ಮಂಗಳೂರು: ವಜ್ರಮಹೋತ್ಸವ ಸಂಭ್ರಮ ಆಚರಣೆಯಲ್ಲಿರುವ ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ಇದರ ವಜ್ರಮಹೋತ್ಸವ ಪ್ರಯುಕ್ತ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ರಿ. ಸುರತ್ಕಲ್, ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ರಿ. ಕೃಷ್ಣಾಪುರ, ಶ್ರೀ ಕಾಳಿಕಾಂಬಾ ದೇವಸ್ಥಾನ ಕುಳಾಯಿ, ಶ್ರೀ ವಿಶ್ವಬ್ರಾಹ್ಮಣ ಯುವ ಬಳಗ ಕಾಟಿಪಳ್ಳ-ಕೃಷ್ಣಾಪುರ, ವಿಶ್ವಕರ್ಮ ಸಮಾಜ ಸೇವಾ ಸಂಘ ಕುಳಾಯಿ, ವಿಶ್ವಬ್ರಾಹ್ಮಣ ಯುವ ಸೇವಾದಳ ಕುಳಾಯಿ ಇವರ ಸಹಕಾರದೊಂದಿಗೆ ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರ ಮತ್ತು ಕೆ.ಎಂ.ಸಿ. ಆಸ್ಪತ್ರೆ, ಬಿ.ಆರ್.ಅಂಬೇಡ್ಕರ್ ವೃತ್ತ, ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಸುರತ್ಕಲ್‌ನ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದಲ್ಲಿ ಇತ್ತೀಚೆಗೆ ನಡೆಯಿತು.
https://chat.whatsapp.com/EbVKVnWB6rlHT1mWtsgbch
ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆಯಲ್ಲಿ ವೈದ್ಯಕೀಯ ಶಿಬಿರವನ್ನು ಡಾ| ಅಮಲ್ ಉದ್ಘಾಟಿಸಿದರು. ಸುರತ್ಕಲ್ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಶಾಂತ್ ಆಚಾರ್ಯ ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ರಿ., ಕೃಷ್ಣಾಪುರದ ಅಧ್ಯಕ್ಷ ಸುಧಾಕರ ಆಚಾರ್ಯ ಶುಭ ಹಾರೈಸಿದರು. ಶ್ರೀ ಕಾಳಿಕಾಂಬಾ ದೇವಸ್ಥಾನ ಕುಳಾಯಿ ಇದರ ಅಧ್ಯಕ್ಷ ಶ್ರೀ ಡಿ. ಯೋಗೀಶ್ ಆಚಾರ್ಯ, ವಿಶ್ವಕರ್ಮ ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷ ಸತೀಶ ಆಚಾರ್ಯ, ವಿಶ್ವಬ್ರಾಹ್ಮಣ ಯುವ ಬಳಗ ಕಾಟಿಪಳ್ಳ- ಕೃಷ್ಣಾಪುರ ಇದರ ಅಧ್ಯಕ್ಷ ಉದಯ ಆಚಾರ್ಯ, ವಿಶ್ವಬ್ರಾಹ್ಮಣ ಯುವ ಸೇವಾದಳ ಕುಳಾಯಿ ಇದರ ಅಧ್ಯಕ್ಷ ಸಚ್ಚಿದಾನಂದ ಆಚಾರ್ಯ ಗೌರವ ಉಪಸ್ಥಿತಿಯಲ್ಲಿದ್ದರು.
ಸಂಸ್ಥೆಯ ನಿರ್ದೇಶಕ ವೈ.ವಿ.ವಿಶ್ವಜ್ಞಮೂರ್ತಿ ಪ್ರಾರ್ಥಿಸಿದರು. ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ಮಲ್ಲಪ್ಪ ಎನ್.ಪತ್ತಾರ್, ರೋಹಿಣಿ ಎಂ.ಪಿ., ರಮೇಶ್ ರಾವ್ ಯು. ಉಪಸ್ಥಿತರಿದ್ದರು. 180 ಮಂದಿ ಉಚಿತ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿದ್ದರು. ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಶಿಬಿರಕ್ಕೆ ಭೇಟಿ ನೀಡಿ ಸಂಸ್ಥೆಯ ಸಮಾಜಮುಖಿ ಕೆಲಸದ ಬಗ್ಗೆ ಶ್ಲಾಘಿಸಿ ಶುಭ ಹಾರೈಸಿದರು. ನಿರ್ದೇಶಕ ಕೆ.ಪ್ರಕಾಶ ಆಚಾರ್ಯ ವಂದಿಸಿದರು. ಸಂಸ್ಥೆಯ ಸಿಬ್ಬಂದಿ ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com