ಬೆಂಗಳೂರು: ನಂದಿನಿ ಪ್ಯಾಕೆಟ್ ಹಾಲಿನ ದರವನ್ನು ರಾಜ್ಯ ಸರ್ಕಾರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳ ಮಾಡಿದ್ದು, ರಾಜ್ಯ ಸಚಿವ ಸಂಪುಟ ಇದಕ್ಕೆ ಅನುಮೋದನೆ ನೀಡಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿನ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಆದರೆ ಇದೀಗ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
https://chat.whatsapp.com/EbVKVnWB6rlHT1mWtsgbch
ಬೆಲೆ ಹೆಚ್ಚಳದ ಬಳಿಕ ನೀಲಿ ಪ್ಯಾಕೆಟ್ ಹಾಲು – 44 ರೂ. ನಿಂದ 48 ರೂ., ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ., ಸಮೃದ್ಧಿ ಹಾಲಿನ ಪ್ಯಾಕೆಟ್ 56 ರೂ. ನಿಂದ 60 ರೂ., ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ., ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ. ಆಗಲಿದೆ.
ಈ ಮೊದಲು 6ರಿಂದ 8 ರೂ. ತನಕ ಹಾಲಿನ ದರ ಹೆಚ್ಚಳಕ್ಕೆ ಒಕ್ಕೂಟಗಳು ಪ್ರಸ್ತಾಪಿಸಿದ್ದವು. ಆದರೆ ಸೋಮವಾರದ ಸಭೆಯಲ್ಲಿ ಸಿಎಂ ಈ ದರಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಹಾಲಿನ ದರ ಹೆಚ್ಚಳ ಹಣ ಕೇವಲ ರೈತರಿಗಷ್ಟೇ ಇರಲಿ ಎಂದಿದ್ದರು. ಆದರೆ ಸಭೆಯ ಬಳಿಕ 5 ರೂ.ಯಾದರೂ ಹೆಚ್ಚಳ ಮಾಡಿ, ಅದರಲ್ಲಿ 3 ರೂ. ರೈತರಿಗೆ, 2 ರೂ. ಒಕ್ಕೂಟಗಳಿಗೆ ಇರಲಿ ಎಂದು ಪ್ರಸ್ತಾಪಿಸಿದ್ದರು. ಆದರೆ ಗುರುವಾರದ ಕ್ಯಾಬಿನೆಟ್ ಸಭೆಯಲ್ಲಿ 4 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com