ನವದೆಹಲಿ: ದೇಶದಲ್ಲಿ 8.32 ಲಕ್ಷ ನೋಂದಾಯಿತ ಸಹಕಾರ ಸಂಘಗಳ ಪೈಕಿ 45,811 ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದರು.
https://chat.whatsapp.com/EbVKVnWB6rlHT1mWtsgbch
ರಾಷ್ಟ್ರೀಯ ಸಹಕಾರಿ ದತ್ತಸಂಚಯದ ಪ್ರಕಾರ, 6.37 ಲಕ್ಷ ಸಂಘಗಳು ಸಹಕಾರಿ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದರೆ, 1.50 ಲಕ್ಷಕ್ಕೂ ಹೆಚ್ಚು ಸಂಘಗಳು ಕಾರ್ಯನಿರ್ವಹಿಸುತ್ತಿಲ್ಲ. 2021ರ ಜುಲೈನಲ್ಲಿ ಸಹಕಾರ ಸಚಿವಾಲಯ ಸ್ಥಾಪನೆಯಾದ ಬಳಿಕ ಸಹಕಾರಿ ವಲಯವನ್ನು ಬಲಪಡಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಬಜೆಟ್ ಹಂಚಿಕೆಯಲ್ಲೂ ಹೆಚ್ಚಳವಾಗಿದೆ ಎಂದು ಅಂಕಿ ಅಂಶಗಳ ಸಹಿತ ಅಮಿತ್ ಷಾ ರಾಜ್ಯಸಭೆಯ ಮುಂದಿಟ್ಟರು. ಕೇಂದ್ರ
ಸರ್ಕಾರದ ನಿರಂತರ ಬೆಂಬಲ ಮತ್ತು ಸುಧಾರಣಾ ನೀತಿಗಳ ಮೂಲಕ ಸಹಕಾರಿ ವಲಯವನ್ನು ಪುನರುಜ್ಜೀವನಗೊಳಿಸುವ ಗುರಿ ಹೊಂದಲಾಗಿದೆ ಎಂದು ಅಮಿತ್ ಷಾ ಹೇಳಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com