Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಇಂಡಿಯಾ ಬುಕ್ ಆಫ್ ರೆಕಾರ್ಡ್ ಪಟ್ಟಿಗೆ ಸಹಕಾರಿ ಧ್ವಜಾರೋಹಣ
    News

    ಇಂಡಿಯಾ ಬುಕ್ ಆಫ್ ರೆಕಾರ್ಡ್ ಪಟ್ಟಿಗೆ ಸಹಕಾರಿ ಧ್ವಜಾರೋಹಣ

    adminBy adminJanuary 1, 2025

    ಸೌಹಾರ್ದ ಸಹಕಾರಿ ದಿನ, ಸೌಹಾರ್ದ ಆಂದೋಲನದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಧ್ವಜಾರೋಹಣ 

    ಬೆಂಗಳೂರು: ಸೌಹಾರ್ದ ಸಹಕಾರಿ ದಿನ, ಸೌಹಾರ್ದ ಆಂದೋಲನದ ರಜತ ಮಹೋತ್ಸವದ ಪ್ರಾರಂಭ ಮತ್ತು ಹೊಸ ಕ್ಯಾಲೆಂಡರ್ ವರ್ಷವನ್ನು ಸಂಯುಕ್ತ ಸಹಕಾರಿ ಹಾಗೂ ಕರ್ನಾಟಕದ 2000ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳಲ್ಲಿ ಬುಧವಾರ ಬೆಳಗ್ಗೆ 10ರಿಂದ 11 ಗಂಟೆವರೆಗೆ ಏಕಕಾಲದಲ್ಲಿ ಆಚರಿಸಲಾಗಿದ್ದು ಇದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಪಟ್ಟಿಗೆ ದಾಖಲಾಗಿದೆ.

    https://chat.whatsapp.com/Ge11n7QCiMj5QyPvCc0H19

    ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಸೌಹಾರ್ದ ಸಹಕಾರಿ ರಜತ ಮಹೋತ್ಸವದ ಅಂಗವಾಗಿ ಸಹಕಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕರ್ನಾಟಕದಲ್ಲಿ ಸೌಹಾರ್ದ ಸಹಕಾರಿ ಚಳುವಳಿಯು ಸ್ವಾಯತ್ತತೆ, ಸ್ವಯಂ ಆಡಳಿತ, ಸ್ವಯಂ ನಿಯಂತ್ರಣದ ದೃಷ್ಟಿಕೋನದಿಂದ ವೇಗವಾಗಿ ಬೆಳೆಯುತ್ತಿದೆ. ಪ್ರಸ್ತುತ ರಾಜ್ಯದಲ್ಲಿ 6500 ಸೌಹಾರ್ದ ಸಹಕಾರಿ ಸಂಘಗಳಿದ್ದು ಹೊಂದಿದ್ದು, ಇಂದಿನ ಆಚರಣೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸೇರಿದೆ ಎಂದು ಹೇಳಿದರು. ಕರ್ನಾಟಕದ ಎಲ್ಲಾ ಸೌಹಾರ್ದ ಸಹಕಾರಿ ಸಂಘಗಳು ಈ ನಿರ್ದಿಷ್ಟ ವರ್ಷದಲ್ಲಿ ಕರ್ನಾಟಕದಲ್ಲಿ ಪ್ರಬಲ ಸೌಹಾರ್ದ ಚಳುವಳಿಯ ಬೆಳವಣಿಗೆಗೆ ಶ್ರಮಿಸಲು ಬದ್ಧತೆಯಿಂದ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.


    ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕ ಶರಣ ಗೌಡ ಜಿ.ಪಾಟೀಲ ಮಾತನಾಡಿ, ಕರ್ನಾಟಕದಲ್ಲಿ ಸೌಹಾರ್ದ ಸಹಕಾರಿ ಅಂದೋಲನ ಉತ್ತಮವಾಗಿ ಬೆಳೆದು ಯುವಜನತೆಯಲ್ಲಿ ಸಹಕಾರಿ ಆಂದೋಲನದ ಬಗ್ಗೆ ವಿಶ್ವಾಸ ಮೂಡಿಸಿದೆ. ಇಂದಿನ ಸೌಹಾರ್ದ ಸಹಕಾರಿ ದಿನ, ರಜತ ಮಹೋತ್ಸವ ಆರಂಭದ ವರ್ಷದ ದಿನ ಮತ್ತು ಹೊಸ ಕ್ಯಾಲೆಂಡರ್ ವರ್ಷ 2025ರ ದಿನದ ಆಚರಣೆಯು ಕರ್ನಾಟಕದ ಎಲ್ಲಾ ಸೌಹಾರ್ದ ಸಹಕಾರಿ ಸಂಸ್ಥೆಗಳಲ್ಲಿ ಸಹಕಾರಿ ಧ್ವಜಾರೋಹಣದಲ್ಲಿ ದಾಖಲೆಯ ಆಚರಣೆಗಳನ್ನು ಮಾಡಿದೆ ಎಂದು ತಿಳಿಸಿದರು.
    ಸಂಯುಕ್ತ ಸಹಕಾರಿಯ ತರಬೇತಿ ವ್ಯವಸ್ಥಾಪಕ ಶಿವಕುಮಾರ ಬಿರಾದಾರ್ ವಂದನಾರ್ಪಣೆ ಸಲ್ಲಿಸಿದರು.

    ಇಂಡಿಯಾ ಬುಕ್ ಆಫ್ ರೆಕಾರ್ಡ್‌ನ ತೀರ್ಪುಗಾರರು “ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಹಕಾರಿ ಧ್ವಜಾರೋಹಣ ದಿನವು 1500ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಹಕಾರಿ ಧ್ವಜವನ್ನು ಹಾರಿಸುವ ಮೂಲಕ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರಿದೆ” ಎಂದು ಘೋಷಿಸಿ, ಸಂಯುಕ್ತ ಸಹಕಾರಿಯ ಅಧ್ಯಕ್ಷರಿಗೆ ದಾಖಲೆ ಪತ್ರ ಹಸ್ತಾಂತರಿಸಿದರು.

    ಕೇಂದ್ರ ಕಚೇರಿಯ ಅಧಿಕಾರಿ ರಾಜೇಶ್ ಕೆ ಕಾರ್ಯಕ್ರಮ ನಿರೂಪಿಸಿದರು. ಬೆಂಗಳೂರು ಪ್ರಾಂತೀಯ ವ್ಯವಸ್ಥಾಪಕ ಶ್ರೀಧರ್ ಕಾರ್ಯಕ್ರಮದ ವಂದನಾರ್ಪಣೆ ಹಾಗೂ ಸಹ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಹೆಚ್ ಸ್ವಾಗತಿಸಿದರು.
    ಸಂಯುಕ್ತ ಸಹಕಾರಿಯ ಸಿಬ್ಬಂದಿಗಳು ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    25th year of souharda sahakari India book of records Karnataka Rajya Samyukta Souharda Sahakari sahakari dhwajarohana
    Previous Articleಸೌಹಾರ್ದ ಸಹಕಾರಿ ದಿನ ಆಚರಣೆ, ಧ್ವಜಾರೋಹಣ
    Next Article ಜನವರಿ 4ರಂದು ಉಡುಪಿಯ ಸಾಲಿಗ್ರಾಮದಲ್ಲಿ ಸೌಹಾರ್ದ ಸಹಕಾರಿ ದಿನ ಆಚರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.