ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ನೂತನ ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಮುಂದಿನ 3 ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಹಣಕಾಸು ಕಾರ್ಯದರ್ಶಿ ಆಗಿದ್ದ ತುಹಿನ್ ಕಾಂತ ಪಾಂಡೆ ಅವರು ಮೂರು ವರ್ಷಗಳ ಅವಧಿಗೆ ಸೆಬಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ ಈ ನೇಮಕ ನಡೆದಿದೆ. ಸೆಬಿ ಹಾಲಿ ಮುಖ್ಯಸ್ಥ ಮಾಧಬಿ ಪುರಿ ಬುಚ್ ಅವರ ಅಧಿಕಾರಾವಧಿ ಮಾ.1 ರಂದು ಕೊನೆಗೊಳ್ಳಲಿದೆ. ಇವರು 2022ರ ಮಾ.2ರಂದು ಸೆಬಿಯ ಮೊದಲ ಮಹಿಳಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.
ತುಹಿನ್ ಕಾಂತ ಪಾಂಡೆ ಅವರು ಪ್ರಸ್ತುತ ಹಣಕಾಸು ಸಚಿವಾಲಯದಲ್ಲಿ ಹಿರಿಯ ಅಧಿಕಾರಿಗಳಲ್ಲಿ ಒಬ್ಬರಾಗಿದ್ದು, ತೆರಿಗೆ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಇವರು ಏರ್ ಇಂಡಿಯಾ ಖಾಸಗೀಕರಣ ಹಾಗೂ ಎಲ್‌ಐಸಿ ಸಂಸ್ಥೆ ಸಾರ್ವಜನಿಕ ಹೂಡಿಕೆಯಲ್ಲಿ ಸೇರಲು ಪ್ರಮುಖ ಪಾತ್ರ ವಹಿಸಿದ್ದರು.
ತುಹಿನ್ ಕಾಂತ್ ಪಾಂಡೆ 1987ರ ಬ್ಯಾಚ್ ಒಡೀಶಾ ಕೇಡರ್‌ನ ಐಎಎಸ್ ಅಧಿಕಾರಿ. ಅವರು ಮೋದಿ 3.0 ಸರ್ಕಾರದಲ್ಲಿ ಭಾರತದ ಅತ್ಯಂತ ಕಾರ್ಯನಿರತ ಕಾರ್ಯದರ್ಶಿಗಳಲ್ಲಿ ಒಬ್ಬರು. ಅವರು ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ನಾಲ್ಕು ಪ್ರಮುಖ ಇಲಾಖೆಗಳನ್ನು ನಿರ್ವಹಿಸುತ್ತಿದ್ದಾರೆ. ಅವರನ್ನು ಸೆಪ್ಟೆಂಬರ್ 7, 2024 ರಂದು ಹಣಕಾಸು ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com