Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದೇಶದ ಐಕ್ಯತೆ, ಸೌಹಾರ್ದಕ್ಕೆ ಶ್ರಮ, ಆತ್ಮಾವಲೋಕನ
    News

    ದೇಶದ ಐಕ್ಯತೆ, ಸೌಹಾರ್ದಕ್ಕೆ ಶ್ರಮ, ಆತ್ಮಾವಲೋಕನ

    adminBy adminJanuary 27, 2025

    ಹಿರೇಕೆರೂರು ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎಸ್‌.ಬಿ ತಿಪ್ಪಣ್ಣ ಪ್ರತಿಪಾದನೆ

    ಹಿರೇಕೆರೂರು: 26 ರಾಜ್ಯಪ್ರಭುತ್ವವು ಅಂತ್ಯವಾಗಿ ಭಾರತದಲ್ಲಿ ಸಂವಿಧಾನವನ್ನು ಸ್ಥಾಪಿಸಿದ ದಿನವೇ ಭಾರತೀಯರೆಲ್ಲರೂ ಹೆಮ್ಮೆಪಡುವಂತಹ ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. 75 ವರ್ಷಗಳ ಭಾರತದ ಇತಿಹಾಸ ನೋಡಿದಾಗ ಆಡಳಿತ ಮಾಡಿದ ಎಲ್ಲ ಸರಕಾರಗಳು ಭಾರತದ ಐಕ್ಯತೆ ಹಾಗೂ ಸೌಹಾರ್ದಕ್ಕೆ ಶ್ರಮಿಸಿರುವುದನ್ನು ನಾವೆಲ್ಲ ಅರ್ಥ ಮಾಡಿಕೊಂಡು ದೇಶ ನಮಗೇನು ಕೊಟ್ಟಿದೆ ಎಂಬುದು ಮುಖ್ಯವಲ್ಲ ನಾವು ದೇಶಕ್ಕೆ ಏನು ಕೊಟ್ಟಿರುತ್ತೇವೆ ಎಂದು ಆತ್ಮಾವಲೋಕನ ಮಾಡಿಕೊಂಡು ಮುನ್ನಡೆಯಬೇಕು ಎಂದು ಹಿರೇಕೆರೂರು ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಎಸ್.ಬಿ.ತಿಪ್ಪಣ್ಣ ಹೇಳಿದರು.

    https://chat.whatsapp.com/Ge11n7QCiMj5QyPvCc0H19
    ಹಿರೇಕೆರೂರು ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಅಧೀನ ಶಾಲಾ-ಕಾಲೇಜುಗಳ ಸಹಯೋಗದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಂದೇಶ ನೀಡಿದರು.
    ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶ್ರೀಧರ ಮಾತನಾಡಿ ಭಾರತ ದೇಶ ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯದ ಮೂಲ ತತ್ವಗಳನ್ನು ಪಾಲಿಸಿಕೊಂಡು ವಿಶ್ವದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿ ಬೆಳೆಯುತ್ತಿರುವುದು ದೇಶದ ಪ್ರಗತಿಯ ಸಂಕೇತವಾಗಿದೆ. ಭಾರತೀಯರಾದ ನಾವು ನಮ್ಮ ಕಾರ್ಯವನ್ನು ಶ್ರದ್ಧೆ, ನಿಷ್ಠೆ, ತ್ಯಾಗದಿಂದ ಪ್ರಾಮಾಣಿಕವಾಗಿ ಮಾಡಿದಾಗ ದೇಶ ಮತ್ತಷ್ಟು ಸದೃಡವಾಗಲು ಸಹಕಾರಿಯಾಗುತ್ತದೆ ಎಂದರು.


    ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್.ಎಸ್.ಪಾಟೀಲ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಭಾರತ, ವಿಶ್ವದ ಅಗ್ರಪಂಕ್ತಿ ರಾಷ್ಟ್ರಗಳ ಸಾಲಿನಲ್ಲಿದೆ. ಅದಕ್ಕೆ ಭಾರತದ ಆರ್ಥಿಕ ಅಭಿವೃದ್ದಿ ಸದೃಢವಾಗಿರುವುದೇ ಸಾಕ್ಷಿ. ವಿದ್ಯಾರ್ಥಿಗಳು ಭವ್ಯ ಭಾರತದ ಭವಿಷ್ಯಕ್ಕೆ ತಮ್ಮನ್ನು ಎಲ್ಲ ಕ್ಷೇತ್ರಗಳಲ್ಲಿ ಸಮರ್ಪಿಸಿಕೊಂಡಾಗ ಮಾತ್ರ ಭಾರತ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕರೆ ನೀಡಿದರು.
    ಮುಖ್ಯ ಅತಿಥಿ ಜೆ.ಬಿ.ತಂಬಾಕದ, ಆಡಳಿತಾಧಿಕಾರಿ ಎಸ್.ವೀರಭದ್ರಯ್ಯ ಗಣರಾಜ್ಯೋತ್ಸವ ಸಂದೇಶ ನೀಡಿದರು. ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಲಿಂಗರಾಜ ಚಪ್ಪರದಳ್ಳಿ ಎನ್.ನಿಂಗನಗೌಡ್ರ ವಿ.ಸಿ.ಹೊಗೆಸೊಪ್ಪಿನವರ, ಶೋಭಾ ಅಂಗಡಿ, ಯು.ಎಸ್.ಕಳಗೊಂಡದ ಬಿ.ಜಿ.ಬಣಕಾರ, ಅಂಬಿಕಾ, ಅಧೀನ ಶಾಲಾ ಕಾಲೇಜುಗಳ ಮುಖ್ಯಸ್ಥರು ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡ್ಡಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Hirekerura Thaluka Vidyavardhaka Souharda Sahakari Sangha Hirekeruru TAPCMS Hirekeruru Thaluku Vidyavardhaka Souharda Sahakari Sangha J B Thambakada Republic Day S B Thippanna S S Pateela
    Previous Articleಆತ್ಮಶಕ್ತಿ ಸಹಕಾರಿ ಸಂಘದಿಂದ ಕುದ್ರೋಳಿಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ
    Next Article ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷರಾಗಿ ಚಂದ್ರಶೇಖರ್‌ ಕುಮಾರ್‌ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.