Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಕ್ಷೇತ್ರಕ್ಕೆ ಅವಿಭಜಿತ ದ.ಕ. ಜಿಲ್ಲೆ ಅಪಾರ ಕೊಡುಗೆ
    News

    ಸಹಕಾರ ಕ್ಷೇತ್ರಕ್ಕೆ ಅವಿಭಜಿತ ದ.ಕ. ಜಿಲ್ಲೆ ಅಪಾರ ಕೊಡುಗೆ

    adminBy adminJanuary 6, 2025

    ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಕಲ್ಲಡ್ಕ ಸ್ಥಳಾಂತರಿತ ಶಾಖೆ ಉದ್ಘಾಟಿಸಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅಭಿಪ್ರಾಯ

    ಮಂಗಳೂರು: ಅವಿಭಜಿತ ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ ಬೆಳೆದಿರುವ ಬ್ಯಾಂಕ್ ಇದ್ದರೆ ಅದು ಎಸ್ಸಿಡಿಸಿಸಿ ಬ್ಯಾಂಕ್ ಮಾತ್ರ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಕಾರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು.

    ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಕಲ್ಲಡ್ಕ ಶಾಖೆ ವಿನೂತನ ಸೌಲಭ್ಯದೊಂದಿಗೆ ಕಲ್ಲಡ್ಕದ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿದ್ದು ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

    https://chat.whatsapp.com/Ge11n7QCiMj5QyPvCc0H19

    ಜಿಲ್ಲೆಯಲ್ಲಿ ಕೃಷಿಕರು ಯಾರು ಕೂಡಾ ಬ್ಯಾಂಕ್ ಸಾಲ ಕೊಟ್ಟಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಂಡ ಉದಾಹರಣೆಗಳಿಲ್ಲ. ಹಾಗೆಯೇ ನಮ್ಮ ಜಿಲ್ಲೆಯಲ್ಲಿ ಶೇ.100ರಷ್ಟು ಕೃಷಿ ಸಾಲ ಮರುಪಾವತಿಯಾಗುತ್ತಿದೆ. ಮಹಿಳೆಯರ ಸ್ವಾವಲಂಬನೆಗಾಗಿ ನಮ್ಮ ಬ್ಯಾಂಕ್ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.2025ಕ್ಕೆ ನಮ್ಮ ಸ್ವಸಹಾಯ ಗುಂಪುಗಳಿಗೆ 25 ವರ್ಷ ತುಂಬುತ್ತಿದೆ. ಈ ಸಂದರ್ಭದಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿತ್ತಿದ್ದು, ಮಹಿಳೆಯರಿಗೆ ಹೊಸ ಸಮವಸ್ತ್ರ ವಿತರಿಸಲಾಗುತ್ತದೆ ಎಂದು ತಿಳಿಸಿದರು.

    33 ವರ್ಷಗಳ ಹಿಂದೆ ಸ್ಥಾಪನೆಯಾದ ಎಸ್ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖೆಯು ಗ್ರಾಹಕರಿಗೆ ವಿನೂತನ ಸೇವೆಯನ್ನು ಒದಗಿಸುವ ದೃಷ್ಟಿಯಿಂದ ಈ ಶಾಖೆಯನ್ನು ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಕಲ್ಲಡ್ಕದ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.ಕಲ್ಲಡ್ಕ ಶಾಖೆ ಸುಮಾರು 6 ಕೋಟಿ ರೂ.ಠೇವಣಿ, 225 ಖಾತೆಯನ್ನು ಹೊಂದಿದ್ದು, 230 ಸ್ವ-ಸಹಾಯ ಗುಂಪುಗಳಿವೆ. ಸೇವೆಯ ಕಲ್ಪನೆಯಲ್ಲಿ ಮತ್ತೆ ಹೊಸ 8 ಗುಂಪುಗಳು ಆರಂಭಗೊಂಡಿದೆ ಎಂದರು.

    ಮುಖ್ಯ ಅತಿಥಿ ಮಾಜಿ ಶಾಸಕ ರುಕ್ಮಯ ಪೂಜಾರಿ ಮಾತನಾಡಿ, ಬೆಳೆಯುತ್ತಿರುವ ಕಲ್ಲಡ್ಕದಲ್ಲಿ ಇಂತಹ ಗ್ರಾಹಕ ಸ್ನೇಹಿ ಸುಸಜ್ಜಿತ ಬ್ಯಾಂಕ್ ನ ಅವಶ್ಯಕತೆ ಇತ್ತು. ಗ್ರಾಹಕರು ಬ್ಯಾಂಕ್ ನ ಎಲ್ಲ ಸೇವೆಯನ್ನು ಬಳಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬೇಕು ಎಂದರು.

    ಮಾಜಿ ಶಾಸಕ, ಕಲ್ಲಡ್ಕ ರೈತ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಮಾತಾಡಿ, ನಗರ ಪ್ರದೇಶವಾಗಿ ಬೆಳೆಯುತ್ತಿರುವ ಕಲ್ಲಡ್ಕದಲ್ಲಿ ಸುಮಾರು 15ರಷ್ಟು ಸಹಕಾರ ಸಂಘ, ಬ್ಯಾಂಕ್, ಫೈನಾನ್ಸ್ ಹೀಗೆ ಹಣಕಾಸು ಸಂಸ್ಥೆಗಳಿವೆ. ಕಲ್ಲಡ್ಕ ಪೇಟೆಯನ್ನು ಉಳಿಸಿಕೊಂಡು ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದಿಂದ ಪ್ಲೈಓವರ್ ನಿರ್ಮಿಸಲಾಗಿದ್ದು, ಇದರ ಕಾಮಗಾರಿ ಪೂರ್ಣಗೊಂಡ ಬಳಿಕ ಕಲ್ಲಡ್ಕಕ್ಕೆ ಹೊಸ ಮೆರಗು ಸಿಗಲಿದೆ ಎಂದರು.

    ಶಾಖಾ ಕಟ್ಟಡದ ಮಾಲಕ ವರದರಾಯ ಪ್ರಭು ಅವರನ್ನು ಸನ್ಮಾನಿಸಲಾಯಿತು.ಶಾಖಾ ವ್ಯವಸ್ಥಾಪಕಿ ಮೀನಾಕ್ಷಮ್ಮ, ವಿಟ್ಲ ವಲಯ ಮೇಲ್ವಿಚಾರಕ ಯೋಗೀಶ್ ಎಚ್, ಬ್ಯಾಂಕಿನಸ್ವಸಹಾಯ ಸಂಘಗಳ ಮೇಲ್ವಿಚಾರಕ ರಂಜಿತ್ ಕುಮಾರ್ ಎ., ಬ್ಯಾಂಕಿನ ಬಂಟ್ವಾಳ ವಲಯ ಮೇಲ್ವಿಚಾರಕ ಕೀರ್ತಿರಾಜ್ ಅವರನ್ನು ಅಭಿನಂದಿಸಲಾಯಿತು. ನವೋದಯ ವಲಯ ಮೇಲ್ವಿಚಾರಕರು ಹಾಗೂ ಪ್ರೇರಕರನ್ನು ಗೌರವಿಸಲಾಯಿತು.ಬ್ಯಾಂಕ್ ನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಜಯರಾಮ್ ರೈ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಸ್ಕ್ಯಾಡ್ಸ್ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ರವೀಂದ್ರ ಕಂಬಳಿ, ಬ್ಯಾಂಕಿನಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

    ಬ್ಯಾಂಕಿನ ಹಿರಿಯ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್ ಸ್ವಾಗತಿಸಿದರು. ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ವಂದಿಸಿದರು. ಅಮ್ಟಾಡಿ ಪ್ರಾ.ಸ.ಪ.ನ ಲೊರೆಟ್ಟೋ ಶಾಖೆಯ ವ್ಯವಸ್ಥಾಪಕ ದಿನೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.ನೂತನ ಕಲ್ಲಡ್ಕ ಶಾಖೆಯು ಸಂಪೂರ್ಣ ಗಣಕೀಕೃತಗೊಂಡಿದ್ದು ಆರ್ ಟಿಜಿಎಸ್, ನೆಫ್ಟ್, ರೂಪೇ ಕಾರ್ಡ್ ಸೌಲಭ್ಯ ಹಾಗೂ ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ಕಾರ್ಯ ನಿರ್ವಹಿಸಲಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Previous Articleದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಶಶಿಕುಮಾರ್‌ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ನೀಲಯ ಎಂ.ಅಗರಿ ಆಯ್ಕೆ
    Next Article ಜನರ ಆರೋಗ್ಯದ ಬಗ್ಗೆ ಆತ್ಮಶಕ್ತಿ ಸಹಕಾರಿ ಸಂಘ ಕಾಳಜಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.