Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಮಾಜಕ್ಕೆ ಬೇಕಿದೆ ಶ್ರೀಶಾ ಸೌಹಾರ್ದದಂಥ ನಿಸ್ವಾರ್ಥ ಸೇವೆಯ ಸೊಸೈಟಿಗಳು
    News

    ಸಮಾಜಕ್ಕೆ ಬೇಕಿದೆ ಶ್ರೀಶಾ ಸೌಹಾರ್ದದಂಥ ನಿಸ್ವಾರ್ಥ ಸೇವೆಯ ಸೊಸೈಟಿಗಳು

    adminBy adminJanuary 7, 2025

    ಬೃಹತ್‌ ವೈದ್ಯಕೀಯ ಶಿಬಿರ ಉದ್ಘಾಟಿಸಿ ಚಿತ್ರಾಪುರ ಶ್ರೀ ವಿದ್ಯೇಂದ್ರ ಶ್ರೀಪಾದರು ಅಭಿಪ್ರಾಯ

    ಮಂಗಳೂರು: ಮನುಷ್ಯನಿಗೆ ಆರೋಗ್ಯವೇ ನಿಜವಾದ ಭಾಗ್ಯ. ಪ್ರಸ್ತುತ ಕಾಲಘಟ್ಟದಲ್ಲಿ ಆರೋಗ್ಯದ ಚಿಕೆತ್ಸೆಗಳು ತುಂಬಾ ವೆಚ್ಚದಾಯಕ. ಆದ್ದರಿಂದ ಎಲ್ಲರೂ ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಶ್ರೀಶಾ ಸೊಸೈಟಿ ಆಯೋಜಿಸುತ್ತಿರುವ ಇಂತಹ ಉಚಿತ ಆರೋಗ್ಯ ತಪಾಸಣಾ -ಚಿಕಿತ್ಸಾ ಶಿಬಿರದ ಸದುಪಯೋಗ ಎಲ್ಲರೂ ಪಡೆಯಬೇಕು. ಶ್ರೀಶಾ ಸೊಸೈಟಿಯ ಸೇವಾ ಕಾರ್ಯಗಳನ್ನು ನಾವು ಹತ್ತಿರದಿಂದ ಗಮನಿಸುತ್ತಿದ್ದೇವೆ. ಇಂತಹ ನಿಷ್ಕಾಮ, ನಿಸ್ವಾರ್ಥ ಸೇವಾ ಮನೋಭಾವದ ಸಹಕಾರ ಸಂಘಗಳು ಸಮಾಜಕ್ಕೆ ಅವಶ್ಯವಾಗಿವೆ ಎಂದು ಜಗದ್ಗುರು ಚಿತ್ರಾಪುರ ಶ್ರೀ ಮಧ್ವಾಚಾರ್ಯ ಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯೇಂದ್ರ ಶ್ರೀಪಾದರು ಅಭಿಪ್ರಾಯಪಟ್ಟರು.

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರತಿ ತಿಂಗಳ ಮೊದಲ ಭಾನುವಾರ ಆಯೋಜಿಸುವ ಬೃಹತ್ ಉಚಿತ ಆರೋಗ್ಯ-ದಂತ-ಕಣ್ಣಿನ-ತಪಾಸಣಾ-ಚಿಕಿತ್ಸಾ ಶಿಬಿರದ ಜನವರಿ ತಿಂಗಳ ಶಿಬಿರವನ್ನು ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಚಿತ್ರಾಪುರ ಮಠ ಹಾಗೂ ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ, ಇವುಗಳ ಸಹಯೋಗದಲ್ಲಿ ಮಂಗಳೂರಿನ ಚಿತ್ರಾಪುರ ಮಠದ ಆವರಣದಲ್ಲಿ ಉದ್ಘಾಟಿಸಿ ಮಾತನಾಡಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಪ್ರಾಸ್ತಾವಿಕ ಮಾತನಾಡಿದ ಶ್ರೀಶಾ ಸೊಸೈಟಿ ಅಧ್ಯಕ್ಷ ಎಂ.ಎಸ್.ಗುರುರಾಜ್, ಶ್ರೀಶಾ ಸೊಸೈಟಿ ಕಳೆದ ಐದು ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸೊಸೈಟಿಯು ತಾನು ಗಳಿಸಿದ ಲಾಭದ ದೊಡ್ಡ ಪಾಲನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಅವರ ಶಿಕ್ಷಣ ಹಾಗೂ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಈ ಬಗೆಯ ಶಿಬಿರಗಳೂ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸರ್ಕಾರಿ ಕನ್ನಡ ಮಾಧ್ಯಮದ 100 ಶಾಲೆಗಳ ಗ್ರಂಥಾಲಯಗಳಿಗೆ 10,000 ಪುಸ್ತಕಗಳನ್ನು ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಉತ್ತೇಜಿಸುವ ಉದ್ದೇಶದಿಂದ ನೀಡಲಾಗುತ್ತಿದ್ದು, ಈಗಾಗಲೇ 5000 ಪುಸ್ತಕಗಳನ್ನು 50 ಶಾಲೆಗಳಿಗೆ ನೀಡಲಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ದತ್ತು ಪಡೆದು ಅವರ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ಭರಿಸುವುದು ಸೇರಿದಂತೆ ಹಲವಾರು ಸೇವಾ ಕಾರ್ಯಗಳನ್ನು ಮಾಡುತ್ತಿದೆ. ಇಂದಿನ ಈ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆಗೆ ಚಿತ್ರಾಪುರ ಕ್ಷೇತ್ರ ಸಂಪೂರ್ಣ ಸಹಕಾರ ನೀಡಿದೆ. ಗುರುಗಳ ಸಂಪೂರ್ಣ ಅನುಗ್ರಹ ನಮ್ಮ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ ಎಂದರು.
    ಮುಖ್ಯ ಅತಿಥಿ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಕರ್ಕೇರ ಮಾತನಾಡಿ, ಶ್ರೀ ಮಠ ಹಾಗೂ ದೇವಸ್ಥಾನ ಎಂದಿಗೂ ಇಂತಹ ಸಮಾಜಮುಖಿ ಕಾರ್ಯಗಳಿಗೆ ಸಹಕಾರ ನೀಡುತ್ತಾ ಬಂದಿದೆ. ಇಂತಹ ಶಿಬಿರಗಳು ಇಂದಿನ ಅವಶ್ಯಕತೆಯಾಗಿದ್ದು ಶಿಬಿರಗಳನ್ನು ನಿರಂತರವಾಗಿ ಆಯೋಜಿಸುತ್ತಿರುವ ಶ್ರೀಶಾ ಸೊಸೈಟಿಯ ಕೊಡುಗೆ ಅಪಾರ ಎಂದರು.


    ಮಂಗಳೂರಿನ ಅತ್ತಾವರ ಕೆಎಂಸಿ ಆಸ್ಪತ್ರೆ ಹಾಗೂ ದೇರಳಕಟ್ಟೆ ಯೇನಪೊಯ ದಂತ ಕಾಲೇಜಿನ ನುರಿತ, ಅನುಭವಿ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದರು. ಒಟ್ಟು 345 ರೋಗಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು. ಕಣ್ಣಿನ ಸಮಸ್ಯೆ ಇದ್ದ 85 ಜನರಿಗೆ ಸ್ಥಳದಲ್ಲೇ ಉಚಿತವಾಗಿ ಕನ್ನಡಕಗಳನ್ನು ಹಾಗೂ ಔಷಧಿಗಳನ್ನು ಉಚಿತವಾಗಿ ನೀಡಲಾಯಿತು. 36 ಜನರಿಗೆ ಇಸಿಜಿ ಮಾಡಲಾಗಿದ್ದು ಹೆಚ್ಚಿನ ಚಿಕಿತ್ಸೆ ಅವಶ್ಯಕತೆಯುಳ್ಳವರನ್ನು ಬುಧವಾರ KMC ಅತ್ತಾವರ ಆಸ್ಪತ್ರೆಗೆ ಹಾಗೂ ಹಲ್ಲಿನ ಸಮಸ್ಯೆಯುಳ್ಳವರಿಗೆ ದೇರಳಕಟ್ಟೆ ಯೆನೆಪೋಯ ದಂತ ಆಸ್ಪತ್ರೆಗೆ ಬರಲು ಸೂಚಿಸಲಾಗಿದೆ. ಅನೇಕರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆಯ ಆವಶ್ಯಕತೆಯಿದ್ದು ಅವರಿಗೆ ಸಂಪೂರ್ಣ ಉಚಿತವಾಗಿ ಶಸ್ತ್ರಚಿಕತ್ಸೆ ಮಾಡಲಾಗುತ್ತದೆ.
    ಶ್ರೀಶಾ ಸೊಸೈಟಿಯ ಉಪಾಧ್ಯಕ್ಷ ಉದಯ ವಿ.ಶಾಸ್ತ್ರಿ, ನವದುರ್ಗ ಸೇವಾ ವೃಂದದ ಅಧ್ಯಕ್ಷ ಸುರೇಶ್ ರಾವ್,ಚಿತ್ರಾಪುರ ಮಠದ ವ್ಯವಸ್ಥಾಪಕ ಕೆ.ಎಲ್.ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು. ಶ್ರೀಶಾ ಸೊಸೈಟಿಯ ನಿರ್ದೇಶಕ ಹಾಗೂ ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ, ಮಂಗಳಾದೇವಿ, ಇದರ ಸಂಚಾಲಕ ಸುರೇಶ್ ಬೈಂದೂರ್ ಶಿಬಿರವನ್ನು ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Chitrapura Health Camp KMC M S Gururaj Shreesha Souharda Co Operative Society Vidyendra Shreepadaru
    Previous Articleಜನರ ಆರೋಗ್ಯದ ಬಗ್ಗೆ ಆತ್ಮಶಕ್ತಿ ಸಹಕಾರಿ ಸಂಘ ಕಾಳಜಿ
    Next Article ಲಾಭದಾಯಕ ಜೊತೆಗೆ ಸಮಾಜಮುಖಿ ಕಾರ್ಯ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.