ಉಡುಪಿ: ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್ ಆಯ್ಕೆಯಾಗಿದ್ದಾರೆ.
https://chat.whatsapp.com/Ge11n7QCiMj5QyPvCc0H19
ಯೂನಿಯನ್ ನಿರ್ದೇಶಕ, ಶಾಸಕ ಯಶ್‌ಪಾಲ್ ಎ.ಸುವರ್ಣ, ನಿರ್ದೇಶಕರಾದ ಎಚ್.ಗಂಗಾಧರ ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಬಿ.ಕರುಣಾಕರ ಶೆಟ್ಟಿ, ಪ್ರಸಾದ್ ಎಸ್.ಶೆಟ್ಟಿ, ಸುಧೀರ್ ವೈ, ಬಿ.ಪ್ರದೀಪ್ ಯಡಿಯಾಳ್, ಅನಿಲ್ ಎಸ್.ಪೂಜಾರಿ, ಅಲೆವೂರು ಹರೀಶ್ ಕಿಣಿ, ಬಿ.ಅರುಣ್ ಕುಮಾರ್ ಹೆಗ್ಡೆ, ಶ್ರೀಧರ್ ಪಿ.ಎಸ್., ಸಹಕಾರ ಸಂಘಗಳ ಉಪನಿಬಂಧಕಿ ಕೆ.ಆರ್. ಲಾವಣ್ಯ, ಜಿಲ್ಲಾ ಸಹಕಾರ ಯೂನಿಯನ್ ಸಿಇಒ ಅನುಷಾ ಕೋಟ್ಯಾನ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನೂತನ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್ ಅವರನ್ನು ಯೂನಿಯನ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪರವಾಗಿ ಅಭಿನಂದಿಸಲಾಯಿತು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com