ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಬಂಧಿತ ಮೂವರು ಆರೋಪಿಗಳ ಪೈಕಿ ಒಬ್ಬನಿಗೆ ಪೊಲೀಸರು ಗುಂಡು ಹಾರಿಸಿದ್ದಾಗಿ ವರದಿಯಾಗಿದೆ.
https://chat.whatsapp.com/Ge11n7QCiMj5QyPvCc0H19
ಮಂಗಳವಾರ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದ್ದಾಗಿ ತಿಳಿದು ಬಂದಿದೆ.
ಮುಂಬೈ ಚೆಂಬೂರು ನಿವಾಸಿ ಮಣಿಕಣ್ಣನ್ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಕರ್ನಾಟಕ ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಯತ್ನ ನಡೆಸಿದ್ದ ಎಂದು ವರದಿಯಾಗಿದೆ.