಮತ್ತು ತೋಟಗಾರಿಕೆಯಲ್ಲಿ ನವೀನ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಮತ್ತು ಶಿಕ್ಷಣ ಕ್ಷೇತ್ರದ ಕೊಡುಗೆಗಾಗಿ ಕಾಸ್ಮಿರ್ ಮಿನೇಜಸ್, ಸಾಮಾನ್ಯ ಜನರಿಗೆ ವೈದಕೀಯ ಸೇವೆಗಳನ್ನು ಒದಗಿಸುವ ಜನರ ವೈದ್ಯರಾಗಿರುವ ಗುರುವಾಯನಕೆರೆಯ ಡಾ| ವೇಣುಗೋಪಾಲ್ ಶರ್ಮ ಮತ್ತು ದೈಹಿಕ ಅಸಾಮರ್ಥ್ಯದ ಹೊರತಾಗಿಯೂ ಶೈಕ್ಷಣಿಕ ಉತ್ಕೃಷ್ಟತೆ ಸಬಿತಾ ಮೋನಿಸ್ ಇವರನ್ನು ಅವರ ಸೇವೆ ಮತ್ತು ಸಾಧನೆಗಾಗಿ ಬ್ಯಾಕಿನಿಂದ ಗುರುತಿಸಿ ಸನ್ಮಾನಿಸಲಾಯಿತು.

     

    ಕಟ್ಟಡ ಮಾಲೀಕ ಸೀತಾರಾಮ ಶೆಟ್ಟಿ ಮತ್ತು ಇಂಜಿನಿಯರ್ ಕಾರ್ತಿಕ್ ಕಿರಣ್ ಇವರನ್ನು ಸನ್ಮಾನಿಸಲಾಯಿತು. ಶಾಖೆಯಲ್ಲಿ ಮೊದಲ ಖಾತೆಯನ್ನು ತೆರೆದ ಗ್ರಾಹಕರನ್ನು ಸನ್ಮಾನಿಸಲಾಯಿತು. 

    ಎಂಸಿಸಿ ಬ್ಯಾಂಕಿನ ಉಪಾಧ್ಯಕ್ಷ ಜೆರಾಲ್ಡ್ ಡಿಸಿಲ್ವ, ನಿರ್ದೆಶಕರಾದ ಡೇವಿಡ್ ಡಿಸೋಜ, ಅನಿಲ್ ಪತ್ರಾವೊ, ಮೆಲ್ವಿನ್ ವಾಸ್, ರೋಶನ್ ಡಿಸೋಜ, ಡಾ| ಫ್ರೀಡಾ ಡಿಸೋಜ, ಐರಿನ್ ರೆಬೆಲ್ಲೊ, ಡಾ| ಜೆರಾಲ್ಡ್ ಪಿಂಟೊ, ಎಲ್‌ರೊಯ್ ಕಿರಣ್  ಕ್ರಾಸ್ತೊ, ಜೆ.ಪಿ. ರೊಡ್ರಿಗಸ್, ಸಿ.ಜಿ.ಪಿಂಟೊ, ಸುಶಾಂತ್ ಸಲ್ಡಾನ್ಹಾ, ಆಲ್ವಿನ್ ಪಿ. ಮೊಂತೇರೊ, ಮಹಾಪ್ರಬಂಧಕ ಸುನಿಲ್ ಮಿನೇಜಸ್ ಹಾಜರಿದ್ದರು. ನಿರ್ದೇಶಕ ವಿನ್ಸೆಂಟ್ ಲಸ್ರಾದೊ ಸ್ವಾಗತಿಸಿ ಶಾಖಾ ವ್ಯವಸ್ಥಾಪಕ ಶಾರುನ್ ಪಿಂಟೊ ವಂದಿಸಿದರು. ಅವಿಲ್ ಮೋರಾಸ್ ನಿರೂಪಿಸಿದರು.

     

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Anil Lobo Banking Cooperative Cooperative Department Cooperative Registrar Credit Co operative MCC BANK Sahakara Spandana Spandana NEws Sunil Minezes
    Previous Articleನ.22ರಂದು ಸಹಕಾರ ಭಾರತಿ ರಾಜ್ಯ ಸಹಕಾರಿ ಸಮಾವೇಶ
    Next Article ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.