ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಸಹಕಾರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 17ರಂದು ಬೆಳಗ್ಗೆ 10.30ರಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
https://chat.whatsapp.com/EbVKVnWB6rlHT1mWtsgbch
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂಎನ್.ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್.ನವೀನ್, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್.ಎನ್.ರಮೇಶ್, ಎಸ್‌ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ಉಪಾಧ್ಯಕ್ಷ ನೀಲಯ ಎಂ.ಅಗರಿ, ಸಿಇಒ ಎಸ್.ವಿ.ಹಿರೇಮಠ ಉಪಸ್ಥಿತರಿರಲಿದ್ದಾರೆ.
ಸಹಕಾರ ಕಾಯ್ದೆಯ ಸ್ವರೂಪ, ಆಡಳಿತ ಮಂಡಳಿ ಸದಸ್ಯರ ಹಕ್ಕು ಮತ್ತು ಜವಾಬ್ದಾರಿಯ ಬಗ್ಗೆ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಸಿಆರ್‌ಆರ್, ಎಸ್‌ಎಲ್‌ಆರ್, ಸಿಆರ್‌ಎಆರ್, ಎನ್‌ಪಿಎ, ಐಎನ್‌ಬಿಪಿ, ಪಿಎಲ್‌ಗಳ ಬಗ್ಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ್ ನಾಯರ್ ವಿಷಯ ಮಂಡಿಸಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com