ಬಂಟ್ವಾಳ: ಸವಾಲುಗಳನ್ನು ಎದುರಿಸಲು ರೈತರು ಸರಿಯಾದ ಜ್ಞಾನ ಪಡೆಯಲು ತರಬೇತಿ ಪಡೆಯುವುದು ಬಹಳ ಅಗತ್ಯ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.
ಅವರು ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘ ನಿಯಮಿತ ಅಣ್ಣಳಿಕೆ ಬಂಟ್ವಾಳ, ನೇತ್ರಾವತಿ ಕೃಷಿಕರ ಅಭಿವೃದ್ಧಿ ಸಂಘಗಳ ಒಕ್ಕೂಟ ಬ೦ಟ್ವಾಳ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೋ ಹಿಲ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಬಂಟ್ವಾಳ ಅಣ್ಣಳಿಕೆ ಮಹಾಗಣಪತಿ ಸೌಧದ ಸಭಾಂಗಣದಲ್ಲಿ ಅಡಿಕೆ ತೋಟದಲ್ಲಿ ಸಮಗ್ರ ಪೋಷಕಾಂಶ ಹಾಗೂ ಕೀಟರೋಗ ನಿಯಂತ್ರಣ ಮತ್ತು ಅಂತರ ಬೆಳೆ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
https://chat.whatsapp.com/Ge11n7QCiMj5QyPvCc0H19
ಸಂಪನ್ಮೂಲ ವ್ಯಕ್ತಿಗಳಾಗಿ ಬಂಟ್ವಾಳ ತೋಟಗಾರಿಕೆ ಇಲಾಖೆಯ ಹಿರಿಯ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ವಿಟ್ಲ ಇದರ ವಿಜ್ಞಾನಿ ಡಾ.ಭವಿಷ್ ಮಾಹಿತಿ ಕಾರ್ಯಾಗಾರ ನಡೆಸಿದರು. ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಅರಳ ಮಾವಂತೂರು ಪ್ರಗತಿಪರ ಕೃಷಿಕ ದುರ್ಗಾದಾಸ್ ಶೆಟ್ಟಿ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಸೀತಾಳ ರಾಯಿ, ದಿಶಾ ಟ್ರಸ್ಟ್ ಕೈಕಂಬ ಇದರ ಸಂಯೋಜಕ ನಿಹಾಲ್ ಮಚಾದೋ, ಗುರುಪುರ ಕೈಕಂಬ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ನೋರ್ಬಟ್ ಸಿಕ್ವೇರ, ನೇಸರ ಕೇಂದ್ರೀಯ ಸಮನ್ವಯ ಸಮಿತಿ ಗುರುಪುರ ಕೈಕಂಬ ಇದರ ಅಧ್ಯಕ್ಷ ರಮೇಶ್ ಹೆಗ್ಡೆ ಬೆಳ್ಳಿಬೆಟ್ಟು ಗುತ್ತು ಮುಖ್ಯ ಅತಿಥಿಗಳಾಗಿದ್ದರು.
ನೇತ್ರಾವತಿ ಕೃಷಿಕರ ಅಭಿವೃದ್ಧಿ ಸಂಘಗಳ ಒಕ್ಕೂಟ ಬಂಟ್ವಾಳ ಇದರ ಅಧ್ಯಕ್ಷ ರೂಪಾ ಎಲ್.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನೇತ್ರಾವತಿ ಒಕ್ಕೂಟದ ಗೌರವಾಧ್ಯಕ್ಷ ಚಂದಪ್ಪ ಮೂಲ್ಯ ಪ್ರಾಸ್ತಾವಿಕ ಮಾತನಾಡಿದರು. ನೇತ್ರಾವತಿ ಒಕ್ಕೂಟ ಸದಸ್ಯೆ ಸುಮಿತ್ರಾ ಆರ್.ಶೆಟ್ಟಿಗಾರ್ ಪ್ರಾರ್ಥಿಸಿದರು. ಒಕ್ಕೂಟದ ಉಪಾಧ್ಯಕ್ಷ ದೇವಪ್ಪ ಕುಲಾಲ್ ಸ್ವಾಗತಿಸಿ, ಕಾರ್ಯದರ್ಶಿ ಮಂಜುಳಾ ಶೆಟ್ಟಿ ಬಡಗಬೆಳ್ಳೂರು ವಂದಿಸಿ ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com