ಬೆಳ್ತಂಗಡಿ: ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ಒ, ಕುಕ್ಕಿನಡ್ಕ ಮನೆತನದ ಹಿರಿಯರಾದ ಎನ್.ಪದ್ಮನಾಭ ಮಾಣಿಂಜ (87) ವಯೋ ಸಹಜ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ನಿಧನ ಹೊಂದಿದರು.
https://chat.whatsapp.com/EbVKVnWB6rlHT1mWtsgbch
ಪದ್ಮನಾಭ ಮಾಣಿಂಜ ಅವರು ಮಾಜಿ ಶಾಸಕ ದಿ.ಕೆ.ವಸಂತ ಬಂಗೇರ ಅವರ ನಿಕಟವರ್ತಿಯಾಗಿದ್ದು, ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಬೆಳವಣಿಗೆಯಲ್ಲಿ ಇವರಿಬ್ಬರ ಪಾತ್ರ ಪ್ರಮುಖವಾಗಿತ್ತು. ಗುರುದೇವ ಸಹಕಾರ ಸಂಘವನ್ನು ಆರ್ಥಿಕವಾಗಿ ಬಲಿಷ್ಠ ಸಹಕಾರ ಸಂಘವಾಗಿಸುವ ಜತೆಗೆ ಜಿಲ್ಲೆ ಹೊರೆ ಜಿಲ್ಲೆಗಳಲ್ಲೂ ಶಾಖೆಗಳನ್ನು ತೆರೆಯುವ ಮೂಲಕ ಬಿಲ್ಲವ ಸಮುದಾಯದಲ್ಲಿ ಮೇರು ನಾಯಕರಾಗಿ ಬೆಳೆದಿದ್ದರು. ಕೆ.ವಸಂತ ಬಂಗೇರರೊಂದಿಗೆ ಉತ್ತಮ ಸಂಬಂಧ ಹೊಂದಿದ ಇವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು. ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಪ್ರಗತಿಯ ಹಿಂದೆ ಪದ್ಮನಾಭ ಮಾಣಿಂಜರವರ ದೂರದೃಷ್ಟಿ ಚಿಂತನೆ ಮಹತ್ತರವಾದದು. ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ, ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಸರಳ, ನೇರ ನಿಷ್ಟುರವಾದಿ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪತ್ನಿ ಇಂದಿರಾ, ಪುತ್ರರಾದ ಸೂರಜ್, ಸುಧೀರ್, ಸುಜಿತ್, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಪದ್ಮನಾಭ ಮಾಣಿಂಜ ರವರ ಪಾರ್ಥೀವ ಶರೀರದ ಅಂತಿಮ ದರ್ಶನ 12 ಗಂಟೆಯ ತನಕ ಬಲ್ಮಠದ “ಇಂದುಪದ್ಮ” ನಿವಾಸದಲ್ಲಿ ನಡೆಯಲಿದ್ದು, ಅನಂತರ ಪುಂಜಾಲಕಟ್ಟೆ ಮಾಣಿಂಜದ ಸ್ವಗೃಹದಲ್ಲಿ 4 ಗಂಟೆಯ ತನಕ ಅಂತಿಮ ದರ್ಶನ ನಡೆದು ಅಂತಿಮ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.