ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಸದಸ್ಯ ಪ್ರದೀಪ್ ಕುಮಾರ್ ಸುವರ್ಣ ಹಾಗೂ ಗೋಪಾಲ್ ಅಮೀನ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರದೀಪ್ ಕುಮಾರ್ ಸುವರ್ಣ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಸಿಬ್ಬಂದಿಗಳ ಕೊರತೆ ಇರುವುದರಿಂದ ನಾವು ಅಲ್ಲಿ ತೆರಳದೆ ಸಹಕಾರಿ ಸಂಸ್ಥೆಗಳತ್ತ ಆಕರ್ಷಿತರಾಗುತ್ತಿದ್ದೇವೆ. ಅದರಲ್ಲೂ ಆತ್ಮಶಕ್ತಿಯ ಸಿಬ್ಬಂದಿಗಳು ಎಟಿಎಂಗಿಂತಲೂ ಅತಿ ವೇಗದಲ್ಲಿ ಸೇವೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆತ್ಮಶಕ್ತಿಯ ಸಹಕಾರಿ ತನ್ನ ಸ್ವಂತ ಅಪ್ಲಿಕೇಶನ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಗುಣಮಟ್ಟದ ಸೇವೆ ನೀಡುವಂತಾಗಲಿ” ಎಂದು ಶುಭ ಹಾರೈಸಿದರು.
https://chat.whatsapp.com/EbVKVnWB6rlHT1mWtsgbch
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ “ಬಜ್ಪೆ ಶಾಖೆ ಆರಂಭಗೊಂಡು ೧೧ ವರ್ಷಗಳ ಈ ಸಂದರ್ಭ ಗ್ರಾಹಕರ ಸಭೆ ಆಯೋಜಿಸಿದ್ದೇವೆ. ೧೧ ವರ್ಷಗಳಿಂದ ಎಲ್ಲಾ ವರ್ಗದ ಗ್ರಾಹಕರು ಸಹಕರಿಸುತ್ತ ಶಾಖೆಯು ಉತ್ತಮ ವ್ಯವಹಾರ ಸಾಧಿಸಲು ಕಾರಣೀಕರ್ತರಾಗಿದ್ದಾರೆ. ಸಂಘವು ಠೇವಣಿದಾರರ ಸುರಕ್ಷತೆ ದೃಷ್ಟಿಯಿಂದ ಭದ್ರತಾ ಸಾಲಗಳಿಗೆ ಹೆಚ್ಚು ಒತ್ತು ಕೊಟ್ಟು, ಚಿನ್ನಾಭರಣ ಸಾಲ ನೀಡಲು ಹೆಚ್ಚು ಪ್ರೋತ್ಸಾಹ ನೀಡುತ್ತಿದೆ. ಹಾಗೆಯೇ ಗ್ರಾಹಕರಿಗೆ ತಮ್ಮ ತುರ್ತು ಅಗತ್ಯಗಳಿಗಾಗಿ ವೈಯಕ್ತಿಕ ಸಾಲವಾಗಿ ಸಣ್ಣ ಪ್ರಮಾಣದ ಮೈಕ್ರೋ ಸಾಲ ನೀಡಲಾಗುತ್ತಿದೆ. ಸರಕಾರ ಯಶಸ್ವಿನಿ ಯೋಜನೆಯ ನೋಂದಣಿಯು ಈ ತಿಂಗಳ ಅಂತ್ಯದವರೆಗೆ ಅಂದರೆ ಮಾರ್ಚ್ ೩೧ರ ತನಕ ಲಭ್ಯವಿದ್ದು, ಸಂಘದ ಸದಸ್ಯರು ಇದರ ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿದರು.
ಸಂಘದ ಸದಸ್ಯರಾದ ಗೋಪಾಲ್ ಅಮೀನ್, ಬಾಲಕೃಷ್ಣ ಸುವರ್ಣ, ರತ್ನಾಕರ್ ಬಿ.ಕೆ , ಹಾಗೂ ವಿನೋದರ ಪೂಜಾರಿ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದರು. ಬಜ್ಪೆ ಶಾಖೆಯ ಸಿಬ್ಬಂದಿಯಾದ ಸ್ವಾತಿ ಸ್ವಾಗತಿಸಿ, ಅನುಜಿತ ವಂದಿಸಿದರು. ಶಾಖಾಧಿಕಾರಿ ರವಿಕಲಾ ಕಾರ್ಯಕಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com