Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಅವರಿಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನೆ
    News

    ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಅವರಿಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನೆ

    adminBy adminJanuary 8, 2025

    ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳಿಗೆ ಮಾರ್ಗದರ್ಶನ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ನೂತನ ಅಧ್ಯಕ್ಷ ಆಯ್ಕೆಗೊಂಡಿರುವ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಉಪಾಧ್ಯಕ್ಷ ನೀಲಯ ಎಂ.ಅಗರಿ ಅವರನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದಿಸಿದ್ದಾರೆ.
    ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಸಹಕಾರ ಕ್ಷೇತ್ರದಲ್ಲಿ ಶಿಕ್ಷಣ, ತರಬೇತಿ ಹಾಗೂ ಪ್ರಚಾರಕ್ಕೆ ಹೆಚ್ಚು ಒತ್ತು ನೀಡಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ನೂತನ ಅಧ್ಯಕ್ಷ ಶಶಿಕುಮಾರ್ ರೈ ಸಾರಥ್ಯದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಿ ರಾಜ್ಯದ ಇತರ ಜಿಲ್ಲಾ ಸಹಕಾರಿ ಯೂನಿಯನ್‌ಗಳಿಗೆ ಮಾದರಿಯಾಗಲಿ ಎಂದು ಶುಭ ಹಾರೈಸಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಶಿಕುಮಾರ್ ರೈ, ಜಿಲ್ಲಾಮಟ್ಟದ ಸಹಕಾರಿ ಸಂಸ್ಥೆಯೊಂದನ್ನು ಮುನ್ನಡೆಸುವ ಸುಯೋಗವನ್ನು ನಮ್ಮ ಮಾರ್ಗದರ್ಶಕರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಕಲ್ಪಿಸಿಕೊಟ್ಟಿದ್ದಾರೆ. ಹಾಗಾಗಿ ನನ್ನ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಅವರ ವಿಶ್ವಾಸ ಉಳಿಸಿಕೊಂಡು, ಅವರ ಮಾರ್ಗದರ್ಶನದಲ್ಲೇ ಮಾದರಿ ಕಾರ್ಯಕ್ರಮಗಳನ್ನು ರೂಪಿಸಿ ಸಹಕಾರಿ ಯೂನಿಯನ್ ಅನ್ನು ಮುನ್ನಡೆಸುತ್ತೇನೆ ಎಂದರು.
    ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಿ.ಪದ್ಮಶೇಖರ್ ಜೈನ್, ಡಾ.ಎಸ್.ಆರ್. ಹರೀಶ್ ಆಚಾರ್ಯ, ಚಿತ್ತರಂಜನ್ ಬೋಳಾರ್, ವಿಷ್ಣು ಭಟ್ ಬಿ. ಸತೀಶ್ ಕೆ., ಜೊಯ್ಲಸ್ ವಿಲ್ಫ್ರೆಡ್‌ ಡಿಸೋಜ, ಸುಧಾಕರ ಪಿ.ಶೆಟ್ಟಿ, ಮಂಜುನಾಥ್ ಎನ್.ಎಸ್, ಸವಿತಾ ಎನ್.ಶೆಟ್ಟಿ, ಕೆ.ಸಂಜೀವ ಪೂಜಾರಿ, ಪ್ರವೀಣ್ ಗಿಲ್ಬರ್ಟ್ ಪಿಂಟೊ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Dakshina kannada jilla Sahakara Union Dr. M.N Rajendrakumar Neelaya Agari SCDCC Bank Shashikumar Rai balyottu
    Previous Articleಲಾಭದಾಯಕ ಜೊತೆಗೆ ಸಮಾಜಮುಖಿ ಕಾರ್ಯ
    Next Article ಸಫಲ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಸಂಜೀವ ಅಡ್ಯಾರ್‌ ಪುನರಾಯ್ಕೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.