ದೇಶದಲ್ಲಿ 2,02,521 ಸಂಘಟಿತ ಡೈರಿ ಸಹಕಾರ ಸಂಘಗಳು, ದಿನಕ್ಕೆ 60,654 ಸಾವಿರ ಕೆಜಿ ಹಾಲು ಸಂಗ್ರಹ: ರಾಜ್ಯಸಭೆಯಲ್ಲಿ ಅಮಿತ್ ಷಾ ಹೇಳಿಕೆ
ನವದೆಹಲಿ: ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್‌ಡಿಡಿಬಿ) ಒದಗಿಸಿದ ಮಾಹಿತಿಯ ಪ್ರಕಾರ 2023-24ರ ಸಾಲಿನಲ್ಲಿ ಭಾರತದಲ್ಲಿ 2,02,521 ಸಂಘಟಿತ ಡೈರಿ ಸಹಕಾರ ಸಂಘಗಳಿದ್ದು, ದಿನಕ್ಕೆ ಒಟ್ಟು 60,654 ಸಾವಿರ ಕೆಜಿಯಷ್ಟು ಹಾಲು ಸಂಗ್ರಹಿಸಲಾಗುತ್ತಿದೆ.
https://chat.whatsapp.com/EbVKVnWB6rlHT1mWtsgbch
‘ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ಕಾಯ್ದೆ, 1987’ರ ಅಡಿಯಲ್ಲಿ ಸ್ಥಾಪಿಸಲಾದ ಎನ್‌ಡಿಡಿಬಿ ರಾಷ್ಟ್ರೀಯ ಮಟ್ಟದ ಪ್ರಮುಖ ಸಂಸ್ಥೆಯಾಗಿದೆ. ರಾಷ್ಟ್ರವ್ಯಾಪಿ ಡೈರಿ ಮತ್ತು ಹಾಲು ಉತ್ಪನ್ನಗಳಿಗೆ ಸಂಬಂಧಿತ ಕೈಗಾರಿಕೆಗಳ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ಉತ್ತೇಜಿಸುವುದು, ಯೋಜಿಸುವುದು ಮತ್ತು ಸಂಘಟಿಸುವಲ್ಲಿ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದರು.
ಎನ್‌ಡಿಡಿಬಿಯು ಡೈರಿ ವಲಯದಲ್ಲಿ ಸಹಕಾರಿ ಕಾರ್ಯತಂತ್ರಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುತ್ತದೆ ಮತ್ತು ಸಹಕಾರಿಗೆ ಸಂಬಂಧಿಸಿದ ಆದೇಶಗಳನ್ನು ಕಾರ್ಯಗತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಸಹಕಾರಿ ಉಪಕ್ರಮಗಳ ಮೂಲಕ ಭಾರತದ ಡೈರಿ ವಲಯವನ್ನು ಬಲಪಡಿಸಲು, ಸುಸ್ಥಿರ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ದೇಶಾದ್ಯಂತ ಲಕ್ಷಾಂತರ ರೈತರಿಗೆ ಪ್ರಯೋಜನ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಅಮಿತ್ ಷಾ ಹೇಳಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com