ಬೆಳ್ತಂಗಡಿ: ಇಲ್ಲಿನ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಆಶಾಕಿರಣ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಸಂಘದ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಜನವರಿ 23ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.
https://chat.whatsapp.com/Ge11n7QCiMj5QyPvCc0H19
ಬೆಳ್ತಂಗಡಿಯ ಹೋಲಿ ರೆಡಿಮೀರ್ ಚರ್ಚ್‌ನ ಫಾ.ವಾಲ್ಟರ್ ಡಿಮೆಲ್ಲೊ ಆಶೀರ್ವಚನ ನೀಡಲಿದ್ದಾರೆ. ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೋ ಅಧ್ಯಕ್ಷತೆಯಲ್ಲಿ ಶಾಸಕ ಹರೀಶ್ ಪೂಂಜ ಆಶಾಕಿರಣ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮಾಡಲಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂಘದ ಪ್ರಧಾನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಆಡಳಿತ ಮಂಡಳಿಯ ಸಭಾಂಗಣ ಉದ್ಘಾಟನೆ ಮಾಡುವರು. ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್.ಎನ್.ರಮೇಶ್ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಸಹಕಾರ ಸಂಘಗಳ ಪುತ್ತೂರು ಉಪವಿಭಾಗದ ಸಹಾಯಕ ನಿಬಂಧಕ ಎಸ್.ಎಂ ರಘು, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ನೋಟರಿ ವಕೀಲರು ಸೇವಿಯರ್ ಪಾಲೇಲಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಘದ ಉಪಾಧ್ಯಕ್ಷ ಡೆನಿಸ್ ಸಿಕ್ವೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐವನ್ ಗೊನ್ಸಾಲ್ವಿಸ್, ಆಡಳಿತ ಮಂಡಳಿ ನಿರ್ದೇಶಕರಾದ ಜೇಮ್ಸ್ ಡಿಸೋಜ, ಜೋಸೆಫ್ ಪೀಟರ್ ಸಲ್ಡಾನ್ಹಾ, ಹೆರಾಲ್ಡ್ ಪಿಂಟೊ, ಅಲ್ಫೋನ್ಸ್ ರೋಡ್ರಿಗಸ್, ವಿನ್ಸೆಂಟ್ ಪ್ರಕಾಶ್ ಪಿಂಟೊ, ತೋಮಸ್ ಆರ್.ನೊರೋನ್ಹಾ, ಪ್ರಸಾದ್ ಪಿಂಟೊ, ರಫಾಯಲ್ ವೇಗಸ್, ಪೌಲಿನ್ ರೇಗೊ, ಪ್ಲಾವಿಯಾ ಡಿಸೋಜ, ನಾಮನಿರ್ದೇಶಕರಾದ ವಿನಯ್ ಜಾನ್ಸನ್ ಡಿಸೋಜ, ರಿಯೋ ಮೈಕಲ್ ರೋಡ್ರಿಗಸ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com