ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವ ಮಾರ್ಚ್ 29ರಂದು ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಸಭಾಂಗಣದಲ್ಲಿ ನಡೆಯಲಿದ್ದು ಈ ವೇಳೆ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು.
https://chat.whatsapp.com/EbVKVnWB6rlHT1mWtsgbch
ಕೊಣಾಜೆಯ ಮಂಗಳೂರು ವಿವಿ ಆಡಳಿತ ಸೌಧದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿವಿ ಕುಲಪತಿ ಪ್ರೊ.ಧರ್ಮ ಈ ಬಗ್ಗೆ ಮಾಹಿತಿ ನೀಡಿ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಉದ್ಯಮಿಗಳಾದ ರೋಹನ್ ಮೊಂತೇರೊ ಹಾಗೂ ಕನ್ಯಾನ ಸದಾಶಿವ ಶೆಟ್ಟಿ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ ಎಂದು ಪ್ರಕಟಿಸಿದರು.
ಘಟಿಕೋತ್ಸವದಲ್ಲಿ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಉಪಾಧ್ಯಕ್ಷ ಹಾಗೂ ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿ.ಎನ್.ರಾಜಶೇಖರನ್ ಪಿಳ್ಳೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.
ಸಹಕಾರ ಕ್ಷೇತ್ರದಲ್ಲಿ ಸುಮಾರು 40 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಡಾ.ಎಂ.ಎನ್ ರಾಜೇಂದ್ರ ಕುಮಾರ್ 30 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 85 ಶಾಖೆಗಳನ್ನು ತೆರೆದು ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ಕಲ್ಪಿಸಿಕೊಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿರುವುದಲ್ಲದೆ, ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ-ಆಪರೇಟಿವ್ ಲಿಮಿಟೆಡ್ (IFFCO) ಇದರ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತ, ಸಹಕಾರಿ ಆಂದೋಲನ ಮತ್ತು ಅದರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ಮುಖಾಂತರ ಸುಮಾರು 35,000ಕ್ಕಿಂತಲೂ ಅಧಿಕ ನವೋದಯ ಸ್ವ-ಸಹಾಯ ಸಂಘಗಳನ್ನು ರಚಿಸಿ, ಸುಮಾರು 3,50,000 ಮಹಿಳೆಯರನ್ನು ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com