Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಫೆ.24ರಂದು ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅಭಿವಂದನಾ ಸಮಾರಂಭ
    News

    ಫೆ.24ರಂದು ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅಭಿವಂದನಾ ಸಮಾರಂಭ

    adminBy adminFebruary 18, 2025

    ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಜನ್ಮದಿನ ಪ್ರಯುಕ್ತ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ 

    ಮಂಗಳೂರು: ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆಸಲು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿಗಳು ತೀರ್ಮಾನಿಸಿದ್ದು ಆ ಪ್ರಯುಕ್ತ ಮಂಗಳೂರಿನಲ್ಲಿ ಫೆ.24ರಂದು ಅಭಿವಂದನಾ ಸಮಾರಂಭ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಗುರುತಿಸಿಕೊಂಡಿದ್ದು, ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಾಮಾಣಿಕ ಸಾರ್ಥಕತೆ ಕಂಡ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ’ ರಾಜೇಂದ್ರ ಕುಮಾರ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ಅಂಗವಾಗಿ ಫೆ.24ರಂದು ಬೆಳಗ್ಗೆ 10.30ಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದು ಅಭಿವಂದನಾ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
    ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿ ಮಾಡಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆ ರೂಪಿಸಿ, ಎಲ್ಲರಿಗೂ ಮಾರ್ಗದರ್ಶಕರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 76 ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಸಹಕಾರ ಕ್ಷೇತ್ರ ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ, ಈ ಕಾರ್ಯಕ್ರಮದಲ್ಲಿ ಸವಲತ್ತು ವಿತರಿಸಲಾಗುವುದು.
    ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್‌ ಉದ್ಘಾಟಿಸಲಿದ್ದಾರೆ. ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಎಂ.ಎನ್‌.ರಾಜೇಂದ್ರ ಕುಮಾ‌ರ್ ಅಭಿವಂದನೆ ಸ್ವೀಕರಿಸಲಿದ್ದಾರೆ. ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್.ವಿನಯ್‌ ಹೆಗ್ಡೆಯವರು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಲಿದ್ದಾರೆ. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿವಂದನಾ ಭಾಷಣ ಮಾಡಲಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾ.ರೆ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ದೇವಿಪ್ರಸಾದ್‌ ಶೆಟ್ಟಿ ಬೆಳಪು ಮಾಹಿತಿ ನೀಡಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Banking Co Operative ministry Cooperative Cooperative Department Cooperative Registrar Deviprasad Shetty Belapu Dr.M.N.Rajendra Kumar Sahakara Spandana SCDCC Bank Souharda Sahakari Spandana NEws
    Previous Articleಸಹಕಾರಿಗಳ ವೇಗವರ್ಧಕ ಸಮಿತಿ ಅಸ್ತಿತ್ವಕ್ಕೆ
    Next Article ಗುರುಪುರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ವಿನೋದಾ ಡಿ.ಅಂಚನ್‌ ಅವಿರೋಧ ಆಯ್ಕೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.