ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಸಹಕಾರಿ ಧುರೀಣ, ಜಾನಪದ ಕಲಾವಿದ, ಶಿಕಾರಿಪುರ ಹೊಸಮೇದಾರಕೇರಿ ಶ್ರೀ ಕನಕ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಿ.ಆರ್ ಪರಶುರಾಮ್ ಚೌಟಗಿ ಅವರಿಗೆ ಕೆಂಗಲ್ ಹನುಮಂತಯ್ಯ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ವೇಜನ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ವತಿಯಿಂದ ನಡೆದ ಸಮಾರಂಭದಲ್ಲಿ ಪರಶುರಾಮ್ ಚೌಟಗಿ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪುರಸ್ಕಾರ ನೀಡಲಾಯಿತು.
ಶಿವಮೊಗ್ಗ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸೂಗೂರು, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಶಿವಮೊಗ್ಗ, ಪತಂಜಲಿ ಕರ್ನಾಟಕ ಜಾನಪದ ಕಲಾಕೇಂದ್ರ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆ ಸೂಗೂರು, ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟ ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘಗಳ ಒಕ್ಕೂಟ, ಪತಂಜಲಿ ಸೂಗೂರು ಶಾಖೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಸಮಸ್ತ ಗ್ರಾಮಸ್ಥರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾನಪದ ಕಲಾಮೇಳದಲ್ಲಿ ಜಾನಪದ ಕ್ಷೇತ್ರದ ಸಾಧನೆಗಾಗಿ ಪರಶುರಾಮ್ ಚೌಟಗಿ ಅವರಿಗೆ ಸಹ್ಯಾದ್ರಿ ಮಲೆನಾಡು ಜಾನಪದ ಕಲಾಸೇವಾ ರತ್ನ ರಾಜ್ಯ ಪುರಸ್ಕಾರ ನೀಡಿ ಗೌರವಿಸಲಾಗಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com