Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನವರಿ 4ರಂದು ಉಡುಪಿಯ ಸಾಲಿಗ್ರಾಮದಲ್ಲಿ ಸೌಹಾರ್ದ ಸಹಕಾರಿ ದಿನ ಆಚರಣೆ
    News

    ಜನವರಿ 4ರಂದು ಉಡುಪಿಯ ಸಾಲಿಗ್ರಾಮದಲ್ಲಿ ಸೌಹಾರ್ದ ಸಹಕಾರಿ ದಿನ ಆಚರಣೆ

    adminBy adminJanuary 2, 2025

    ಸಾಕ್ಷ್ಯಚಿತ್ರ ಪ್ರದರ್ಶನ, ವಿಚಾರಗೋಷ್ಠಿ, ಸಾಧಕ ಸಹಕಾರಿಗಳಿಗೆ ಗೌರವಾರ್ಪಣೆ

    ಉಡುಪಿ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಶ್ರೀ ಜೈ ಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ, ಶ್ರೀ ಕೃಷ್ಣ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ, ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಕೋಡಿ, ಕನ್ಯಾಣ ಇವರ ಸಹಕಾರದೊಂದಿಗೆ ಜನವರಿ 4ರಂದು ಸೌಹಾರ್ದ ಸಹಕಾರಿ ದಿನಾಚರಣೆ, ಬೆಳ್ಳಿ ಹಬ್ಬದ ವರ್ಷ ಕಾರ್ಯಕ್ರಮ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಗಿರಿಜಾ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

    https://chat.whatsapp.com/Ge11n7QCiMj5QyPvCc0H19
    ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅದಕ್ಕೆ ಮೊದಲು 10ರಿಂದ ಸಾಕ್ಷ್ಯಚಿತ್ರ ಪ್ರದರ್ಶನಗೊಳ್ಳಲಿದೆ. ಉಡುಪಿ ಶಾಸಕ ಯಶ್‌ಪಾಲ್ ಎ.ಸುವರ್ಣ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ್ ಎಸ್.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಹಕಾರಿಗಳಿಗೆ ಸನ್ಮಾನ ನೆರವೇರಿಸಲಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸಹಕಾರಿಗಳಿಗೆ ಅಭಿನಂದನೆ ನೆರವೇರಿಸಲಿದ್ದಾರೆ.

    ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕಿ ಲಾವಣ್ಯ ಕೆ., ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ ರಾವ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ದಕ್ಷಿಣ ಕನ್ನಡ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಭಾಸ್ಕರ್ ದೇವಸ್ಯ, ಜೈ ಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಅಶೋಕ್ ಪ್ರಭು, ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ, ಕೋಡಿ ಕನ್ಯಾಣ ಅಧ್ಯಕ್ಷ ಶಂಭು ಪೂಜಾರಿ, ಶ್ರೀ ಕೃಷ್ಣ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ.ನಾಯ್ಕ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ತುಳು ಶಿವಳ್ಳಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಗದೀಶ್ ಹೆಬ್ಬಾರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
    ಮಧ್ಯಾಹ್ನ12.30ಕ್ಕೆ “ಸೌಹಾರ್ದ ಸಹಕಾರಿ ರಂಗ ಅಂದು… ಇಂದು… ಮುಂದು…” ವಿಚಾರಗೋಷ್ಠಿ ನಡೆಯಲಿದ್ದು, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಪಿ.ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೈಂದೂರು ಶ್ರೀರಾಮ ಸೌಹಾರ್ದ ಸಹಕಾರಿಯ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ರಾಜು ಪೂಜಾರಿ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಮಧುಸೂದನ್ ಬಿ.ನಾಯಕ್, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎ.ಸುರೇಶ್‌ ರೈ, ಸಾಲಿಗ್ರಾಮ ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಸೋಮಯಾಜಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮಾಜಿ ವೃತ್ತಿಪರ ನಿರ್ದೇಶಕ ಸದಾಶಿವ ಶೆಟ್ಟಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮಾಜಿ ನಿರ್ದೇಶಕ ಭಾಸ್ಕರ್ ಕಾಮತ್, ಚಾರ್ಟರ್ಡ್‌ ಅಕೌಂಟೆಂಟ್‌ ಗಿರೀಶ್ ಪೈ ಬಿ ಗೌರವ ಉಪಸ್ಥಿತರಿರಲಿದ್ದಾರೆ. ಪತ್ರಕರ್ತ ಅರುಣ್‌ ಕುಮಾರ್‌ ಶಿರೂರು ವಿಚಾರಗೋಷ್ಠಿ ನಡೆಸಿಕೊಡಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Belli Habba Co Operative ministry Cooperative Cooperative Department Cooperative Registrar Karnataka Rajya Souharda Samyuktha Sahakara Spandana Sahakari niyamitha Shree Jai Ganesh Credit Souhrada Sahakari Shree Krishna Souharda Sahakari Sangha Saligrama Shree Ramanjaneya Vividhoddesha Souharda Sahakari Niyamitha Souharda Sahakari Souharda Sahakari dinacharane Spandana Udupi Jilla Souharda Sahakari Sanghagala Okkuta
    Previous Articleಇಂಡಿಯಾ ಬುಕ್ ಆಫ್ ರೆಕಾರ್ಡ್ ಪಟ್ಟಿಗೆ ಸಹಕಾರಿ ಧ್ವಜಾರೋಹಣ
    Next Article ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆ ನಾಳೆ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.