Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕ್ಯಾಂಪ್ಕೊದ ನಿರಂತರ ಪ್ರಯತ್ನಕ್ಕೆ ಸಿಕ್ಕಿದ ಪ್ರತಿಫಲ
    News

    ಕ್ಯಾಂಪ್ಕೊದ ನಿರಂತರ ಪ್ರಯತ್ನಕ್ಕೆ ಸಿಕ್ಕಿದ ಪ್ರತಿಫಲ

    adminBy adminDecember 4, 2024

    ಅಡಿಕೆಯ ಸಮಗ್ರ ಸಂಶೋಧನೆಗೆ ಕೇಂದ್ರ ಕೃಷಿ ಸಚಿವಾಲಯ ನಿರ್ಧಾರ

    ಮಂಗಳೂರು: ಅಡಿಕೆ ಕ್ಯಾನ್ಸರ್‌ಕಾರಕವೆಂದು ವರ್ಗೀಕರಿಸಿದ ವಿಶ್ವ ಆರೋಗ್ಯ ಸಂಸ್ಥೆಯ ಪ್ರಮಾದವನ್ನು ಪುರಾವೆ ಸಮೇತ ಸಂಸದರಿಗೆ ಮನವರಿಕೆ ಮಾಡಿಸಿದ ಕ್ಯಾಂಪ್ಕೊ ಸಂಸ್ಥೆಯ ಪ್ರಯತ್ನಕ್ಕೆ ಯಶಸ್ಸು ಲಭಿಸಿದೆ. ಸಂಸತ್ ಅಧಿವೇಶನದಲ್ಲಿ ಅಡಿಕೆ ಬೆಳೆಯುವ ಪ್ರದೇಶದ ಸಂಸದರ ಪ್ರಯತ್ನದಿಂದಾಗಿ, “ಅಡಿಕೆ ಮತ್ತು ಮಾನವರ ಆರೋಗ್ಯದ ಕುರಿತು ಪುರಾವೆ ಆಧಾರಿತ ಸಂಶೋಧನೆ” ನಡೆಸಲು ನಿರ್ಧರಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಕ್ಯಾಂಪ್ಕೊ ಶ್ಲಾಘಿಸಿದೆ. ಇದಕ್ಕೆ ಶ್ರಮಿಸಿದ ಅಡಿಕೆ ಬೆಳೆಯುವ ಪ್ರದೇಶದ ಎಲ್ಲಾ ಸಂಸದರಿಗೆ ಹಾಗೂ ಭಾರತೀಯ ಜೀವನಕ್ರಮದಲ್ಲಿ ಅಡಿಕೆಯ ಪಾತ್ರವನ್ನು ಗುರುತಿಸಿರುವ ಕೇಂದ್ರ ಕೃಷಿ ಸಚಿವರಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿಯವರು, ಅಡಿಕೆ ಬೆಳೆಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ವಿಶ್ವ ಆರೋಗ್ಯ ಸಂಸ್ಥೆ , ತಪ್ಪು ಗ್ರಹಿಕೆಯಿಂದ ಅಡಿಕೆಯನ್ನು ಕ್ಯಾನ್ಸರ್‌ಕಾರಕವೆಂದು ವರ್ಗೀಕರಿಸಿರುವ ಕ್ರಮದ ವಿರುದ್ಧ ಕ್ಯಾಂಪ್ಕೊ ಮಾಧ್ಯಮಗಳು ಮತ್ತು ಜನಪ್ರತಿನಿಧಿಗಳ ಮೂಲಕ ನಿರಂತರ ಅಭಿಯಾನ ಮಾಡುತ್ತಲೇ ಬಂದಿದ್ದು, ಕೊನೆಗೂ ಸರಕಾರಕ್ಕೆ ಮನವರಿಕೆ ಮಾಡುವಲ್ಲಿ ಯಶಸ್ವಿಯಾಗಿದೆ. ಎಐಐಎಂಎಸ್, ಸಿಎಸ್‌ಐಆರ್-ಸಿಸಿಎಂಬಿ, ಐಐಎಸ್‌ಸಿ ಮುಂತಾದ ದೇಶದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ಸಹಕಾರದ ಮೂಲಕ “ಅಡಿಕೆ ಮತ್ತು ಮಾನವನ ಆರೋಗ್ಯ ಬಗ್ಗೆ ಪುರಾವೆ ಆಧಾರಿತ ಸಂಶೋಧನೆ” ನಡೆಸಲು ಕೇಂದ್ರ ಕೃಷಿ ಸಚಿವಾಲಯ ಅನುಮೋದನೆ ನೀಡಿದೆ. ಇದರಿಂದ ಅಡಿಕೆಯ ಕುರಿತು ಇರುವ ತಪ್ಪು ಗ್ರಹಿಕೆ ಹೋಗಲಾಡಿಸಿ , ಅದರ ಆರೋಗ್ಯಕರ ಉಪಯೋಗಗಳ ವೈಜ್ಞಾನಿಕ ದಾಖಲೆ ಸಿಗಲು ಸಾಧ್ಯವಾಗಲಿದೆ.
    ಕೇಂದ್ರ ಸರಕಾರದ ನಿರ್ಧಾರವು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಆದಷ್ಟು ಬೇಗ ಸಂಶೋಧನೆ ಪ್ರಾರಂಭಿಸುವಂತೆ ಅಡಿಕೆ ಬೆಳೆಯುವ ಪ್ರದೇಶಗಳ ಸಂಸದರು ಸರಕಾರವನ್ನು ಒತ್ತಾಯಿಸಲು ಕ್ಯಾಂಪ್ಕೊ ಎಲ್ಲಾ ಸಂಸದರಲ್ಲಿ ಮನವಿ ಮಾಡಿದೆ.


    ಅಡಿಕೆಯನ್ನು ಗುಟ್ಕಾ ಮತ್ತು ತಂಬಾಕಿನ ಜೊತೆ ಮಿಶ್ರಣ ಮಾಡಿದ ಉತ್ಪನ್ನಗಳ ಸಂಶೋಧನಾ ವರದಿಗಳನ್ನು ಗಣನೆಗೆ ತೆಗೆದುಕೊಂಡು ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯನ್ನು ಕ್ಯಾನ್ಸರ್‌ಕಾರಕವೆಂದು ವರ್ಗೀಕರಣ ಮಾಡಿತ್ತು. ಆದರೆ ಕ್ಯಾಂಪ್ಕೊ ಮೊದಲಿನಿಂದಲೂ ಅಡಿಕೆಯ ಮೂಲ ರೂಪದಲ್ಲಿನ ಉಪಯೋಗವನ್ನು ಸಂಶೋಧಿಸಿ ವರ್ಗೀಕರಿಸಬೇಕೆಂದು ಪ್ರತಿಪಾದಿಸುತ್ತಲೇ ಬಂದಿದೆ. ಆ ರೀತಿಯಲ್ಲಿ ಮಾಡಿದ ಪ್ರತಿಯೊಂದು ಸಂಶೋಧನಾ ವರದಿಗಳು ಅಡಿಕೆ ಕ್ಯಾನ್ಸರ್ ರೋಗವನ್ನು ಪ್ರತಿಬಂಧಿಸುವ ಔಷಧೀಯ ಗುಣಗಳ ಬಗ್ಗೆ ಸಾಕ್ಷೀಕರಿಸಿದ ದಾಖಲೆಗಳಿವೆ.
    ಕೇಂದ್ರ ಸರಕಾರದ ಅನುಮೋದನೆಯಿಂದ ಲಕ್ಷಾಂತರ ಅಡಿಕೆ ಬೆಳೆಗಾರರ ಹಿತ ಕಾಪಾಡಲು ಶ್ರಮಿಸುತ್ತಿರುವ ಕ್ಯಾಂಪ್ಕೊದ ಪ್ರಯತ್ನಕ್ಕೆ ನೈತಿಕ ಬಲ ಸಿಕ್ಕಿದೆ. ಈ ಯಶಸ್ಸಿಗೆ ಕಾರಣಕರ್ತರಾದ ಕೇಂದ್ರ ಕೃಷಿ ಸಚಿವರಿಗೆ ಹಾಗೂ ಎಲ್ಲಾ ಸಂಸದರಿಗೆ ಸಮಸ್ತ ಅಡಿಕೆ ಬೆಳೆಗಾರರ ಪರವಾಗಿ ಕ್ಯಾಂಪ್ಕೊ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    AIIMS Areccanut Banking Campco Co Operative ministry IISC Kishor kumar Kodgi Nirmala Seetharaman Spandana NEws World health Organisation
    Previous Articleಲೋಕಸಭೆಯಲ್ಲಿ ಬ್ಯಾಂಕಿಂಗ್‌ ಕಾನೂನುಗಳ (ತಿದ್ದುಪಡಿ) ಮಸೂದೆ ಅಂಗೀಕಾರ
    Next Article ಸಹಕಾರ ಸಂಘಗಳ ಆಡಿಟ್‌ ವರದಿ ಸಂಸತ್‌ನಲ್ಲಿ ಮಂಡನೆ?

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.