Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಶಶಿಕುಮಾರ್‌ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ನೀಲಯ ಎಂ.ಅಗರಿ ಆಯ್ಕೆ
    News

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಶಶಿಕುಮಾರ್‌ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ನೀಲಯ ಎಂ.ಅಗರಿ ಆಯ್ಕೆ

    adminBy adminJanuary 6, 2025

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಶಶಿಕುಮಾರ್‌ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ನೀಲಯ ಎಂ.ಅಗರಿ ಆಯ್ಕೆ ಅವರು ಅವರೋಧವಾಗಿ ಆಯ್ಕೆಯಾಗಿದ್ದಾರೆ.
    ಸೋಮವಾರ ಯೂನಿಯನ್‌ನ ಕಚೇರಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಉಪಸ್ಥಿತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್‌ ರೈ ಬಾಲ್ಯೊಟ್ಟು(ಪುತ್ತೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ) ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಎಡಪದವು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಅಧ್ಯಕ್ಷ ನೀಲಯ ಎಂ.ಅಗರಿ(ಮಂಗಳೂರು ತಾಲೂಕಿನ (ಮೂಡುಬಿದಿರೆ ಮತ್ತು ಮೂಲ್ಕಿ ಫಿರ್ಕಾ ಹೊರತುಪಡಿಸಿ) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ) ಅವರನ್ನು ಆರಿಸಲಾಯಿತು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ವಿನಯ ಕುಮಾರ್‌ ಸೂರಿಂಜೆ, ಬಿ.ಪದ್ಮಶೇಖರ ಜೈನ್(ಬಂಟ್ವಾಳ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ), ವಿಷ್ಣು ಭಟ್ ಬಿ. (ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ), ಜೋಯ್ಲಸ್‌ ಡಿಸೋಜ(ಮಂಗಳೂರು ತಾಲೂಕಿನ ಮೂಡುಬಿದಿರೆ ಮತ್ತು ಮೂಲ್ಕಿ ಫಿರ್ಕಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ), ಸತೀಶ್‌ ಕೆ(ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ), ಸುಧಾಕರ ಪಿ.ಶೆಟ್ಟಿ(ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕ್ಷೇತ್ರ), ಮಂಜುನಾಥ ಎನ್‌.ಎಸ್‌(ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಹಕಾರಿ ಸಂಘಗಳ ಕ್ಷೇತ್ರ), ಸವಿತಾ ಎನ್‌.ಶೆಟ್ಟಿ(ಮಹಿಳಾ ಸಹಕಾರಿ ಸಂಘಗಳ ಕ್ಷೇತ್ರ), ಡಾ.ಎಸ್‌.ಆರ್‌.ಹರೀಶ್‌ ಆಚಾರ್ಯ(ಪಟ್ಟಣ ಸಹಕಾರಿ ಬ್ಯಾಂಕ್‌, ಪತ್ತಿನ ಸಹಕಾರಿ ಸಂಘಗಳ ಕ್ಷೇತ್ರ), ಕೆ.ಸಂಜೀವ ಪೂಜಾರಿ(ಮೀನುಗಾರಿಕಾ ಸಹಕಾರ ಸಂಘಗಳ, ಕೈಗಾರಿಕಾ ಸಹಕಾರಿ ಸಂಘಗಳ ಕ್ಷೇತ್ರ), ಪ್ರವೀಣ್‌ ಗಿಲ್ಬರ್ಟ್‌ ಪಿಂಟೊ(ಜಿಲ್ಲೆಯ ಮಾರಾಟ ಸಹಕಾರಿ ಸಂಘಗಳ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಹಕಾರಿ ಸಂಘಗಳ ಕ್ಷೇತ್ರ), ಚಿತ್ತರಂಜನ್‌ ಬೋಳಾರ್‌(ಮೇಲಿನ ಎಲ್ಲಾ ಸಹಕಾರ ಸಂಘಗಳನ್ನು ಬಿಟ್ಟು ಉಳಿದೆಲ್ಲ ಸಹಕಾರ ಸಂಘಗಳ ಕ್ಷೇತ್ರ) ಇವರುಗಳು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ದ.ಕ. ಜಿಲ್ಲೆಯ ಉಪನಿಬಂಧಕ ಎಚ್‌.ಎನ್‌ ರಮೇಶ್‌ ಹಾಜರಿದ್ದರು. ಸಹಕಾರ ಸಂಘಗಳ ದ.ಕ. ಜಿಲ್ಲಾ ಸಹಾಯಕ ಉಪನಿಬಂಧಕ ಸುಧೀರ್‌ ಕುಮಾರ್‌ ಚುನಾವಣಾ ಪ್ರಕ್ರಿಯೆ ನೆರವೇರಿಸಿದರು.
    ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಪುತ್ತೂರಿನ ಇರ್ದೆ ಗ್ರಾಮದ ಬಾಲ್ಯೊಟ್ಟು ನಿವಾಸಿಯಾಗಿದ್ದು, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಎಂಟು ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ, ಇರ್ದೆ ಹಾಗೂ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಂದ್ರ್ ತೀರ್ಥ ಅಭಿವೃದ್ಧಿ ಸಮಿತಿಯ ಸಂಚಾಲಕರಾಗಿ, ಪೆರ್ಲತ್ತಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಇರ್ದೆ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿ, ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾಗಿ, ಸಾರ್ವಜನಿಕ ಶಾರದೋತ್ಸವ ಸಮಿತಿಯಲ್ಲಿ 23 ವರ್ಷ ಅಧ್ಯಕ್ಷರಾಗಿ, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಸ್ಥಾಪನಾ ಸಮಿತಿ ಕೋಶಾಧಿಕಾರಿಯಾಗಿ, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಪುತ್ತೂರು ಸೌಹಾರ್ದ ಸಹಕಾರಿಯ ಉಪಾಧ್ಯಕ್ಷರಾಗಿ, ಪುತ್ತೂರು ಟಿ.ಪಿ.ಎಂ.ಎಸ್ ನಿರ್ದೇಶಕರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಮೂರನೇ ಬಾರಿ ನಿರ್ದೇಶಕರಾಗಿದ್ದಾರೆ.

    ಡಾ.ಎಸ್‌.ಆರ್‌ ಹರೀಶ್‌ ಆಚಾರ್ಯ ಅಭಿನಂದನೆ
    ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶಶಿಕುಮಾರ್‌ ರೈ ಬಾಲ್ಯೊಟ್ಟು ಹಾಗೂ ನೀಲಯ ಎಂ.ಅಗರಿ ಅವರನ್ನು ಸಹಕಾರ ಅಭಿವೃದ್ಧಿ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ, ವಿಶ್ವಕರ್ಮ ಬ್ಯಾಂಕ್‌ ಅಧ್ಯಕ್ಷ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅಭಿನಂದಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Chitharanjan Bolar Co Operative ministry Cooperative Cooperative Department Cooperative Registrar Dr. S R Harish Acharya Neelaya Agari Padamashekhra Jain Shashikumar balyottu Souharda Sahakari Spandana Cooperative Spandana NEws
    Previous Articleಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಮದ್ದಡ್ಕದಲ್ಲಿ ಉದ್ಘಾಟನೆ
    Next Article ಸಹಕಾರ ಕ್ಷೇತ್ರಕ್ಕೆ ಅವಿಭಜಿತ ದ.ಕ. ಜಿಲ್ಲೆ ಅಪಾರ ಕೊಡುಗೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.