Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿಇಒಗಳಿಂದ ಸಂಸ್ಥೆಗೆ ಉನ್ನತ ಸ್ಥಾನಮಾನ
    News

    ಸಿಇಒಗಳಿಂದ ಸಂಸ್ಥೆಗೆ ಉನ್ನತ ಸ್ಥಾನಮಾನ

    adminBy adminDecember 26, 2024

    ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರ ಸಭೆಯಲ್ಲಿ ಭಾಸ್ಕರ ದೇವಸ್ಯ ಅಭಿಪ್ರಾಯ

    ಮಂಗಳೂರು: ಯಾವುದೇ ಒಂದು ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜವಾಬ್ದಾರಿಯುತ ಸ್ಥಾನದಲ್ಲಿ ಕೆಲಸ ಮಾಡುವವರು. ಸಿಇಒಗಳಿಂದ ಆಯಾ ಸಂಸ್ಥೆಗಳು ಉನ್ನತ ಸ್ಥಾನಕ್ಕೇರಬಲ್ಲದು. ಅದಕ್ಕೆ ತಕ್ಕಂತೆ ಸಿಇಒಗಳ ಕಾರ್ಯನಿರ್ವಹಣೆ ಇರಬೇಕು ಎಂದು ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ ಅಭಿಪ್ರಾಯಪಟ್ಟರು.


    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವತಿಯಿಂದ ಗುರುವಾರ ಮಂಗಳೂರಿನ ಹೋಟೆಲ್‌ ಶ್ರೀನಿವಾಸದಲ್ಲಿ ಹಮ್ಮಿಕೊಂಡ ದಕ್ಷಿಣ ಕನ್ನಡ ಜಿಲ್ಲಾ ಸೌಹಾರ್ದ ಸಹಕಾರಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಯಾವುದೇ ಸೊಸೈಟಿಯ ಆಡಳಿತ ಮಂಡಳಿಗಳು ಐದು ವರ್ಷ ಮಾತ್ರ ಕಾರ್ಯನಿರ್ವಹಿಸುವುದು. ಆದರೆ ಸಿಇಒಗಳು ಹಲವು ವರ್ಷ ಕೆಲಸ ಮಾಡಬಹುದು. ಮುಖ್ಯ ಕಾರ್ಯನಿರ್ಹಣಾಧಿಕಾರಿಗಳು ಸಮಾಜ, ಸೊಸೈಟಿಯ ಆಡಳಿತ ಮಂಡಳಿಗಳು, ಸದಸ್ಯರು ಹಾಗೂ ಜನರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾರೆ. ಸೌಹಾರ್ದ ಸಹಕಾರಿ ಸಂಸ್ಥೆಗಳ ಮೇಲೆ ಜನ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ಹೇಳಿದರು.


    ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌, ಸೌಹಾರ್ದ ಸಹಕಾರಿ ಸಂಘಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ಆಡಳಿತ ಮಂಡಳಿಗಳು ನೀತಿ ರೂಪಣೆಯ ಕೆಲಸ ಮಾಡಿದರೆ ಸಿಇಒಗಳು ಅದನ್ನು ಅನುಷ್ಠಾನಕ್ಕೆ ತರುವ ಕೆಲಸ ಮಾಡುವವರು. ನಿರ್ದೇಶಕ ಮಂಡಳಿಯ ವಿಶ್ವಾಸ ಪಡೆದುಕೊಂಡು ಸಿಇಒಗಳು ಕಾರ್ಯನಿರ್ವಹಿಸಬೇಕು. ಸರ್ಕಾರ ಮಾಡದ ಎಷ್ಟೋ ಕೆಲಸಗಳನ್ನು ಇಂದು ಸೌಹಾರ್ದ ಸಹಕಾರಿ ಸಂಸ್ಥೆಗಳು ಮಾಡುತ್ತಿವೆ. ಸಿಇಒಗಳು ನಮ್ಮದೇ ಸಂಸ್ಥೆ ಎಂಬ ಮನೋಭಾವದಿಂದ ಕೆಲಸ ಮಾಡಿದರೆ ಆ ಸೊಸೈಟಿಗಳು ಯಶಸ್ವಿಯಾಗುತ್ತವೆ ಎಂದು ಹೇಳಿದರು.
    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಪ್ರಾಂತೀಯ ಅಧಿಕಾರಿ ಗುರುಪ್ರಸಾದ್‌ ಬಂಗೇರ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಕ್ಯಾಲೆಂಡರ್‌ ಮತ್ತು ಡೈರಿ ಬಿಡುಗಡೆಗೊಳಿಸಲಾಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bharathi G.Bhat Bhaskara Devasya CEO Meeting Cooperative Department Cooperative Registrar Guruprasad Bangera Hotel Shreenivasa Karnataka Rajya Samyukta Souharda Sahakari Sahakara Spandana Souharda Sahakari Spandana Vijay B S
    Previous Articleಪ್ರಿಯದರ್ಶಿನಿ ಸೊಸೈಟಿಯ ಕಾರ್ಯವೈಖರಿ ಶ್ಲಾಘನೀಯ
    Next Article ಸಹಕಾರ ತರಬೇತಿ ಕೋರ್ಸ್‌ಗೆ ಅರ್ಜಿ ಆಹ್ವಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.