ಮೂಡುಬಿದಿರೆ: ಗ್ರಾಮ ಸಮೃದ್ದಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಹೊಸಂಗಡಿ, ಶ್ರೀ ಜಗದ್ಗುರು ರಾಘವೇಂದ್ರ ಚಾರಿಟಬಲ್ ಟ್ರಸ್ಟ್ ಕರಿಂಜೆ, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಹಾಗೂ ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ ಇವುಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣ ಹೊಸಂಗಡಿ ಇಲ್ಲಿ ಉಚಿತ ಆರೋಗ್ಯ -ದಂತ -ಕಣ್ಣಿನ -ತಪಾಸಣಾ -ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು.
https://chat.whatsapp.com/Ge11n7QCiMj5QyPvCc0H19
ಮಂಗಳೂರಿನ ಅತ್ತಾವರ ಕೆ.ಎಂ.ಸಿ. ಆಸ್ಪತ್ರೆ ಹಾಗೂ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇಲ್ಲಿನ ನುರಿತ, ಅನುಭವಿ ವೈದ್ಯರು ಈ ಶಿಬಿರದಲ್ಲಿ ಭಾಗವಹಿಸಿದ್ದರು. ಒಟ್ಟು 200ಕ್ಕೂ ಹೆಚ್ಚಿನ ರೋಗಿಗಳು ಈ ಶಿಬಿರದ ಸದುಪಯೋಗ ಪಡೆದುಕೊಂಡರು. ಕಣ್ಣಿನ ಸಮಸ್ಯೆ ಇದ್ದ 45 ಜನರಿಗೆ ಸ್ಥಳದಲ್ಲೇ ಉಚಿತವಾಗಿ ಕನ್ನಡಕಗಳನ್ನು ಹಾಗೂ ಎಲ್ಲಾ ಖಾಯಿಲೆಗಳಿಗೆ ಔಷಧಿಗಳನ್ನು ಉಚಿತವಾಗಿ ನೀಡಲಾಯಿತು. 50 ಜನರಿಗೆ ರಕ್ತ ತಪಾಸಣೆ ಮಾಡಲಾಗಿದ್ದು ಹೆಚ್ಚಿನ ಚಿಕಿತ್ಸೆ ಆವಶ್ಯಕತೆಯುಳ್ಳ 25 ಜನರನ್ನು ಬುಧವಾರ KMC ಅತ್ತಾವರ ಆಸ್ಪತ್ರೆಗೆ ಬರಲು ಸೂಚಿಸಲಾಗಿದೆ. ಅನೇಕರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ಅವಶ್ಯಕತೆಯಿದ್ದು ಅವರಿಗೆ ಸಂಪೂರ್ಣ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ.
ಹೊಸಂಗಡಿ ಗ್ರಾಮ ಪಂಚಾಯತ್ ಜಗದೀಶ್ ಹೆಗ್ಡೆ ಶಿಬಿರ ಉದ್ಘಾಟಿಸಿದರು. ಪಿಡಿಒ ಗಣೇಶ್ ಶೆಟ್ಟಿ, ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ನೂಯಿ, ಕೆಎಂಸಿ ಆಸ್ಪತ್ರೆಯ ಪಿಆರ್‌ಒ ಹರ್ಬರ್ಟ್ ಉಪಸ್ಥಿತರಿದ್ದರು. ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ, ಮಂಗಳಾದೇವಿ ಇದರ ಸಂಚಾಲಕ ಸುರೇಶ್ ಬೈಂದೂರ್ ಶಿಬಿರದ ಬಗ್ಗೆ ಮಾಹಿತಿ ನೀಡಿ ಶಿಬಿರ ನಿರ್ವಹಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com