Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕ್ರೀಡೆ ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಅತ್ಯಗತ್ಯ
    News

    ಕ್ರೀಡೆ ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಅತ್ಯಗತ್ಯ

    adminBy adminDecember 31, 2024

    ಅಂತರರಾಷ್ಟ್ರೀಯ ಕ್ರೀಡಾಪಟು ಸುಕನ್ಯಾ ಜಗದೀಶ್ ಆಚಾರ್ಯ ಅಭಿಪ್ರಾಯ

    ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ಮಂಗಳೂರು ಇದರ ವಜ್ರಮಹೋತ್ಸವ ಪ್ರಯುಕ್ತ ಸದಸ್ಯರಿಗೆ ಮತ್ತು ಸಿಬ್ಬಂದಿಯವರಿಗೆ ಭಾನುವಾರ ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡೋತ್ಸವ ನಡೆಯಿತು.

    ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆಯಲ್ಲಿ , ಅಂತರಾಷ್ಟ್ರೀಯ ಕ್ರೀಡಾಪಟು ಸುಕನ್ಯಾ ಜಗದೀಶ್ ಆಚಾರ್ಯ ಉದ್ಘಾಟಿಸಿ, ಪಾರಿವಾಳ ಹಾರಿಸುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸುಕನ್ಯಾ ಜಗದೀಶ್ ಆಚಾರ್ಯ, ಕ್ರೀಡೆಯು ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಸಹಕಾರಿ ಎಂದು ಹೇಳಿದರು.

    ಮುಖ್ಯ ಅತಿಥಿ ಮಂಗಳೂರು ಮಹಾನಗರ ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನ ಸದಸ್ಯೆ ಸಂಧ್ಯಾ ಮೋಹನ್ ಆಚಾರ್ಯ ಮಾತನಾಡಿ ಒತ್ತಡದ ಜೀವನವನ್ನು ನಿಭಾಯಿಸಲು ಕ್ರೀಡೆ ಅಗತ್ಯ ಎಂದು ಹೇಳಿದರು. ಶ್ರೀ ಕಾಳಿಕಾಂಬಾ ಸೇವಾ ಸಮಿತಿ ರಥಬೀದಿ ಮಂಗಳೂರು ಇದರ ಅಧ್ಯಕ್ಷ ಜಗದೀಶ್ ಆಚಾರ್ಯ ಸಿದ್ದಕಟ್ಟೆ ಶುಭ ಹಾರೈಸಿದರು. ಸಂಸ್ಥೆಯ ಉಪಾಧ್ಯಕ್ಷ ಎ.ಆನಂದ ಆಚಾರ್ಯ ಮತ್ತು ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಕೃಷ್ಣಾಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್, ಕೆ.ಶಶಿಕಾಂತ ಆಚಾರ್ಯ, ರೋಹಿಣಿ ಎಂ.ಪಿ., ರಮೇಶ್ ರಾವ್ ಯು., ಮಲ್ಲಪ್ಪ ಪತ್ತಾರ್, ಕೆ.ಪ್ರಕಾಶ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ ಎ.ಎಸ್. ಮತ್ತು ಸಂಸ್ಥೆಯ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

    ಸಂಸ್ಥೆಯ ಉಪಾಧ್ಯಕ್ಷ ಎ.ಆನಂದ ಆಚಾರ್ಯ ಸ್ವಾಗತಿಸಿದರು. ನಿರ್ದೇಶಕ ವೈ.ವಿ.ವಿಶ್ವಜ್ಞ ಮೂರ್ತಿ ಪ್ರಾರ್ಥನೆಗೈದರು ಶ್ರೀಕಾಂತ್ ಆಚಾರ್ಯ ಮತ್ತು ಶ್ರೀಮತಿ ಉಷಾ ಮನೋಜ್ ನಿರೂಪಣೆಗೈದರು.

    ಸಂಸ್ಥೆಯ ಸದಸ್ಯರು ಮತ್ತು ಸಿಬ್ಬಂದಿಯವರಿಗೆ 100 ಮೀಟರ್ ಓಟ, 200 ಮೀಟರ್ ಓಟ, 400 ಮೀಟರ್ ಓಟ, 400 ಮೀಟರ್ ರಿಲೇ, 400 ಮೀಟರ್ ವೇಗದ ನಡಿಗೆ ಮತ್ತು ಹಗ್ಗ ಜಗ್ಗಾಟ ಏರ್ಪಡಿಸಿ ವಿಜೇತರಿಗೆ ಪದಕ ಮತ್ತು ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು. ಒಂದರಿಂದ ಐದನೇ ತರಗತಿಯ ಸದಸ್ಯರ ಮತ್ತು ಸಿಬ್ಬಂದಿಯವರ ಮಕ್ಕಳಿಗೆ 50 ಮೀಟರ್ ಓಟ, ಕಪ್ಪೆ ಜಿಗಿತ ಮತ್ತು ಬಾಲ್ ಎಸೆತ ಸ್ಪರ್ಧೆ ಏರ್ಪಡಿಸಲಾಯಿತು.

    Banking Co Operative ministry Cooperative Cooperative Department Cooperative Registrar Kreedakuta Mangala stadium S K Goldsmiths Industrial Co Operative Society Sahakara Spandana Souharda Sahakari sports
    Previous Articleಆರ್ಥಿಕ ವಿದ್ಯಮಾನಗಳ ಸ್ಥಿತಿಗತಿಗನುಸಾರ ಸಹಕಾರಿ ಬೆಳವಣಿಗೆ
    Next Article ಜನವರಿ 6ರಂದು ಸಮಷ್ಟಿ ಸೌಹಾರ್ದ ಸಹಕಾರಿಯ ಸ್ಥಳಾಂತರಿತ ಪ್ರಧಾನ ಕಚೇರಿ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.